Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಚಲುವರಾಯಸ್ವಾಮಿ ವಿರುದ್ಧದ ಅಧಿಕಾರಿಗಳ ಪತ್ರ ಪ್ರಕರಣ, ಸಿಐಡಿ ತನಿಖೆಗೆ ವಹಿಸಲು ತೀರ್ಮಾನ

ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿಬಂದಿದ್ದು, ಅಧಿಕಾರಿಗಳು ರಾಜ್ಯಪಾಲರಿಗೆ ಪತ್ರ ಬರೆದಿದ್ದು ಅಸಲಿಯೋ, ನಕಲಿಯೋ ಎಂಬ ಚರ್ಚೆ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ, ಕೃಷಿ ಅಧಿಕಾರಿಗಳ ಪತ್ರದ ಬಗ್ಗೆ ಸಿಐಡಿ ತನಿಖೆಗೆ ನೀಡಲು ತೀರ್ಮಾನಿಸಿದೆ.

ಸಚಿವ ಚಲುವರಾಯಸ್ವಾಮಿ ವಿರುದ್ಧದ ಅಧಿಕಾರಿಗಳ ಪತ್ರ ಪ್ರಕರಣ, ಸಿಐಡಿ ತನಿಖೆಗೆ ವಹಿಸಲು ತೀರ್ಮಾನ
ಕೃಷಿ ಸಚಿವ ಚಲುವರಾಯಸ್ವಾಮಿ
Follow us
ಪ್ರಸನ್ನ ಗಾಂವ್ಕರ್​
| Updated By: ರಮೇಶ್ ಬಿ. ಜವಳಗೇರಾ

Updated on:Aug 08, 2023 | 2:29 PM

ಬೆಂಗಳೂರು.ಮಂಡ್ಯ, (ಆಗಸ್ಟ್ 08): ಮಂಡ್ಯದ  (Mandya) 7 ಸಹಾಯಕ ಕೃಷಿ ನಿರ್ದೇಶಕರು ಕೃಷಿ ಸಚಿವ ಚಲುವರಾಯಸ್ವಾಮಿ(Chaluvarayaswamy) ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ರಾಜ್ಯಪಾಲರಿಗೆ ದೂರು ನೀಡಿರುವ ಪತ್ರ ವೈರಲ್ ಆಗಿದೆ. ಇದೀಗ ಇದು ರಾಜ್ಯ ರಾಜಕಾರಣದಲ್ಲಿ ಸೃಷ್ಟಿಸಿದ್ದು, ಈ ಪತ್ರ (Letter) ಅಸಲಿಯೋ? ನಕಲಿಯೋ ಎನ್ನುವುದು ಒಂದು ತಿಳಿಯುತ್ತಿಲ್ಲ. ವಿರೋಧ ಪಕ್ಷಗಳು ಇದು ಅಸಲಿ ಪತ್ರವಾಗಿದ್ದು, ಸರ್ಕಾರ ಇದರಿಂದ ನುಣುಚಿಕೊಳ್ಳಲು ನಕಲಿ ಪತ್ರ ಎಂದು ಬಿಂಬಿಸುತ್ತಿದೆ ಎಂದು ವಾಗ್ದಾಳಿ ನಡೆಸಿದೆ. ಈ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ಸಿಐಡಿಗೆ ವಹಿಸಲು ಸರ್ಕಾರ ತೀರ್ಮಾನಿಸಿದೆ. ಈ ಬಗ್ಗೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ ಪರಮೇಶ್ವರ್​ ಅವರು ಗೌಪ್ಯವಾಗಿ ಚರ್ಚೆ ಮಾಡಿದ್ದು, ಸಿಐಡಿ ತನಿಖೆಗೆ ವಹಿಸಲು ನಿರ್ಧರಿಸಿದ್ದು, ಸರ್ಕಾರದಿಂದ ಅಧಿಕೃತ ಆದೇಶ ಹೊರಬೀಳುವುದೊಂದೇ ಬಾಕಿ ಇದೆ.

ಇದನ್ನೂ ಓದಿ: ಸಚಿವ ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ದೂರು ಪ್ರಕರಣಕ್ಕೆ ಹೊಸ ತಿರುವು, ಪೊಲೀಸರಿಂದ ತನಿಖೆ ಆರಂಭ

ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ.ಪರಮೇಶ್ವರ್​ ಅವರು ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಚರ್ಚೆ ನಡೆಸಿದರು. ಜಿಲ್ಲಾ ಶಾಸಕರ ಸಭೆಗೂ ಮುನ್ನ ಗೃಹಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಭೇಟಿ ಮಾಡಿ ಜತೆ ಪರಮೇಶ್ವರ್​ , ಸಚಿವ ಎನ್.ಚಲುವರಾಯಸ್ವಾಮಿ ವಿರುದ್ಧ ಭ್ರಷ್ಟಾಚಾರದ ಪತ್ರ ಹಾಗೂ ಉಡುಪಿ ವಿಡಿಯೋ ಪ್ರಕರಣ ಸಿಐಡಿ ವಹಿಸಿದ ಬಗ್ಗೆ ಚರ್ಚೆ ನಡೆಸಿದ್ದು, ಈ ವೇಳೆ ಉಭಯ ನಾಯಕರು ಪತ್ರದ ತನಿಖೆಯನ್ನು ಸಿಐಡಿಗೆ ವಹಿಸಲು ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ.

ಮಂಡ್ಯದ ಸಹಾಯಕ ಕೃಷಿ ನಿರ್ದೇಶಕರು ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ರಾಜ್ಯಪಾಲರಿಗೆ ದೂರು ನೀಡಿರುವ ಪತ್ರ ವೈರಲ್ ಆಗಿದ್ದು, ಇದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ಈ ದೂರಿನ ಪತ್ರವನ್ನು ಹಿಡಿದುಕೊಂಡು ವಿರೋಧ ಪಕ್ಷ ಬಿಜೆಪಿ, ಸರ್ಕಾರದ ಮೇಲೆ ಮುಗಿಬಿದ್ದಿದೆ. ಆದ್ರೆ, ಇದನ್ನು ಆಡಳಿತರೂಢ ಕಾಂಗ್ರೆಸ್​ ನಾಯಕರು ಅಲ್ಲಗಳೆದಿದ್ದಾರೆ. ಹೀಗೆ ಈ ಪ್ರಕರಣ ರಾಜೀಯವಾಗಿ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಮಂಡ್ಯ ಕೃಷಿ ಇಲಾಖೆ ಜಂಟಿ ನಿರ್ದೇಶಕ V.S.ಅಶೋಕ್​​ ಅವರು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿಗೆ ದೂರು ನೀಡಿದ್ದು, ಈ ಕುರಿತು ತನಿಖೆ ಮಾಡುವಂತೆ ಮನವಿ ಮಾಡಿದ್ದಾರೆ. ಈ ದೂರಿನ ಮೇರೆ ಮಂಡ್ಯ ಪೊಲೀಸರು ತನಿಖೆ ಆರಂಭಸಿದ್ದಾರೆ. ಇದರ ಬೆನ್ನಲ್ಲೇ ಸರ್ಕಾರ ಈ ಪ್ರಕರಣದ ತನಿಖೆಗೆ ಸಿಐಡಿಗೆ ಹಸ್ತಾಂತರಿಸಲು ನಿರ್ಮಾನಿಸಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 1:53 pm, Tue, 8 August 23