
ಚಾಮರಾಜನಗರ: ಬಂಡೀಪುರ ಕಾಡಂಚಿನ ಗ್ರಾಮದಲ್ಲಿ ಆನೆ ದಾಳಿಗಳು ಮುಂದುವರಿದಿವೆ. ಆನೆ ತುಳಿತಕ್ಕೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಮೃತ ದುರ್ದೈವಿಯನ್ನು 40 ವರ್ಷದ ರಂಗರಾಜು ಎಂದು ಗುರುತಿಸಲಾ್ಗಿದೆ. ಗುಂಡ್ಲುಪೇಟೆ ತಾಲೂಕಿನ ಕಣಿಯನಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಕುಂದಕೆರೆ ಅರಣ್ಯ ವಲಯದಲ್ಲಿ ಘಟನೆ ಸಂಭವಿಸಿದ್ದು, ಸ್ಥಳಕ್ಕೆ ಅರಣ್ಯ ಸಿಬ್ಬಂದಿಗಳು ದೌಡಾಯಿಸಿದ್ದಾರೆ. ಈ ಮಧ್ಯೆ, ಮೃತ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
Published On - 10:47 am, Mon, 18 November 19