Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಲೂರು ಅರಣ್ಯ ವಲಯದಲ್ಲಿ ಬೆಂಕಿ: 25 ಎಕರೆ ಪ್ರದೇಶದಲ್ಲಿನ ಅರಣ್ಯ ಸಂಪತ್ತು ಅಗ್ನಿಗಾಹುತಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬೈಲೂರು ವಲಯ ಅರಣ್ಯದಲ್ಲಿ ಬೆಂಕಿ ಹೊತ್ತಿ ಉರಿದಿದೆ. ಪರಿಣಾಮ ಸುಮಾರು 25 ಎಕರೆ ಪ್ರದೇಶದಲ್ಲಿನ ಅರಣ್ಯ ಸಂಪತ್ತು ಅಗ್ನಿಗಾಹುತಿ ಆಗಿದೆ. 60ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿಯಿಂದ ಬೆಂಕಿ ನಂದಿಸಲಾಗಿದೆ. ತಿಂಗಳ ಹಿಂದೆ ಪುಣಜೂರು ವಲಯ ಅರಣ್ಯದಲ್ಲಿ ಬೆಂಕಿ ಬಿದ್ದಿತ್ತು.

ಬೈಲೂರು ಅರಣ್ಯ ವಲಯದಲ್ಲಿ ಬೆಂಕಿ: 25 ಎಕರೆ ಪ್ರದೇಶದಲ್ಲಿನ ಅರಣ್ಯ ಸಂಪತ್ತು ಅಗ್ನಿಗಾಹುತಿ
ಬೆಂಕಿ
Follow us
ಸೂರಜ್ ಪ್ರಸಾದ್ ಎಸ್.ಎನ್
| Updated By: ಗಂಗಾಧರ​ ಬ. ಸಾಬೋಜಿ

Updated on: Mar 30, 2024 | 4:08 PM

ಚಾಮರಾಜನಗರ, ಮಾರ್ಚ್​ 30: ಜಿಲ್ಲೆಯ ಹನೂರು ತಾಲೂಕಿನ ಬೈಲೂರು ವಲಯ ಅರಣ್ಯದಲ್ಲಿ ಬೆಂಕಿ (Fire) ಹೊತ್ತಿ ಉರಿದಿದೆ. ಪರಿಣಾಮ ಸುಮಾರು 25 ಎಕರೆ ಪ್ರದೇಶದಲ್ಲಿನ ಅರಣ್ಯ ಸಂಪತ್ತು ಅಗ್ನಿಗಾಹುತಿ ಆಗಿದೆ. 60ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿಯಿಂದ ಬೆಂಕಿ ನಂದಿಸಲಾಗಿದೆ. ತಿಂಗಳ ಹಿಂದೆ ಪುಣಜೂರು ವಲಯ ಅರಣ್ಯದಲ್ಲಿ ಬೆಂಕಿ ಬಿದ್ದಿತ್ತು. 50 ಎಕರೆಗೂ ಹೆಚ್ಚು ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿತ್ತು. ಕಳೆದ 2 ತಿಂಗಳಲ್ಲಿ ಬಿಆರ್​ಟಿ ವ್ಯಾಪ್ತಿಯಲ್ಲಿ 3ನೇ ಬಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಹೀಗೆ ಪದೇಪದೆ ಬೆಂಕಿ ಬೀಳುತ್ತಿರುವುದರಿಂದ ಹತ್ತಾರು ಅನುಮಾನಗಳಿಗೆ ಕಾರಣವಾಗಿದೆ.

ವಿದ್ಯುತ್ ಶಾರ್ಟ್ ಸಕ್ಯೂರ್ಟ್ ಬೆಂಕಿ ಅವಘಡ

ಮಂಡ್ಯ: ಕಾರ್ಖಾನೆಗಳಿಗೆ ಬೆಲ್ಟ್ ತಯಾರಿಸುವ ಕಾರ್ಖಾನೆಯಲ್ಲಿ ವಿದ್ಯುತ್ ಶಾರ್ಟ್ ಸಕ್ಯೂರ್ಟ್ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಇಡೀ ಕಾರ್ಖಾನೆ ಬೆಂಕಿಗೆ ಆಹುತಿಯಾಗಿರುವಂತಹ ಘಟನೆ ಮಂಡ್ಯ ತಾಲೂಕಿನ ತೂಬನಕೆರೆ ಗ್ರಾಮದ ಕೈಗಾರಿಕ ಪ್ರದೇಶದಲ್ಲಿ ಇತ್ತೀಚೆಗೆ ನಡೆದಿತ್ತು.

ಇದನ್ನೂ ಓದಿ: ಚಾಮರಾಜನಗರ ವ್ಯಾಪ್ತಿಯಲ್ಲಿ ಕಾಡಿಗೆ ಬೆಂಕಿ: ಕಿಡಿಗೇಡಿಗಳು ಬೆಂಕಿ ಹಾಕಿರುವುದು ಮೇಲ್ನೊಟಕ್ಕೆ ಪತ್ತೆ

ಪ್ಲೇಕಾನ್ ಎಂಬ ಕಾರ್ಖಾನೆಯಲ್ಲಿ ಬೆಳಗಿನ ಜಾವ ನಾಲ್ಕು ಗಂಟೆ ಬೆಂಕಿ ಕಾಣಿಸಿಕೊಂಡು ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದರು. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮುಳ್ಳಯ್ಯನಗಿರಿ, ಕೆಮ್ಮಣ್ಣುಗುಂಡಿ ಬೆಟ್ಟದಲ್ಲಿ ಕಾಡ್ಗಿಚ್ಚು

ಚಿಕ್ಕಮಗಳೂರು: ಬಿಸಿಲ ಝಳಕ್ಕೆ ಪ್ರಕೃತಿ ಒಣಗಿ ನಿಂತಿದ್ದಾಳೆ. ಭೂಮಿಯ ಒಡಲಿನಲ್ಲಿ ನೀರಿನ ಸೆಲೆ ಬತ್ತಿ ಹೋಗಿದ್ದು, ಸೂರ್ಯನ ಪ್ರಕರತೆಗೆ ಪ್ರಕೃತಿ ಸೌಂದರ್ಯ ಬೆಂಕಿಯ ಕೆನ್ನಾಲಿಗೆಗೆ ಧಗಧಗಿಸಿ ಉರಿಯುತ್ತಿದೆ. ಚಿಕ್ಕಮಗಳೂರು ತಾಲೂಕಿನ ಪಶ್ಚಿಮ ಘಟ್ಟಗಳ ಸಾಲಿನಲ್ಲಿರುವ ಪ್ರವಾಸಿಗರ ಸ್ವರ್ಗ ಮುಳ್ಳಯ್ಯನಗಿರಿ, ಕೆಮ್ಮಣ್ಣುಗುಂಡಿ ಕಾಡ್ಗಿಚ್ಚಿಗೆ ಪ್ರಕೃತಿ ನಾಶವಾಗುತ್ತಿದೆ. ಕಳೆದ 10 ದಿನಗಳಿಂದ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಬರುವ ಮುಳ್ಳಯ್ಯನಗಿರಿ ಕೆಮ್ಮಣ್ಣುಗುಂಡಿ ಪ್ರದೇಶದ ಶೋಲಾ ಅರಣ್ಯದಲ್ಲಿ ಕಾಡ್ಗಿಚ್ಚು ಕಾಣಿಸುತ್ತಿದ್ದು ಸಾವಿರಾರು ಎಕರೆ ಪ್ರದೇಶದಲ್ಲಿದ್ದ ಶೋಲಾ ಅರಣ್ಯ ಬೆಂಕಿಗೆ ಭಸ್ಮವಾಗಿತ್ತು.

ಇದನ್ನೂ ಓದಿ: ಕರ್ನಾಟಕದಲ್ಲಿ ಮತ್ತೊಂದು ಪಟಾಕಿ ದುರಂತ: ಓರ್ವ ಕಾರ್ಮಿಕ ಸಾವು, ಮತ್ತಿಬ್ಬರಿಗೆ ಗಂಭೀರ ಗಾಯ!

ಅಪರೂಪದ ಸಸ್ಯ ರಾಶಿಯನ್ನ ಹೊಂದಿರುವ ಮುಳ್ಳಯ್ಯನಗಿರಿ ಕೆಮ್ಮಣ್ಣುಗುಂಡಿ ಭಾಗದಲ್ಲಿ ಶೋಲಾ ಅರಣ್ಯ ನಾಶವಾಗುತ್ತಿರೋದು ಪ್ರಕೃತಿ ಪ್ರೇಮಿಗಳಿಗೆ ಆಕ್ರೋಶ ತರಿಸಿದೆ. ಪ್ರತಿದಿನ ಸಾವಿರಾರು ಸಂಖ್ಯೆಯಲ್ಲಿ ಬರುವ ಪ್ರವಾಸಿಗರ ಮೋಜು ಮಸ್ತಿಯಿಂದ ಶೋಲಾ ಕಾಡಿನಲ್ಲಿ ಕಾಡ್ಗಿಚ್ಚಿಗೆ ಕಾರಣವಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಪ್ರವಾಸಿಗರು ಸೂಕ್ಷ್ಮ ಪ್ರದೇಶದಲ್ಲಿ ಸಿಗರೆಟ್ ಸೇದಿ ಎಸೆಯುವುದರಿಂದ ಪದೇಪದೇ ಬೆಂಕಿ ಬಿಳಲು ಕಾರಣವಾಗುತ್ತಿದೆ ಎಂಬ ಆರೋಪದ ಕೇಳಿ ಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!