AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೆ-ಮಾನವ ಸಂಘರ್ಷ ತಡೆಗಟ್ಟುವುದಕ್ಕೆ ಮಾಸ್ಟರ್ ಪ್ಲಾನ್ ರೂಪಿಸಿದ ಅರಣ್ಯಾಧಿಕಾರಿಗಳು, ಏನದು?

ಆನೆ ಮತ್ತು ಮಾನವ ಸಂಘರ್ಷವನ್ನು ತಡೆಗಟ್ಟಲು ಚಾಮರಾಜನಗರದ (Chamarajanagara) ಅರಣ್ಯಾಧಿಕಾರಿಗಳು (Forest Department ) ಹೊಸ ಮಾದರಿಯೊಂದನ್ನು ಕಂಡುಕೊಂಡಿದ್ದಾರೆ.ಇದರೊಂದಿಗೆ ಅರಣ್ಯ ಇಲಾಖೆ ರೈತರಿಗೆ ನೆರವಾಗಿದೆ. ಏನದು?

ಆನೆ-ಮಾನವ ಸಂಘರ್ಷ ತಡೆಗಟ್ಟುವುದಕ್ಕೆ ಮಾಸ್ಟರ್ ಪ್ಲಾನ್ ರೂಪಿಸಿದ ಅರಣ್ಯಾಧಿಕಾರಿಗಳು, ಏನದು?
ಆನೆಗಳು (ಸಂಗ್ರಹ ಚಿತ್ರ)
TV9 Web
| Edited By: |

Updated on: Aug 18, 2023 | 1:21 PM

Share

ಚಾಮರಾಜನಗರ, ( ಆಗಸ್ಟ್ 18): ಕರ್ನಾಟಕದ ಹಲವೆಡೆ ಕಾಡಾನೆಗಳ (Elephant) ಹಾವಳಿ ಮಿತಿ ಮೀರಿದೆ. ಇದರಿಂದ ರೈತರು ರೋಸಿಹೋಗಿದ್ದಾರೆ. ಹೊಲ-ಗದ್ದೆ ತೋಟಗಳಿಗೆ ನುಗ್ಗಿ ರೈತ ಬೆಳೆದ ಬೆಳಗಳನ್ನು ನಾಶ ಮಾಡುತ್ತಿವೆ. ಇದರಿಂದ ರೈತರು ತೀವ್ರ ಸಂಕಷ್ಟಕ್ಕೊಳಗಾಗಿದ್ದಾರೆ. ಈ ಆನೆಗಳಿಗೆ ಕಡಿವಾಣ ಹಾಕುವಂತೆ ರೈತರು, ಅರಣ್ಯ ಇಲಾಖೆಗೆ ಮನವಿ ಮಾಡುತ್ತಲ್ಲೇ ಇದ್ದಾರೆ. ಆದರೂ ಪದೇ ಪದೇ ಕಾಡಾನೆಗಳ ದಾಂಧಲೆ ಪ್ರಕರಣಗಳು ಹೆಚ್ಚುತ್ತಲ್ಲೇ ಇವೆ. ಹೀಗಾಗಿ ಆನೆ ಮತ್ತು ಮಾನವ ಸಂಘರ್ಷವನ್ನು ತಡೆಗಟ್ಟಲು ಚಾಮರಾಜನಗರದ (Chamarajanagara) ಅರಣ್ಯಾಧಿಕಾರಿಗಳು (Forest Department ) ಹೊಸ ಮಾದರಿಯೊಂದನ್ನು ಕಂಡುಕೊಂಡಿದ್ದಾರೆ.

ಅರಣ್ಯದಂಚಿನಲ್ಲಿ ರೈಲ್ ಬ್ಯಾರಿಕೇಡ್ ಗಳನ್ನು ನಿರ್ಮಾಣ ಮಾಡುವ ಮೂಲಕ ರೈತರಿಗೆ ನೆರವಾಗಿದ್ದಾರೆ. ರಾಜ್ಯದ ವಿವಿಧ ಅರಣ್ಯಗಳ ಅಂಚಿನಲ್ಲಿ ಈವರೆಗೆ 312ಕಿಲೋಮೀಟರ್ ಉದ್ದದ ರೈಲು ಕಂಬಗಳ ತಡೆಗೋಡೆಯನ್ನು ನಿರ್ಮಿಸಿ, ಸಂಘರ್ಷ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ವಿಧಾನದ ವಿಡಿಯೋ ತುಣುಕನ್ನು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಅರಣ್ಯದಂಚಿನಲ್ಲಿ ಯಾವುದೇ ಅಡೆತಡೆ ಇಲ್ಲದೆ ಬೆಳೆ ಬೆಳೆಯುತ್ತಿದ್ದರು. ಬೆಳೆಗಳಿಗೆ ಆನೆ ದಾಳಿಯಿಂದಾಗುವ ನಷ್ಟದಿಂದ ರೈತರು ಬೇಸತ್ತಿದ್ದರು. ಇದೀಗ ತಡೆಗೋಡೆಯನ್ನು ನಿರ್ಮಿಸಿದ್ದರಿಂದ ಆನೆ ದಾಳಿಯಿಂದ ಆ ಭಾಗದ ರೈತರು ನಿಟ್ಟುಸಿರು ಬಿಟ್ಟಿದ್ದಾರೆ. ಸೋಲಾರ್ ಬೇಲಿ, ಆನೆಕಂದಕಗಳಿಗಿಂತ ರೈಲ್ ಬ್ಯಾರಿಕೇಡ್ಗಳು ಹೆಚ್ಚು ಪರಿಣಾಮಕಾರಿಯಾಗಿದೆ. ಆದರೆ, ಸಂಪೂರ್ಣವಾಗಿ ಆನೆ ದಾಳಿಯನ್ನು ನಿಯಂತ್ರಿಸಲು ಇನ್ನೂ 331 ಕಿ.ಮೀ ಉದ್ದದ ರೈಲು ಬ್ಯಾರಿಕೇಡ್ ನಿರ್ಮಾಣದ ಅಗತ್ಯವಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ. ಈ ಕುರಿತು ಅರಣ್ಯ ರಕ್ಷಕ ಆಯಾಜ್ ನೇರ್ಲಿ ಮಾಡಿದ 2 ನಿಮಿಷ 22 ಸೆಕೆಂಡ್​ಗಳ ವಿಡಿಯೋ ವೈರಲ್ ಆಗಿದೆ.

ಇದನ್ನೂ ಓದಿ: ಹಾಸನದಲ್ಲಿ ಮುಂದುವರೆದ ಕಾಡಾನೆ ಹಾವಳಿ, ಒಂಟಿ ಸಲಗ ದಾಳಿಗೆ ಮತ್ತೊಂದು ಬಲಿ

ಈ ಮೊದಲು ಸೊಲಾರ್ ಬೇಲಿಗಳನ್ನು ನಿರ್ಮಾಣ ಮಾಡುವುದು, ಆನೆ ಕಂದಕಗಳನ್ನು ನಿರ್ಮಿಸುವುದು ಹೀಗೆ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಆನೆಗಳು ಜೇನುಹುಳುಗಳಿಗೆ ಹೆದರುವುದರಿಂದ ಜೇನುಗೂಡಿನ ಬೇಲಿಗಳನ್ನು ನಿರ್ಮಿಸಿ ಆನೆ ದಾಳಿಯನ್ನು ತಡೆಯುವ ಪ್ರಯತ್ನ ನಡೆಸಲಾಗಿತ್ತು. ಈ ನಿಟ್ಟಿನಲ್ಲಿ ರೈಲು ಬ್ಯಾರಿಕೇಡ್​ಗಳ ನಿರ್ಮಾಣವು, ಆನೆ ಮತ್ತು ಮಾನವರ ನಡುವೆ ಸಾಮರಸ್ಯ ಕಲ್ಪಿಸುವ ಈ ವಿನೂತನ ಮಾದರಿಯು ಸಹಕಾರಿಯಾಗಲಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್