ಚಾಮರಾಜನಗರದ ಆಕ್ಸಿಜನ್ ಕೊರತೆಯಿಂದ ರೋಗಿಗಳ ಸಾವು ಪ್ರಕರಣ: ಮೃತಪಟ್ಟ 13 ಜನರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ನೀಡಲು ಹೈಕೋರ್ಟ್ ಆದೇಶ
Chamarajanagar Medical oxygen shortage tragedy: ಆಕ್ಸಿಜನ್ ಕೊರತೆಯಾದ ರಾತ್ರಿ, ಬೆಳಗ್ಗೆ 13 ರೋಗಿಗಳ ಸಾವನ್ನಪ್ಪಿದ್ದಾರೆ. ಈ ಮೃತರ 13 ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ನೀಡಿ. ಬಳಿಕ ಮೃತಪಟ್ಟ 11 ಜನರ ಕುಟುಂಬಕ್ಕೆ ತಲಾ 2ಲಕ್ಷ ಪರಿಹಾರ ನೀಡುವಂತೆ ಹೈಕೋರ್ಟ್ ಆದೇಶಿಸಿದೆ.
ಬೆಂಗಳೂರು: ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆಯಿಂದ ರೋಗಿಗಳ ಸಾವು ಪ್ರಕರಣದ ವಿಚಾರಣ ನಡೆಸಿದ ಹೈಕೋರ್ಟ್ ಅತ್ಯಂತ ಮಹತ್ವದ ತೀರ್ಪು ನೀಡಿದೆ. ಮೃತರ 13 ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ನೀಡಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಆಕ್ಸಿಜನ್ ಕೊರತೆಯಾದ ರಾತ್ರಿ, ಬೆಳಗ್ಗೆ 13 ರೋಗಿಗಳ ಸಾವನ್ನಪ್ಪಿದ್ದಾರೆ. ಈ ಮೃತರ 13 ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ನೀಡಿ. ಬಳಿಕ ಮೃತಪಟ್ಟ 11 ಜನರ ಕುಟುಂಬಕ್ಕೆ ತಲಾ 2ಲಕ್ಷ ಪರಿಹಾರ ನೀಡುವಂತೆ ಹೈಕೋರ್ಟ್ ಆದೇಶಿಸಿದೆ. ಆಯೋಗದ ವರದಿ ಬಳಿಕ ಹೆಚ್ಚುವರಿ ಪರಿಹಾರ ಬಗ್ಗೆ ನಿರ್ಧರಿಸಿ ಎಂದು ಸಹ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಘಟನೆಯ ವಿವರ: ಮೇ 2ರ ರಾತ್ರಿ 10.30ರಿಂದ ತಡರಾತ್ರಿ 2.30ರವರೆಗೆ ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಮಸ್ಯೆ ಉಂಟಾಗಿತ್ತು. ಅದರ ಪರಿಣಾಮ 24 ಜನ ಮೃತಪಟ್ಟಿದ್ದಾರೆ ಎನ್ನಲಾಗಿದ್ದರೂ ನಂತರ ನ್ಯಾ.ಎ.ಎನ್.ವೇಣುಗೋಪಾಲಗೌಡ ನೇತೃತ್ವದ ಸಮಿತಿ ಹೈಕೋರ್ಟ್ಗೆ ಸಲ್ಲಿಸಿದ ವರದಿಯಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಮೃತಪಟ್ಟವರು 24 ಜನರಲ್ಲ, 36 ಜನರು ಎಂದು ಉಲ್ಲೇಖಿಸಲಾಗಿತ್ತು.
ಈ 4 ಗಂಟೆಗಳ ಅವಧಿಯಲ್ಲಿ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ಚಿಕಿತ್ಸೆಗಾಗಿ ಆಕ್ಸಿಜನ್ ಇರಲಿಲ್ಲ ಎಂದು ವರದಿಯಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಆಡಿಟ್ ವರದಿ ಪ್ರಕಾರ ಆಕ್ಸಿಜನ್ ಕೊರತೆಯಿಂದ ಮೂವರು ಸಾವನ್ನಪ್ಪಿದ್ದಾರೆ. ಮೆದುಳಿನ ಆಘಾತದಿಂದ 7 ರೋಗಿಗಳು ಮೃತಪಟ್ಟಿದ್ದಾರೆ. ಕೊರೊನಾ ಸೋಂಕಿನಿಂದ 14 ಸಾವಾಗಿದೆ ಎಂದು ತಿಳಿಸಲಾಗಿತ್ತು. ಆದರೆ ಇವರೆಲ್ಲರಿಗೂ ಆಕ್ಸಿಜನ್ ಕೊರತೆ ಆಗಿದ್ದು ನಿಜ. ಆಕ್ಸಿಜನ್ ಕೊರತೆಯಾದ ನಂತರ 36 ಒಳರೋಗಿಗಳು ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ನ್ಯಾ.ಎ.ಎನ್.ವೇಣುಗೋಪಾಲಗೌಡ ನೇತೃತ್ವದ ಸಮಿತಿ ಹೈಕೋರ್ಟ್ಗೆ ವರದಿ ಸಲ್ಲಿಸಿತ್ತು.
ಇದನ್ನೂ ಓದಿ:
SSLC Exams 2021: ಎಸ್ಎಸ್ಎಲ್ಸಿ ಪರೀಕ್ಷೆ ರದ್ದು ಮಾಡುವಂತೆ ಕೋರಿ ಹೈಕೋರ್ಟ್ಗೆ ಪಿಐಎಲ್ ಸಲ್ಲಿಕೆ
(Chamarajanagar Medical oxygen shortage tragedy Karnataka High Court orders 5 lakh compensation for 13 dead people family)
Published On - 5:26 pm, Tue, 6 July 21