AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ ಪ್ರಕರಣದಲ್ಲಿ ಮೈಸೂರಿಗೆ ಕಳಂಕ ತರಲು ಯತ್ನಿಸಿದರು; ಅವರೀಗ ಮೈಸೂರು ಜನತೆಯ ಕ್ಷಮೆ ಕೇಳಬೇಕು: ರೋಹಿಣಿ ಸಿಂಧೂರಿ

ಕಳೆದ 7 ತಿಂಗಳಿನಿಂದ ನನ್ನ ಮೇಲೆ ವೈಯುಕ್ತಿಕವಾಗಿಯೂ ಆರೋಪಗಳನ್ನ ಮಾಡ್ತಿದ್ದಾರೆ. ನಾವು ಸರ್ವಿಸ್ ಗೆ ಸೇರಿದ್ದೆ ದೇಶ ಸೇವೆ ಮಾಡಲು. ಈ ಸಣ್ಣ ಪುಟ್ಟ ಆರೋಪಗಳಿಗೆ ನಾನು ಉತ್ತರ ಕೊಡುವುದಿಲ್ಲ. ಕಾಲವೇ ಎಲ್ಲದಕ್ಕೂ ಉತ್ತರ ಕೊಡುತ್ತಿದೆ ಎಂದು ಮೈಸೂರು ಡಿಸಿ ರೋಹಿಣಿ ಸಿಂಧೂರಿ ಹೇಳಿದ್ದಾರೆ.

ಚಾಮರಾಜನಗರ ಪ್ರಕರಣದಲ್ಲಿ ಮೈಸೂರಿಗೆ ಕಳಂಕ ತರಲು ಯತ್ನಿಸಿದರು; ಅವರೀಗ ಮೈಸೂರು ಜನತೆಯ ಕ್ಷಮೆ ಕೇಳಬೇಕು: ರೋಹಿಣಿ ಸಿಂಧೂರಿ
ಚಾಮರಾಜನಗರ ಪ್ರಕರಣದಲ್ಲಿ ಮೈಸೂರಿಗೆ ಕಳಂಕ ತರಲು ಯತ್ನಿಸಿದರು; ಅವರೀಗ ಮೈಸೂರು ಜನತೆಯ ಕ್ಷಮೆ ಕೇಳಬೇಕು: ರೋಹಿಣಿ ಸಿಂಧೂರಿ
ಸಾಧು ಶ್ರೀನಾಥ್​
|

Updated on: May 14, 2021 | 1:01 PM

Share

ಮೈಸೂರು: ಐಎಎಸ್ ಅಧಿಕಾರಿ ರವಿ ಅವರು ಜಿಲ್ಲಾಧಿಕಾರಿಯಾಗಿರುವ ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಸಕಾಲಕ್ಕೆ ಆಕ್ಸಿಜನ್​ ಸಿಗದೆ 36 ಕೊರೊನಾ ಸೋಂಕಿತರು ಅಸುನೀಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಆಯೋಗ ಹೈಕೋರ್ಟ್​ಗೆ ವರದಿ ಸಲ್ಲಿಸಿ, ಅದರಲ್ಲಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಲೋಪವೇನೂ ಇಲ್ಲ; ಚಾಮರಾಜನಗರ ಡಿಸಿ ಅವರೇ ಸಕಾಲಿಕ ಕ್ರಮ ಕೈಗೊಳ್ಳಬೇಕಿತ್ತು ಎಂದು ಸಾರಿತ್ತು. ಪ್ರಕರಣ ತಾರ್ಕಿಕ ಅಂತ್ಯ ಕಂಡು ತಮ್ಮ ಮೇಲಿನ ಆರೋಪದಿಂದ ಮುಕ್ತರಾದ ಖಡಕ್​ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಇದೀಗ ಪ್ರತಿಕ್ರಿಯೆ ನೀಡಿದ್ದು, ನಮ್ಮ ಮೇಲೆ ಆರೋಪಿಸಲು ಹೋಗಿ ಇಡೀ ಮೈಸೂರಿಗೆ ಕಳಂಕ ತರಲು ಯತ್ನಿಸಿದರು. ಅದಕ್ಕೆ ಪ್ರಯತ್ನಿಸಿದ್ದವರು ಮೈಸೂರು ಜನರ ಕ್ಷಮೆ ಕೇಳಬೇಕು ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಕ್ಷ್ಮವಾಗಿ ಪ್ರತಿಕ್ರಿಯಿಸಿದ್ದಾರೆ.

ನಮ್ಮ ಮೇಲೆ ಆರೋಪಿಸಲು ಹೋಗಿ ಮೈಸೂರಿಗೆ ಕಳಂಕ ಹಚ್ಚಲು ಯತ್ನಿಸಿದರು. ಆ ಕಳಂಕ‌ದಿಂದ ನಾವು ಮುಕ್ತರಾಗಿದ್ದೇವೆ. ಅದಕ್ಕೆ ಪ್ರಯತ್ನಿಸಿದ್ದವರು ಈಗ ಜನರ ಕ್ಷಮೆ ಕೇಳಬೇಕು. ನಾವು ಬಂದ ದಿನದಿಂದ ನನ್ನ ಮೇಲೆ ಇಲ್ಲ ಸಲ್ಲದ ಆರೋಪ ಹೊರಿಸುತ್ತಿದ್ದಾರೆ. ಅದಕ್ಕೆ ನಾನು ಪ್ರತಿಕ್ರಿಯೆ ನೀಡಿಲ್ಲ, ಅದು ನನ್ನ ಕೆಲಸ ಅಲ್ಲ. ಕಾಲವೇ ಎಲ್ಲದಕ್ಕೂ ಉತ್ತರ ಕೊಟ್ಟಿದೆ ಎಂದ ಮೈಸೂರು ಡಿಸಿ ಸಮಾಧಾನದ ನಿಟ್ಟುಸಿರುಬಿಟ್ಟರು.

ಇದನ್ನು ಓದಿ: ಘಟನೆಗೆ ಮೈಸೂರು ಡಿಸಿಯೇ ನೇರ ಕಾರಣ; ಚಾಮರಾಜನಗರ ಡಿಸಿಯಿಂದ ಆರೋಪ

ನಮ್ಮ ಮೇಲೆ ಮಾಡಿದ ಆರೋಪ ಸುಳ್ಳು ಮತ್ತು ಆಧಾರ ರಹಿತ. ಸರ್ಕಾರ ಕೇಳಿದ ಎಲ್ಲ ಮಾಹಿತಿ ನೀಡಿದ್ದೇವೆ. ಚಾಮರಾಜನಗರ ಘಟನೆಯಲ್ಲೂ ಅದನ್ನೆ ಮಾಡಿದ್ದಾರೆ. ಕಳೆದ 7 ತಿಂಗಳಿನಿಂದ ನನ್ನ ಮೇಲೆ ವೈಯುಕ್ತಿಕವಾಗಿಯೂ ಆರೋಪಗಳನ್ನ ಮಾಡ್ತಿದ್ದಾರೆ. ನಾವು ಸರ್ವಿಸ್ ಗೆ ಸೇರಿದ್ದೆ ದೇಶ ಸೇವೆ ಮಾಡಲು. ಈ ಸಣ್ಣ ಪುಟ್ಟ ಆರೋಪಗಳಿಗೆ ನಾನು ಉತ್ತರ ಕೊಡುವುದಿಲ್ಲ. ಕಾಲವೇ ಎಲ್ಲದಕ್ಕೂ ಉತ್ತರ ಕೊಡುತ್ತಿದೆ ಎಂದು ಮೈಸೂರು ಡಿಸಿ ರೋಹಿಣಿ ಸಿಂಧೂರಿ ಹೇಳಿದ್ದಾರೆ.

ಇದನ್ನೂ ಓದಿ: ಮೈಸೂರು ಡಿಸಿ ರೋಹಿಣಿ ಸಿಂಧೂರಿ ವಿರುದ್ಧದ ಆರೋಪದಲ್ಲಿ ಹುರುಳಿಲ್ಲ: ಹೈಕೋರ್ಟ್​ಗೆ ಸಲ್ಲಿಸಿದ ವರದಿಯಲ್ಲಿ ಉಲ್ಲೇಖ 

(Chamarajanagar oxygen shortage incident people who alleged mysuru dc should apologize demands dc rohini sindhuri)

ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?