ಚಾಮರಾಜನಗರ ದುರಂತ: ಆಕ್ಸಿಜನ್ ಕೊರತೆಯಿಂದ ಮೃತಪಟ್ಟವರು 24 ಜನರಲ್ಲ, 36 ಜನ; ಹೈಕೋರ್ಟ್​ಗೆ ವರದಿ ಸಲ್ಲಿಕೆ

Chamarajanagar Medical Oxygen Shortage: ಆಕ್ಸಿಜನ್ ಕೊರತೆಯಾದ ನಂತರ 36 ಒಳರೋಗಿಗಳು ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ನ್ಯಾ.ಎ.ಎನ್.ವೇಣುಗೋಪಾಲಗೌಡ ನೇತೃತ್ವದ ಸಮಿತಿ ಹೈಕೋರ್ಟ್​ಗೆ ವರದಿ ಸಲ್ಲಿಸಿದೆ.

ಚಾಮರಾಜನಗರ ದುರಂತ: ಆಕ್ಸಿಜನ್ ಕೊರತೆಯಿಂದ ಮೃತಪಟ್ಟವರು 24 ಜನರಲ್ಲ, 36 ಜನ; ಹೈಕೋರ್ಟ್​ಗೆ ವರದಿ ಸಲ್ಲಿಕೆ
ಕರ್ನಾಟಕ ಹೈಕೋರ್ಟ್​
Follow us
guruganesh bhat
|

Updated on:May 13, 2021 | 3:52 PM

ಬೆಂಗಳೂರು: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಮೃತಪಟ್ಟವರು 24 ಜನರಲ್ಲ, 36 ಜನರು ಎಂದು ನ್ಯಾ.ಎ.ಎನ್.ವೇಣುಗೋಪಾಲಗೌಡ ನೇತೃತ್ವದ ಸಮಿತಿ ಹೈಕೋರ್ಟ್​ಗೆ ವರದಿ ಸಲ್ಲಿಸಿದೆ. ಮೇ 2ರ ರಾತ್ರಿ 10.30ರಿಂದ ತಡರಾತ್ರಿ 2.30ರವರೆಗೆ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಮಸ್ಯೆ ಉಂಟಾಗಿತ್ತು. ಈ 4 ಗಂಟೆಗಳ ಅವಧಿಯಲ್ಲಿ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ಚಿಕಿತ್ಸೆಗಾಗಿ ಆಕ್ಸಿಜನ್ ಇರಲಿಲ್ಲ ಎಂದು ವರದಿಯಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

ಆಡಿಟ್ ವರದಿ ಪ್ರಕಾರ ಆಕ್ಸಿಜನ್ ಕೊರತೆಯಿಂದ ಮೂವರು ಸಾವನ್ನಪ್ಪಿದ್ದಾರೆ. ಮೆದುಳಿನ ಆಘಾತದಿಂದ 7 ರೋಗಿಗಳು ಮೃತಪಟ್ಟಿದ್ದಾರೆ. ಕೊರೊನಾ ಸೋಂಕಿನಿಂದ 14 ಸಾವಾಗಿದೆ ಎಂದು ಆಡಿಟ್ ವರದಿಯಲ್ಲಿ ತಿಳಿಸಲಾಗಿದೆ. ಆದರೆ ಇವರೆಲ್ಲರಿಗೂ ಆಕ್ಸಿಜನ್ ಕೊರತೆ ಆಗಿದ್ದು ನಿಜ. ಆಕ್ಸಿಜನ್ ಕೊರತೆಯಾದ ನಂತರ 36 ಒಳರೋಗಿಗಳು ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ನ್ಯಾ.ಎ.ಎನ್.ವೇಣುಗೋಪಾಲಗೌಡ ನೇತೃತ್ವದ ಸಮಿತಿ ಹೈಕೋರ್ಟ್​ಗೆ ವರದಿ ಸಲ್ಲಿಸಿದೆ.

ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆಯಿಂದ ಜನರ ಸಾವು ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡುವ ಬಗ್ಗೆ ನಿರ್ಧರಿಸಿ ಮತ್ತು ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಕಳ್ಳಬಟ್ಟಿ ದುರಂತಕ್ಕೂ ಪರಿಹಾರ ಕೊಟ್ಟಿದ್ದೀರಿ. ಹೀಗಾಗಿ ಈ ಪ್ರಕರಣದಲ್ಲಿ ಪರಿಹಾರ ನೀಡಲು ಹಿಂಜರಿಕೆ ಸರಿಯಲ್ಲ ಎಂದ ಹೈಕೋರ್ಟ್ ವಿಭಾಗೀಯ ಪೀಠ,  ಪರಿಹಾರ ನೀಡುವ ಬಗ್ಗೆ ಪ್ರತಿಕ್ರಿಯಿಸಲು  ಸರ್ಕಾರಕ್ಕೆ ಸೂಚನೆ ಸರ್ಕಾರಕ್ಕೆ ತಿಳಿಸಿದೆ.

ಇದನ್ನೂ ಓದಿ: ಕೊವಿಡ್​ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ತಿಂಗಳಿಗೆ ₹5 ಸಾವಿರ ಪಿಂಚಣಿ, ಉಚಿತ ಶಿಕ್ಷಣ: ಮಧ್ಯ ಪ್ರದೇಶ ಸಿಎಂ ಶಿವರಾಜ್ ಸಿಂಗ್ ಘೋಷಣೆ 

ಹೈಕೋರ್ಟ್​ ಚಾಟಿ: ನಾವು ನೇಣು ಹಾಕಿಕೊಳ್ಳಬೇಕಾ ಎಂದು ಕೇಳಿದ ಸದಾನಂದ ಗೌಡ, ನ್ಯಾಯಾಧೀಶರು ಸರ್ವಜ್ಞರಲ್ಲ ಎಂದ ಸಿ.ಟಿ.ರವಿ

(Chamarajanagar oxygen tragedy deaths due to lack of oxygen are not 24 but 36 says Submission of Report to the High Court )

Published On - 3:43 pm, Thu, 13 May 21