ಚಾಮರಾಜನಗರದ ಮಹಿಳೆ ಕಟ್ಟಿಕೊಂಡ ಸುಂದರ-ಸದೃಢ ಮನೆಗೆ ಒಲಿಯಿತು ರಾಷ್ಟ್ರೀಯ ಪುರಸ್ಕಾರ; ಜಿಲ್ಲೆಗೆ ಕೀರ್ತಿ-ಹೆಮ್ಮೆ

ಪ್ರತಿ ರಾಜ್ಯದಿಂದ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ನಗರ ಪಟ್ಟಣಗಳ ವ್ಯಾಪ್ತಿಯಲ್ಲಿ ಅತ್ಯುತ್ತಮವಾಗಿ ಮನೆ ನಿರ್ಮಿಸಿಕೊಂಡ ಫಲಾನುಭವಿಗಳನ್ನು ಅತ್ಯುತ್ತಮ ಮನೆ ನಿರ್ಮಾಣ ವರ್ಗ ಅಡಿಯಲ್ಲಿ ಪುರಸ್ಕಾರಕ್ಕೆ ಆಯ್ಕೆಮಾಡಿದೆ.

ಚಾಮರಾಜನಗರದ ಮಹಿಳೆ ಕಟ್ಟಿಕೊಂಡ ಸುಂದರ-ಸದೃಢ ಮನೆಗೆ ಒಲಿಯಿತು ರಾಷ್ಟ್ರೀಯ ಪುರಸ್ಕಾರ; ಜಿಲ್ಲೆಗೆ ಕೀರ್ತಿ-ಹೆಮ್ಮೆ
ಚಾಮರಾಜನಗರ ಪಟ್ಟಣದಲ್ಲಿ ಮನೆ ನಿರ್ಮಿಸಿಕೊಂಡಿರುವ ರಾಚಮ್ಮ ಮತ್ತು ಕುಟುಂಬ
Follow us
sandhya thejappa
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 01, 2021 | 3:08 PM

ಚಾಮರಾಜನಗರ: ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಅತ್ಯುತ್ತಮ ಮನೆ ನಿರ್ಮಾಣ ವರ್ಗದ ಅಡಿಯಲ್ಲಿ ಫಲಾನುಭವಿಗಳಿಗೆ ನೀಡಲಾಗುವ ರಾಷ್ಟ್ರೀಯ ಪುರಸ್ಕಾರಕ್ಕಾಗಿ ಕರ್ನಾಟಕ ರಾಜ್ಯದಿಂದ ಆಯ್ಕೆಯಾಗಿರುವ ಮೂವರು ಫಲಾನುಭವಿಗಳ ಪೈಕಿ ಚಾಮರಾಜನಗರ ಜಿಲ್ಲೆಯ ಮಹಿಳೆಯೂ ಒಬ್ಬರಾಗಿದ್ದು, ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅನುಷ್ಠಾನದಲ್ಲಿ ವಾರ್ಷಿಕ ಪ್ರಶಸ್ತಿಗಳನ್ನು ನೀಡಲು ಆರಂಭಿಸಿದೆ. ಪ್ರತಿ ರಾಜ್ಯದಿಂದ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ನಗರ ಪಟ್ಟಣಗಳ ವ್ಯಾಪ್ತಿಯಲ್ಲಿ ಅತ್ಯುತ್ತಮವಾಗಿ ಮನೆ ನಿರ್ಮಿಸಿಕೊಂಡ ಫಲಾನುಭವಿಗಳನ್ನು ಅತ್ಯುತ್ತಮ ಮನೆ ನಿರ್ಮಾಣ ವರ್ಗ ಅಡಿಯಲ್ಲಿ ಪುರಸ್ಕಾರಕ್ಕೆ ಆಯ್ಕೆ ಮಾಡಿದೆ. ಕರ್ನಾಟಕ ರಾಜ್ಯದಿಂದ ಮೂವರು ಫಲಾನುಭವಿಗಳು ಈ ಮಹತ್ತರ ಪುರಸ್ಕಾರಕ್ಕೆ ಆಯ್ಕೆಯಾಗಿದ್ದು, ಇವರಲ್ಲಿ ಚಾಮರಾಜನಗರ ಪಟ್ಟಣದಲ್ಲಿ ಮನೆ ನಿರ್ಮಿಸಿಕೊಂಡಿರುವ ರಾಚಮ್ಮ ಕೂಡ ಒಬ್ಬರಾಗಿದ್ದಾರೆ.

ಚಾಮರಾಜನಗರ ನಗರಸಭೆ ವ್ಯಾಪ್ತಿಯಲ್ಲಿ 2016-17 ನೇ ಸಾಲಿನಲ್ಲಿ ರಾಚಮ್ಮರವರು ವಾಜಪೇಯಿ ನಗರ ವಸತಿ ಯೋಜನೆ ಮತ್ತು ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಫಲಾನುಭವಿಯಾಗಿ ಆಯ್ಕೆಯಾಗಿದ್ದರು. ತಮ್ಮ ಸ್ವಂತ ನಿವೇಶನದಲ್ಲಿ ರಾಜ್ಯ ಸರ್ಕಾರದ ಸಹಾಯಧನ 1,49,800 ರೂ ಮತ್ತು ಪ್ರಧಾನ ಮಂತ್ರಿ ಅವಾಸ್ ಯೋಜನೆಯಡಿ 1,50,000 ರೂ. ಸೇರಿದಂತೆ ಒಟ್ಟು 2,98,800 ರೂ. ಸಹಾಯಧನ ಪಡೆದು ಪಕ್ಕಾ ಮನೆ ನಿರ್ಮಾಣ ಮಾಡಿಕೊಂಡಿದ್ದಾರೆ.

ಸ್ವಂತ ವಿವೇಚನೆಯಿಂದ ಮನೆ ನಿರ್ಮಾಣ ರಾಮಸಮುದ್ರದ ಹಳೇ ಬಡಾವಣೆ ನಿವಾಸಿಯಾಗಿರುವ ರಾಚಮ್ಮ ವಸತಿ ಯೋಜನೆಯಡಿ ಆಯ್ಕೆಯಾಗಿ ಪಕ್ಕಾ ಮನೆ ನಿರ್ಮಾಣ ಮಾಡಿಕೊಂಡಿದ್ದಾರೆ. ಸಂಬಂಧಿಗಳೊಂದಿಗೆ ಸೇರಿ ಅವರೇ ತಮ್ಮ ಸ್ವಂತ ವಿವೇಚನೆಯಿಂದ ಮನೆಯನ್ನು ನಿರ್ಮಿಸಿಕೊಂಡಿದ್ದು, ಮನೆಯ ಹೊರಾಂಗಣವು ಉತ್ತಮವಾಗಿದೆ.

ಇತರೆ ವಿಷಯಗಳ ಪರಿಗಣನೆ ಫಲಾನುಭವಿಯ ಆಯ್ಕೆಗಾಗಿ ಯೋಜನೆಯಡಿ ಮಾನದಂಡವಾಗಿ ಮನೆ ನಿರ್ಮಾಣದ ಪ್ರಗತಿ, ಮನೆಯ ಹೊರಾಂಗಣ, ಯೋಜನೆಯ ಚಿಹ್ನೆ ಬರವಣಿಗೆ, ಜಾಗೃತಿ ಚಟುವಟಿಕೆ ಸೇರಿದಂತೆ ಇತರೆ ವಿಷಯಗಳನ್ನು ಪರಿಗಣಿಸಲಾಗಿದೆ.

ವೀಡಿಯೋ ಕಾನ್ಫರೆನ್ಸ್ ಮೂಲಕ ಸನ್ಮಾನ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಇಲಾಖೆ ವತಿಯಿಂದ ಜನವರಿ 1 ರಂದು ಪ್ರಧಾನ ಮಂತ್ರಿ ವೀಡಿಯೋ ಕಾನ್ಫರೆನ್ಸ್ ಮೂಲಕ ವಸತಿ ಯೋಜನೆಗಳ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸುವ ಮತ್ತು ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು ಪ್ರಧಾನ ಮಂತ್ರಿ ಅವಾಸ್ ಯೋಜನೆಯ ಅತ್ಯುತ್ತಮ ಮನೆ ನಿರ್ಮಾಣ ವರ್ಗ ಅಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಪುರಸ್ಕಾರ ನೀಡಿ ಸನ್ಮಾನಿಸಲಿದ್ದಾರೆ.

CBSE ಪರೀಕ್ಷಾ ದಿನಾಂಕ ಪ್ರಕಟ: ಮೇ 4 ರಿಂದ ಪರೀಕ್ಷೆ ಆರಂಭ, ಜುಲೈ 15 ರೊಳಗೆ ಫಲಿತಾಂಶ ಪ್ರಕಟ

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?