AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಿಂದ ಅಕ್ರಮವಾಗಿ 15 ಟನ್​ ಯೂರಿಯಾ ಕೇರಳಕ್ಕೆ ಸಾಗಾಟ!

ರಾಜ್ಯಾದ್ಯಂತ ರೈತರು ಕೃಷಿ ಚಟುವಟಿಕೆ ಚುರುಕುಗೊಳಿಸಿದ್ದಾರೆ. ಇಂತಹ ಸಂದರ್ಭದಲ್ಲೇ ಕೃಷಿಗೆ ಅತೀ ಅವಶ್ಯಕವಾಗಿರುವ ಯೂರಿಯಾ ಗೊಬ್ಬರದ ಕೊರತೆ ಇದೆ. ಯೂರಿಯಾ ನೀಡಿ ಎಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಇತ್ತೀಚಿಗೆ ರಾಯಚೂರಿನಲ್ಲಿ ಯೂರಿಯಾವನ್ನು ಕಾಳಸಂತೆ ಮಾರಾಟ ಮಾಡಲಾಗಿದೆ ಎಂದು ರೈತರು ಆರೋಪಿಸಿ ಧರಣಿ ನಡೆಸಿದ್ದರು. ಈ ಬೆನ್ನಲ್ಲೇ ಇದೀಗ, ಅಕ್ರಮವಾ ಯೂರಿಯಾವನ್ನು ಸಾಗಾಟ ಮಾಡುತ್ತಿದ್ದ ಲಾರಿ ಸಿಕ್ಕಿಬಿದೆ.

ಕರ್ನಾಟಕದಿಂದ ಅಕ್ರಮವಾಗಿ 15 ಟನ್​ ಯೂರಿಯಾ ಕೇರಳಕ್ಕೆ ಸಾಗಾಟ!
ಯೂರಿಯಾ ಸಾಗಾಟ ಮಾಡುತ್ತಿದ್ದ ಲಾರಿ ಜಪ್ತಿ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:Aug 05, 2025 | 3:09 PM

Share

ಚಾಮರಾಜನಗರ, ಆಗಸ್ಟ್​ 05: ಕರ್ನಾಟಕದಲ್ಲಿ (Karnataka) ಯೂರಿಯಾ (Urea) ಗೊಬ್ಬರ ಅಭಾವ ಸೃಷ್ಟಿಯಾಗಿದ್ದು, ಈ ಸಂಬಂಧ ರೈತರು ರಸ್ತೆಗಳಿದು ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವೆ ಆರೋಪ ಪ್ರತ್ಯಾರೋಪಗಳು ನಡೆಯುತ್ತಿವೆ. ಇದರ ನಡುವೆ ಅಕ್ರಮವಾಗಿ ಯೂರಿಯಾ ಗೊಬ್ಬರ ಸಾಗಿಸುತ್ತಿದ್ದ ಲಾರಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ನಂಜನಗೂಡಿನ ಗೋದಾಮಿನಿಂದ ಸುಮಾರು 330 ಚೀಲದಲ್ಲಿದ್ದ 15 ಟನ್ ಯೂರಿಯಾ​ ಗೊಬ್ಬರವನ್ನು ಅಕ್ರಮವಾಗಿ ಕೇರಳಕ್ಕೆ ಲಾರಿ ಮೂಲಕ ಸಾಗಿಸಲಾಗುತ್ತಿತ್ತು. ಈ ಮಾಹಿತಿ ತಿಳಿದ ಕೃಷಿ ಅಧಿಕಾರಿಗಳು ಮತ್ತು ಪೊಲೀಸರು ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ ಮೂಲೆಹೊಳೆ ಚೆಕ್​ಪೋಸ್ಟ್​​ನಲ್ಲಿ ಯೂರಿಯಾ ಗೊಬ್ಬರ ಇದ್ದ ಲಾರಿಯನ್ನು ಅಡ್ಡಗಟ್ಟಿ, ವಶಕ್ಕೆ ಪಡೆದಿದ್ದಾರೆ. ಯೂರಿಯಾ​ ಗೊಬ್ಬರವನ್ನು ಅಂತಾರಾಜ್ಯ ಸಾಗಾಟಕ್ಕೆ ಅನುಮತಿ ಇಲ್ಲದಿದ್ದರೂ ಸಾಗಾಟ ಮಾಡಲಾಗುತ್ತಿತ್ತು. ನಂಜನಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ
Image
ಯೂರಿಯಾ ಗೊಬ್ಬರ ಕೊರತೆ: ಅಧಿಕಾರಿಗಳ ಸಭೆ ಬಳಿಕ ಕೃಷಿ ಸಚಿವ ಹೇಳಿದ್ದಿಷ್ಟು
Image
ಶಾಸಕರೊಂದಿಗೆ ಸಭೆ ನಡೆಸುವುದು ಸಿಎಂರ ಪರಮೋಚ್ಛ ಅಧಿಕಾರ: ಸುರೇಶ್
Image
ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಒಂದು ಆಧಾರ್ ಕಾರ್ಡ್​ಗೆ 2 ಚೀಲ ಯೂರಿಯಾ
Image
ರಾಯಚೂರಿನಲ್ಲಿ 79 ಟನ್​ ಯೂರಿಯಾ ಕಾಳಸಂತೆಯಲ್ಲಿ ಮಾರಾಟ

ಸರ್ಕಾರದ ವಿರುದ್ಧ ಜೆಡಿಎಸ್ ವಾಗ್ದಾಳಿ

“ರಾಜ್ಯದ ರೈತರಿಗೆ ರಸಗೊಬ್ಬರ ಕೊಡಲು ಹಿಂದೇಟು ಹಾಕುತ್ತಿರುವ ಕಾಂಗ್ರೆಸ್​ ಸರ್ಕಾರ, ಕೇಂದ್ರ ಸರ್ಕಾರ ಗೊಬ್ಬರ ಕೊಟ್ಟಿಲ್ಲ, ಕೊಟ್ಟಿಲ್ಲ ಎನ್ನುತ್ತಲೇ, ಕೇಂದ್ರ ಸರ್ಕಾರದಿಂದ ಬಂದಿರುವ ಯೂರಿಯಾವನ್ನು ರಾತ್ರೋರಾತ್ರಿ ಕೇರಳಕ್ಕೆ ಕಳ್ಳಸಾಗಣೆ ಮಾಡುತ್ತಿದೆ. ರಾಜ್ಯಾದ್ಯಂತ ರೈತ ಸಂಪರ್ಕ ಕೇಂದ್ರಗಳಲ್ಲಿ ರೈತರು ದಿನಗಟ್ಟಲೇ ಕಾದರೂ ಗೊಬ್ಬರ ಸಿಗದೇ ಪರದಾಡುತ್ತಿದ್ದಾರೆ.”

“ರೈತ ವಿರೋಧಿ ಸಿದ್ದಾರಾಮಯ್ಯ ಸರ್ಕಾರ, ಮೈಸೂರು ಜಿಲ್ಲೆಯ ನಂಜನಗೂಡಿನ ಗೋದಾಮಿನಿಂದ 15 ಟನ್‌ ಗೊಬ್ಬರವನ್ನು ಕೇರಳಕ್ಕೆ ಕಳ್ಳಸಾಗಣೆ ಮಾಡಿದೆ. ಇದು ರಾಜ್ಯದ ರೈತರಿಗೆ ಮಾಡಿರುವ ದ್ರೋಹವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಕಾಳಸಂತೆಯಲ್ಲಿ ಯೂರಿಯಾ ಮಾರಾಟ

ರಾಯಚೂರು ಜಿಲ್ಲೆಯಲ್ಲಿ 79 ಟನ್ ಯೂರಿಯಾ ಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡಲಾಗಿತ್ತು. ಈ ಸಂಬಂಧ ರೈತರು ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದರು. ರಾಯಚೂರಿನ ಕಲ್ಲೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಗೋಡೌನ್​ಗೆ ಹೋಗಬೇಕಿದ್ದ ಯೂರಿಯಾ ಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲಾಗಿತ್ತು.

ಟ್ವಿಟರ್ ಪೋಸ್ಟ್​

ಇದನ್ನೂ ಓದಿ: ಕುಮಾರಸ್ವಾಮಿ ಚಳುವಳಿ ಮಾಡುವ ಬದಲು ಕೇಂದ್ರದಿಂದ ರಾಜ್ಯಕ್ಕೆ ಯೂರಿಯಾ ಬಿಡುಗಡೆ ಮಾಡಿಸಲಿ: ಸಿದ್ದರಾಮಯ್ಯ

ಬಿತ್ತನೆ ಪ್ರಮಾಣ ಹೆಚ್ಚು, ಬೇಡಿಕೆಯೂ ಹೆಚ್ಚು

ಈ ಬಾರಿ ಮೆಕ್ಕೆಜೋಳ ಹೆಚ್ಚು ಬೆಳೆದಿದ್ದಾರೆ. ಇದರಿಂದ ಯೂರಿಯಾಗೆ ಹೆಚ್ಚು ಬೇಡಿಕೆ ಇದೆ. ಯೂರಿಯಾ ಗೊಬ್ಬರ ಕೊರತೆ ಇರುವುದು ನಿಜ. ಕೆಲವರು ರೈತರಿಗೆ ಹೆಚ್ಚುವರಿ ಗೊಬ್ಬರ ತೆಗೆದುಕೊಳ್ಳಲು ಒತ್ತಾಯ ಮಾಡಿರಬಹುದು. ಆದರೆ, ನಾವು ಯೂರಿಯಾ ಜೊತೆ ಹೆಚ್ಚುವರಿಯಾಗಿ ನ್ಯಾನೋ ಡಿಎಪಿ ಹಾಕುವಂತೆ ಮನವಿ ಮಾಡುತ್ತಿದ್ದೇವೆ. ಇದರಿಂದ ಭೂಮಿ ಹಾಳಾಗುವುದಿಲ್ಲ, ಹೆಚ್ಚು ಯೂರಿಯಾ ಹಾಕಿದರೆ ಭೂಮಿ ಹಾಳಾಗುತ್ತದೆ ಎಂದು‌ ಮನವೊಲಿಕೆ ಮಾಡುತ್ತಿದ್ದೇವೆ ಇಷ್ಟೊಂದು ಪ್ರಮಾಣದಲ್ಲಿ ಯೂರಿಯಾ ಕೊರತೆ ಸಮಸ್ಯೆ ಆಗಿರುವುದು ಇದೇ ಮೊದಲು ಎಂದು ಗೊಬ್ಬರ ಅಂಗಡಿ ಮಾಲೀಕರು ಹೇಳಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:07 pm, Tue, 5 August 25

25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್