ಕಾಡುಪ್ರಾಣಿ ದಾಳಿಗೆ 3 ವರ್ಷದ ಮಗು ಸಾವು ಆರೋಪ: ವಲಯ ಅರಣ್ಯಾಧಿಕಾರಿ ಕಚೇರಿ ಎದುರು ಶವವಿಟ್ಟು ಪ್ರತಿಭಟನೆ

Chamarajanagar News: ಕಾಡುಪ್ರಾಣಿ ದಾಳಿಯಿಂದ 3 ವರ್ಷದ ಮಗು ಸಾವು ಆರೋಪಿಸಿ ವಲಯ ಅರಣ್ಯಾಧಿಕಾರಿ ಕಚೇರಿ ಎದುರು ಶವವಿಟ್ಟು ಪ್ರತಿಭಟನೆ ಮಾಡಿರುವಂತಹ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರು ವಲಯ ಅರಣ್ಯಾಧಿಕಾರಿ ಕಚೇರಿ ಎದುರು ನಡೆದಿದೆ.

ಕಾಡುಪ್ರಾಣಿ ದಾಳಿಗೆ 3 ವರ್ಷದ ಮಗು ಸಾವು ಆರೋಪ: ವಲಯ ಅರಣ್ಯಾಧಿಕಾರಿ ಕಚೇರಿ ಎದುರು ಶವವಿಟ್ಟು ಪ್ರತಿಭಟನೆ
ಪ್ರತಿಭಟನೆ ಮಾಡುತ್ತಿರುವ ಜನರು
Follow us
ಸೂರಜ್ ಪ್ರಸಾದ್ ಎಸ್.ಎನ್
| Updated By: ಗಂಗಾಧರ​ ಬ. ಸಾಬೋಜಿ

Updated on: Aug 24, 2023 | 5:10 PM

ಚಾಮರಾಜನಗರ, ಆಗಸ್ಟ್​ 24: ಕಾಡುಪ್ರಾಣಿ (wild animals) ದಾಳಿಯಿಂದ 3 ವರ್ಷದ ಮಗು ಸಾವು ಆರೋಪಿಸಿ ವಲಯ ಅರಣ್ಯಾಧಿಕಾರಿ ಕಚೇರಿ ಎದುರು ಶವವಿಟ್ಟು ಪ್ರತಿಭಟನೆ ಮಾಡಿರುವಂತಹ ಘಟನೆ ಜಿಲ್ಲೆಯ ಯಳಂದೂರು ಕಚೇರಿ ಎದುರು ನಡೆದಿದೆ. ಕಳೆದ ವಾರ ಯರಿಯೂರಲ್ಲಿ ಪ್ರಾಣಿ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ರುಕ್ಮಿಣಿ(3) ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ. ಬಾಲಕಿ ಚಿರತೆ ದಾಳಿಗೆ ಬಲಿಯಾಗಿದ್ದಾಳೆಂದು ಗ್ರಾಮಸ್ಥರು ಆರೋಪಿಸಿದ್ದು, ಬಾಲಕಿ ರುಕ್ಮಿಣಿ ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿ ಧರಣಿ ಮಾಡಲಾಗಿದೆ. ಸ್ಥಳಕ್ಕೆ ಚಾಮರಾಜನಗರ ಕ್ಷೇತ್ರದ ಶಾಸಕ ಸಿ.ಪುಟ್ಟರಂಗಶೆಟ್ಟಿ ಭೇಟಿ ನೀಡಿದ್ದಾರೆ.

ಬಹಿರ್ದೆಸೆಗೆ ತೆರಳಿದ ಆದಿವಾಸಿ ಯುವಕ ಮೇಲೆ ಒಂಟಿ ಸಲಗ ದಾಳಿ

ಬಹಿರ್ದೆಸೆಗೆ ಆಚೆ ಹೋದಾಗ ಯುವಕನ ಮೇಲೆ ಒಂಟಿ ಸಲಗ ದಾಳಿ ಮಾಡಿದ್ದು, ಆತ ಶಾಶ್ವತ ಅಂಗವಿಕಲನಾಗಿರುವಂತಹ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮೇಲುಕಾಮನಹಳ್ಳಿಯಲ್ಲಿ ಇತ್ತೀಚೆಗೆ ನಡೆದಿದೆ. ನಾಗೇಶ್ ಕಾಡಾನೆ ದಾಳಿಗೆ ಒಳಗಾದ ಯುವಕ. ಇಷ್ಟೆಲ್ಲಾ ಆದರೂ ಸೂಕ್ತ ಪರಿಹಾರ ನೀಡದೆ ಅರಣ್ಯಾಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಚಾಮರಾಜನಗರ: ಕಾಡಂಚಿನ ಜನರಿಗೆ ಉಪಟಳ ನೀಡುತ್ತಿದ್ದ ಪುಂಡಾನೆ ಸೆರೆ ಹಿಡಿದ ಕೂಂಬಿಂಗ್ ಕಿಂಗ್ ಬಲರಾಮ ತಂಡ

ತಡ ರಾತ್ರಿ ಬಹಿರ್ದೆಸೆಗೆ ತೆರಳಿದ ಆದಿವಾಸಿ ಯುವಕನ ಮೇಲೆ ಕಾಡಾನೆ ದಾಳಿ ನಡೆಸಿದೆ. ತನ್ನ ಸೊಂಡಲಿನಿಂದ ಎತ್ತಿ ಎಸೆದಿದೆ ಪರಿಣಾಮ ಯುವಕ ನಾಗೇಶ್​ನ ಬೆನ್ನುಮೂಳೆ ಪುಡಿ ಪುಡಿಯಾಗಿದ್ದು ರಾತ್ರಿಯಿಡಿ ಕಾಡನಲ್ಲೇ ನರಳಾಡಿದ್ದಾನೆ. ಬೆಳಗ್ಗೆ ಎದ್ದು ಗ್ರಾಮಸ್ಥರು ಬಹಿರ್ದೆಸೆಗೆ ಹೋದಾಗ ಘಟನೆ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಬೆಂಗಳೂರಿಗೂ ಕಾಲಿಟ್ಟ ಗಾಂಜಾ ಚಾಕೊಲೇಟ್ ಮಾರಾಟ ಜಾಲ; ಓರ್ವ ಆರೋಪಿ ಬಂಧನ

ನಾಗೇಶ್ ಕಾಡಿನಲ್ಲಿ ಬೆಂಕಿ ಬಿದ್ದಂತ ಸಮಯದಲ್ಲಿ ನಂದಿಸುವ ಕೆಲಸವನ್ನ ಮಾಡುತ್ತಿದ್ದ. ಪೌಚಿಂಗ್ ಕ್ಯಾಂಪ್ ಗಳಲ್ಲಿ ಸಣ್ಣ ಪುಟ್ಟ ಕೆಲಸ ಮಾಡಿಕೊಂಡು ಕಾರ್ಯ ನಿರ್ವಹಿಸುತ್ತಿದ್ದ. ಆದರೆ ಅತನಿಗೆ ಇಂತ ದುಸ್ಥಿತಿ ಎದುರಾದರೂ ಅರಣ್ಯಾಧಿಕಾರಿಗಳು ಮಾತ್ರ ಸ್ಪಂದಿಸಿಯೇ ಇಲ್ಲ. ಸೂಕ್ತ ಚಿಕಿತ್ಸೆ ನೀಡದೆ ಅತ್ತ ಪರಿಹಾರವನ್ನ ನೀಡದೆ ನಿರ್ಲಕ್ಷ್ಯ ವಹಿಸಿದ್ದಾರೆ.

ಹೊಲಕ್ಕೆ ಹೋದ ಮಹಿಳೆ ಮೇಲೆ ಚಿರತೆ ದಾಳಿ: ಸಾವು

ಶಿವಮೊಗ್ಗ: ಹೊಲಕ್ಕೆ ಹೋದ ಮಹಿಳೆ ಮೇಲೆ ಚಿರತೆ ದಾಳಿ ಮಾಡಿರುವಂತಹ ಘಟನೆ ಶಿವಮೊಗ್ಗ ತಾಲೂಕಿನ ಬಿಕ್ಕೋನ ಹಳ್ಳಿಯ ಹೊಲದಲ್ಲಿ ಇತ್ತೀಚೆಗೆ ನಡೆದಿತ್ತು. ಯಶೋದಮ್ಮ (45) ಮೃತ ಮಹಿಳೆ. ಹೊಲದಲ್ಲಿ ಕಳೆ ತೆಗೆಯುವಾಗ ದಾಳಿ ನಡೆಸಿದೆ. ಚಿರತೆಯ ದಾಳಿಗೆ ಯಶೋದಮ್ಮ ಬಲಿಯಾಗಿದ್ದರು. ಶಿವಮೊಗ್ಗದ ಬಿಕ್ಕೋನ ಹಳ್ಳಿ ಸರ್ವೆ ನಂಬರ್ 9 ರಲ್ಲಿ ಈ ದಾಳಿ ನಡೆದಿತ್ತು. ಅರಣ್ಯ ಇಲಾಖೆಯ ಅಧಿಕಾರಿಗಳ ಮಾಹಿತಿಯ ಪ್ರಕಾರ ಈ ದಾಳಿ ಕಾಡು ಪ್ರಾಣಿಗಳ ದಾಳಿ ನಡೆದಿರುವುದು ಖಚಿತ ಪಡಿಸಿದ್ದರು. ಘಟನಾ ಸ್ಥಳಕ್ಕೆ ಶಿವಮೊಗ್ಗ ಗ್ರಾಮಾಂತರ ಪೊಲೀಸರು ಮತ್ತು ಶಂಕರವಲಯ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ನಿಜಾಮನ ರಜಾಕರು ಮುಸಲ್ಮಾನರಲ್ಲ ಅಂತ ಪ್ರಿಯಾಂಕ್ ಹೇಳುತ್ತಾರೆ: ಯತ್ನಾಳ್
ನಿಜಾಮನ ರಜಾಕರು ಮುಸಲ್ಮಾನರಲ್ಲ ಅಂತ ಪ್ರಿಯಾಂಕ್ ಹೇಳುತ್ತಾರೆ: ಯತ್ನಾಳ್
‘ಸುಮ್ಮನಿರುವ ಮಗ ನಾನಲ್ಲ’: ಸಿಡಿದೆದ್ದ ಧನರಾಜ್; ಸಮಾಧಾನ ಮಾಡಿದ ಹನುಮ
‘ಸುಮ್ಮನಿರುವ ಮಗ ನಾನಲ್ಲ’: ಸಿಡಿದೆದ್ದ ಧನರಾಜ್; ಸಮಾಧಾನ ಮಾಡಿದ ಹನುಮ
ಜೆಡಿಎಸ್ ಕೇವಲ ಒಂದು ಕುಟುಂಬದ ಪಕ್ಷವಾಗಿ ಉಳಿದುಬಿಟ್ಟಿದೆ: ಯೋಗೇಶ್ವರ್
ಜೆಡಿಎಸ್ ಕೇವಲ ಒಂದು ಕುಟುಂಬದ ಪಕ್ಷವಾಗಿ ಉಳಿದುಬಿಟ್ಟಿದೆ: ಯೋಗೇಶ್ವರ್
ಪ್ರತಿ ಹುಟ್ಟುಹಬ್ಬಕ್ಕೆ ಇಬ್ರಾಹಿಂ ನನಗೆ ವಿಶ್ ಮಾಡುತ್ತಾರೆ: ಜಿಟಿ ದೇವೇಗೌಡ
ಪ್ರತಿ ಹುಟ್ಟುಹಬ್ಬಕ್ಕೆ ಇಬ್ರಾಹಿಂ ನನಗೆ ವಿಶ್ ಮಾಡುತ್ತಾರೆ: ಜಿಟಿ ದೇವೇಗೌಡ
ದೊಡ್ಮನೆಗೆ ಬರೋಕಿಂತ ಮುನ್ನ ಧರ್ಮ, ಅನುಷಾ ರೈ ನಡುವೆ ಬ್ರೇಕಪ್ ಆಗಿತ್ತಾ?
ದೊಡ್ಮನೆಗೆ ಬರೋಕಿಂತ ಮುನ್ನ ಧರ್ಮ, ಅನುಷಾ ರೈ ನಡುವೆ ಬ್ರೇಕಪ್ ಆಗಿತ್ತಾ?
ಯೋಗೇಶ್ವರ್ ಕೇವಲ ಅಭಿವೃದ್ಧಿ ಕೆಲಸಗಳನ್ನು ಉಲ್ಲೇಖಿಸಿ ಮತ ಕೇಳಿದರು: ಶಾಸಕ
ಯೋಗೇಶ್ವರ್ ಕೇವಲ ಅಭಿವೃದ್ಧಿ ಕೆಲಸಗಳನ್ನು ಉಲ್ಲೇಖಿಸಿ ಮತ ಕೇಳಿದರು: ಶಾಸಕ
ಸಿಎಂ ಇಬ್ರಾಹಿಂ ಮತ್ತು ಜಿಟಿ ದೇವೇಗೌಡ ನೊಂದಜೀವಿ ಮತ್ತು ಸಮಾನಮನಸ್ಕರು
ಸಿಎಂ ಇಬ್ರಾಹಿಂ ಮತ್ತು ಜಿಟಿ ದೇವೇಗೌಡ ನೊಂದಜೀವಿ ಮತ್ತು ಸಮಾನಮನಸ್ಕರು
‘ಯಾರೂ ನನ್ನನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಂಗಿಲ್ಲ’: ಉಗ್ರಂ ಮಂಜು ಆಜ್ಞೆ
‘ಯಾರೂ ನನ್ನನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಂಗಿಲ್ಲ’: ಉಗ್ರಂ ಮಂಜು ಆಜ್ಞೆ
ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ
ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ
ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ
ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ