ಕೆಎಸ್ಆರ್ಟಿಸಿ ಬಸ್ ಡಿಕ್ಕಿ; ರಸ್ತೆ ದಾಟುತ್ತಿದ್ದ 6 ವರ್ಷದ ವಿದ್ಯಾರ್ಥಿನಿ ಸಾವು
ಅಪಘಾತ ತಡೆಯಲು ಸಂಚಾರಿ ಪೊಲೀಸರು ಎಷ್ಟೇ ಕಟ್ಟುನಿಟ್ಟಿನ ಕ್ರಮಕೈಗೊಂಡರು ಇದಕ್ಕೆ ಬ್ರೇಕ್ ಹಾಕಲಾಗುತ್ತಿಲ್ಲ. ಅದರಂತೆ ಇಂದು (ಬುಧವಾರ) ಸಂಜೆ ಚಾಮರಾಜನಗರ (Chamarajanagar) ತಾಲೂಕಿನ ಮಾದಾಪುರದ ಬಳಿ ಕೆಎಸ್ಆರ್ಟಿಸಿ ಬಸ್(KSRTC Bus) ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಚಾಮರಾಜನಗರ, ಜು.10: ಕೆಎಸ್ಆರ್ಟಿಸಿ ಬಸ್(KSRTC Bus) ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿ ಸಾವನ್ನಪ್ಪಿರುವ ದಾರುಣ ಘಟನೆ ಇಂದು(ಬುಧವಾರ) ಸಂಜೆ ಚಾಮರಾಜನಗರ (Chamarajanagar) ತಾಲೂಕಿನ ಮಾದಾಪುರದ ಬಳಿ ನಡೆದಿದೆ. ತನಿಷ್ಕಾ(6) ಮೃತ ರ್ದುದೈವಿ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನ ಸಿಮ್ಸ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಈ ಕುರಿತು ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ರಸ್ತೆ ಬದಿಯ ತಡೆಗೋಡೆಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಸಾವು
ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ರೂಗಿ ಕ್ರಾಸ್ ಬಳಿ ಅಪಘಾತವೊಂದು ಸಂಭವಿಸಿದ್ದು, ಇಬ್ಬರು ಕೊನೆಯುಸಿರೆಳೆದ ಘಟನೆ ನಡೆದಿದೆ. ಹೌದು, ರಸ್ತೆ ಬದಿಯ ತಡೆಗೋಡೆಗೆ ಬೈಕ್ ಡಿಕ್ಕಿಯಾಗಿ ಬೈಕ್ನಲ್ಲಿದ್ದ ಇಬ್ಬರು ಯುವಕರಾದ ನಾಗೇಶ್ ನಾವಿ(27) ಹಾಗೂ ಸಿದ್ದು ಬಿರಾದಾರ(37) ಎಂಬುವವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆ ಇಂಡಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇದನ್ನೂ ಓದಿ:ಚಾಮರಾಜನಗರ: ಬೈಕ್ಗೆ ಅಪರಿಚಿತ ಕಾರು ಡಿಕ್ಕಿ; ಇಬ್ಬರು ಸವಾರರು ಸ್ಥಳದಲ್ಲೇ ಸಾವು
ರಸ್ತೆ ದಾಟುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು
ಹಾವೇರಿ: ರಸ್ತೆ ದಾಟುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ಬಳಿ ನಡೆದಿದೆ. ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ದುರ್ಗಮ್ಮ ಹೊನ್ನಕ್ಕಳವರ(52) ಮೃತರಾಗಿದ್ದಾರೆ. ಹುಬ್ಬಳ್ಳಿಯಿಂದ ಬೆಂಗಳೂರು ಕಡೆಗೆ ಹೊರಟಿದ್ದ ಕಾರು ಇದಾಗಿದ್ದು, ಸ್ಥಳಕ್ಕೆ ರಾಣೆಬೆನ್ನೂರು ಗ್ರಾಮೀಣ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಚಲಿಸುತ್ತಿದ್ದ ರೈಲು ಬಡಿದು ವ್ಯಕ್ತಿಯ ಕೈ ಕಟ್, ಪ್ರಾಣಾಪಾಯದಿಂದ ಪಾರು
ಉತ್ತರ ಕನ್ನಡ: ಭಟ್ಕಳ ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ಕುಡಿದು ಹುಚ್ಚಾಟ ಮಾಡ್ತಿದ್ದ ದೇವಿದಾಸ್ ಮೊಗೇರ್ ಎಂಬುವವರಿಗೆ ಚಲಿಸುತ್ತಿದ್ದ ರೈಲು ಬಡಿದು ಕೈ ಕಟ್ ಆಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಭಟ್ಕಳ ಸರ್ಕಾರಿ ಆಸ್ಪತ್ರೆಯಿಂದ ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಕುರಿತು ಭಟ್ಕಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ