ಚಾಮರಾಜನಗರ, ಮಾರ್ಚ್.24: ಬಿಳಿಗಿರಿರಂಗನ ಬೆಟ್ಟ ಹುಲಿಸಂರಕ್ಷಿತ ಅರಣ್ಯದಲ್ಲಿ (BR Tiger Reserve and Wildlife Sanctuary) ಕಾಡಾನೆ ಮೃತಪಟ್ಟಿದೆ. ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಕೆಂಕೆರೆ ಕೆರೆ ಸಮೀಪ ಹೆಣ್ಣಾನೆ (Elephant Death) ಮೃತಪಟ್ಟಿದ್ದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು. ಸದ್ಯ ಹೆಣ್ಣಾನೆಯ ಮರಣೋತ್ತರ ಪರೀಕ್ಷೆ ನಡೆಸಿದ ಪಶು ವೈದ್ಯಾಧಿಕಾರಿಗಳು ಮರಣೋತ್ತರ ಪರೀಕ್ಷೆಯಲ್ಲಿ ಸಹಜವಾಗಿ ಮೃತಪಟ್ಟಿದೆ ಎಂದು ದೃಢಪಟ್ಟಿದೆ.
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಸಬಾನಂದಗಡ ಗ್ರಾಮದಲ್ಲಿ ಕಾಡಾನೆ ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಕಾಡಾನೆಯು ಪಶ್ಚಿಮಘಟ್ಟ ಅರಣ್ಯ ಪ್ರದೇಶದಿಂದ ನಾಡಿಗೆ ಬಂದಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು, ಪೊಲೀಸರ ಭೇಟಿ ನೀಡಿದ್ರು. ಜಮೀನು ಮತ್ತು ಗ್ರಾಮದ ಮುಖ್ಯ ಓಣಿಯಲ್ಲಿ ಆನೆ ಓಡಾಡಿದೆ. ನಂದಗಡ ಮಾರ್ಗವಾಗಿ ಕಾಡಾನೆಯನ್ನ ಕಾಡಿಗೆ ಓಡಿಸಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಹಾಸ ಪಟ್ರು.
ಇದನ್ನೂ ಓದಿ: ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಮಿಷನರ್
ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಹಿಳೆ ಕುಟುಂಬಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಾಂತ್ವನ ಹೇಳಿದ್ರು. ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ಲೋಕಮ್ಮನಹಳ್ಳಿ ಬಳಿ ಅಪಘಾತ ನಡೆದಿತ್ತು. ಚುನಾವಣಾ ಪ್ರಚಾರ ಸಭೆ ಮುಗಿಸಿ ತುಮಕೂರಿಗೆ ಹಿಂದಿರುಗುತ್ತಿದ್ದ ಸಚಿವರು, ಅಪಘಾತದ ಸ್ಥಳದಲ್ಲಿ ಕಾರು ನಿಲ್ಲಿಸಿ ಮೃತ ಮಹಿಳೆ ಕುಟುಂಬಕ್ಕೆ ಸಾಂತ್ವಾನ ಹೇಳಿದ್ರು.
ಬರದ ಹೊಡೆತಕ್ಕೆ ತುಂಗಭದ್ರ ನದಿ ಬತ್ತಿ ಹೋಗಿದ್ದು, ದಾವಣಗೆರೆ ಜಿಲ್ಲೆಯ ಹರಿಹರ ನಗರದಲ್ಲಿ ಜನರು ನೀರಿಗಾಗಿ ಪರದಾಡುತ್ತಿದ್ದಾರೆ. ಹರಿಹರ ನಗರದ ಬಹುತೇಕ ಪ್ರದೇಶಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗ್ತಿದೆ. ನಗರಸಭೆ ಸದಸ್ಯ ಖಲಂದರ್ ನೇತೃತ್ವದಲ್ಲಿ ನಿವಾಸಿಗಳು ಖಾಲಿಕೊಡ ಹಿಡಿದು ನಗರ ಸಭೆ ಮುಂದೆ ಪ್ರತಿಭಟನೆ ನಡೆಸಿದ್ರು. ನಗರಸಭೆಯ ಮುಖ್ಯಾಧಿಕಾರಿ ಜೊತೆಗೆ ಮಾತಿನ ಚಕಮಕಿ ನಡೆಸಿದ್ರು. ತುರ್ತಾಗಿ ಕುಡಿಯುವ ನೀರು ಪೂರೈಕೆ ಮಾಡುವಂತೆ ಆಗ್ರಹಿಸಿದ್ರು.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ