AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಮದುವೆಯಾದ ಒಂಬತ್ತೇ ತಿಂಗಳಲ್ಲಿ ಗೃಹಿಣಿ ಶವ ಬಾವಿಯಲ್ಲಿ ಪತ್ತೆ; ವರದಕ್ಷಿಣೆ ಕಿರುಕುಳ ಆರೋಪ

ಆಕೆ ಮದುವೆಯಾಗಿ ಕೇವಲ ಒಂಬತ್ತು ತಿಂಗಳಾಗಿತ್ತು. ಅನಕ್ಷರಸ್ಥೆಯಾಗಿದ್ದ 22 ವರ್ಷದ ಗೃಹಿಣಿ ಇನ್ನು ಬಾಳಿ ಬದುಕಬೇಕಿದ್ದವಳು. ಆದರೆ ಅವಳ ಶವ ತೆರೆದ ಬಾವಿಯಲ್ಲಿ ಪತ್ತೆಯಾಗಿದೆ. ಇದು ಕೊಲೆಯೋ ಆತ್ಮಹತ್ಯೆಯೋ ಎಂಬ ಅನುಮಾನ ಹುಟ್ಟಿಕೊಂಡಿದೆ.

ಚಾಮರಾಜನಗರ: ಮದುವೆಯಾದ ಒಂಬತ್ತೇ ತಿಂಗಳಲ್ಲಿ ಗೃಹಿಣಿ ಶವ ಬಾವಿಯಲ್ಲಿ ಪತ್ತೆ; ವರದಕ್ಷಿಣೆ ಕಿರುಕುಳ ಆರೋಪ
ಮೃತ ಶಾಲಿನಿ ಪೋಷಕರ ಆಕ್ರಂಧನ
ಕಿರಣ್ ಹನುಮಂತ್​ ಮಾದಾರ್
|

Updated on:Mar 26, 2023 | 7:02 AM

Share

ಚಾಮರಾಜನಗರ: ಮಗಳ ಮೃತದೇಹದ ಎದುರು ಆಕ್ರಂಧನ ವ್ಯಕ್ತಪಡಿಸುತ್ತಿರುವ ಮೃತ ಶಾಲಿನಿ (22) ತಂದೆ ಶಾಂತಪ್ಪ ಮತ್ತು ಚಿಕ್ಕಮ್ಮ ಚಿನ್ನಮ್ಮ. ಮರಣೋತ್ತರ ಪರೀಕ್ಷೆ ಬಳಿಕ ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತೆ, ಶವ ಪರೀಕ್ಷೆಗೆ ಅನುವು ಮಾಡಿಕೊಡಿ ಎನ್ನುತ್ತಿರುವ ಪೊಲೀಸರು. ಇದೆಲ್ಲ ಕಂಡುಬಂದಿದ್ದು ಚಾಮರಾಜನಗರ ತಾಲೂಕಿನ ಮೂಡ್ನಾಕೂಡು ಗ್ರಾಮದಲ್ಲಿ. ಕಳೆದ ಒಂಬತ್ತು ತಿಂಗಳ ಹಿಂದೆ ಮಾದಾಪಟ್ಟಣ ಗ್ರಾಮದ ಶಾಲಿನಿ ಅವರನ್ನ ಮೂಡ್ನಾಕೂಡು ಗ್ರಾಮದ ಮಹೇಶ್ ಎಂಬಾತನಿಗೆ ಮದುವೆ ಮಾಡಿಕೊಡಲಾಗಿತ್ತು. ಸರಳ ಮದುವೆ ಮಾಡಿಕೊಟ್ಟಿದ್ದ ಶಾಂತಪ್ಪ 50 ಸಾವಿರ ರೂಪಾಯಿ ವರದಕ್ಷಿಣೆ ಸಹ ನೀಡಿದ್ದನಂತೆ. ಆದರೆ ಪತಿ ಮಹೇಶ್ ಹಾಗೂ ಆತನ ಪೋಷಕರು ಶಾಲಿನಿಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರಂತೆ. ಈ ವಿಚಾರವಾಗಿ ಆಗಾಗ ಗಲಾಟೆಯಾಗಿ ಶಾಲಿನಿ ತವರು ಮನೆಗೆ ಹೋಗಿದ್ದಳಂತೆ. ಆದರೆ ಶನಿವಾರ ಬೆಳಗ್ಗೆ ಗ್ರಾಮದ ತಮ್ಮದೇ ಜಮೀನಿನ ಬಾವಿಯಲ್ಲಿ ಆಕೆಯ ಶವ ಪತ್ತೆಯಾಗಿದ್ದು ಗಂಡನ ಮನೆಯವರು ಕೊಲೆ ಮಾಡಿದ್ದಾರೆ ಎಂದು ಮೃತಳ ಕುಟುಂಬಸ್ಥರು ಆರೋಪಿಸುತ್ತಿದ್ದಾರೆ.

ಇನ್ನು ಶಾಲಿನಿ ಮೃತದೇಹ ಬಾವಿಯಲ್ಲಿ ತೇಲಾಡುತ್ತಿರುವುದನ್ನ ಕಂಡ ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ. ಕೂಡಲೇ ತವರು ಮನೆಯವರು ಬಂದು ಮಹೇಶ್ ಹಾಗೂ ಆತನ ಪಾಲಕರನ್ನ ಬಂಧಿಸಬೇಕು ಎಂದು ಒತ್ತಾಯಿಸಿದರು. ಪರಿಸ್ಥಿತಿ ವಿಕೋಪಕ್ಕೆ ಹೋಗುವುದನ್ನ ತಡೆಯಲು ಪೊಲೀಸರು ಆರೋಪಿ ಮಹೇಶ್​ನನ್ನ ಬಂಧಿಸಿದ್ದಾರೆ. ಆದರೆ ಆತನ ತಂದೆ ತಾಯಿಯನ್ನ ವಶಕ್ಕೆ ಪಡೆಯಲಿಲ್ಲ. ಹೀಗಾಗಿ ಶಾಲಿನಿ ಕುಟುಂಬಸ್ಥರು ಪೊಲೀಸರ ವಿರುದ್ಧ ಹರಿಹಾಯ್ದಿದ್ದಾರೆ.

ಇದನ್ನೂ ಓದಿ:ವಿಜಯಪುರ: ನಗರದ ಲಾಡ್ಜೊಂದರಲ್ಲಿಇಬ್ಬರು ವ್ಯಕ್ತಿಗಳ ಶವ ಪತ್ತೆ; ಕೊಲೆಯೋ, ಆತ್ಮಹತ್ಯೆಯೋ?

ಪೊಲೀಸರು ಸಹ ಆರೋಪಿಗಳ ಜೊತೆ ಶಾಮೀಲಾಗಿ ಅನ್ಯಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಪರಿಸ್ಥಿತಿ ವಿಷಮ ಸ್ಥಿತಿಗೆ ತಲುಪುತ್ತಿರುವುದನ್ನು ಅರಿತ ಡಿವೈಎಸ್ಪಿ ಪ್ರಿಯದರ್ಶಿನಿ, ತಹಸೀಲ್ದಾರ್ ಬಸವರಾಜ್ ಸ್ಥಳಕ್ಕಾಗಮಿಸಿ ಮರಣೋತ್ತರ ಪರೀಕ್ಷೆಗೆ ಅನುವು ಮಾಡಿಕೊಡಿ ಎಂದರು. ಆದರೆ ಗ್ರಾಮದವರು ಮಾತ್ರ ಯಾವ ಕಾರಣಕ್ಕೂ ತಪ್ಪಿತಸ್ಥರ ಬಂಧನದವರೆಗೆ ಶವ ಕೊಡಲ್ಲ ಎಂದು ಪಟ್ಟು ಹಿಡಿದರು. ಹೀಗೆ ಅರ್ಧ ಗಂಟೆ ಚರ್ಚೆ ಬಳಿಕ ಪೊಲೀಸರಿಗೆ ಶವ ಒಪ್ಪಿಸಲಾಯಿತು. ಪೊಲೀಸರು ನ್ಯಾಯ ದೊರಕಿಸಿಕೊಡಲಿ ಎನ್ನುತ್ತಾರೆ ಮೃತಳ ಸಂಬಂಧಿಕರು.

ಶಾಲಿನಿ ಅವರದ್ದು ಕೊಲೆಯೋ ಆತ್ಮಹತ್ಯೆಯೋ ಎಂಬುದು ಪೋಸ್ಟ್ ಮಾರ್ಟಂ ರಿಪೋರ್ಟ್ ಬಳಿಕವೇ ಗೊತ್ತಾಗಲಿದೆ. ಆದರೆ ಈಗಷ್ಟೇ ನವ ಜೀವನ ಆರಂಭಿಸಬೇಕಿದ್ದಾಕೆ ಬಾರದ ಲೋಕಕ್ಕೆ ತೆರಳಿರುವುದು ದುರಂತವೇ ಸರಿ. ಚಾಮರಾಜನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಯಾವುದೇ ಮರ್ಜಿಗೆ ಒಳಗಾಗದೆ ಪ್ರಾಮಾಣಿಕ ತನಿಖೆ ನಡೆಸಲಿ ಎಂಬುದೇ ನಮ್ಮ ಆಶಯ.

ವರದಿ: ದಿಲೀಪ್ ಚೌಡಹಳ್ಳಿ ಟಿವಿ9 ಚಾಮರಾಜನಗರ

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:02 am, Sun, 26 March 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ