ʻಕರಿಮಣಿ ಮಾಲೀಕ ನೀನಲ್ಲʼ ಎಂದ ಪತ್ನಿ, ಮನನೊಂದು ಆತ್ಮಹತ್ಯೆಗೆ ಶರಣಾದ ಪತಿ

karimani malika ninalla: ಸೋಷಿಯಲ್​ ಮೀಡಿಯಾದಲ್ಲಿ ಎಲ್ಲಿ ನೋಡಿದರೂ ಉಪೇಂದ್ರ ಸಿನಿಮಾದ ಓ ನಲ್ಲ.. ನೀನಲ್ಲ, ಕರಿಮಣಿ ಮಾಲೀಕ ನೀನಲ್ಲ ಹಾಡಿನ ರೀಲ್ಸ್,​ ವಿಡಿಯೋಗಳು ವೈರಲ್​ ಆಗುತ್ತಲೇ ಇದೆ. ಇದೀಗ ಮಹಿಳೆಯೋರ್ವಳು ಈ ರೀಲ್ಸ್​ ಚಟಕ್ಕೆ ಬಿದ್ದಿದ್ದು, ಇದರಿಂದ ಮನನೊಂದ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ʻಕರಿಮಣಿ ಮಾಲೀಕ ನೀನಲ್ಲʼ ಎಂದ ಪತ್ನಿ, ಮನನೊಂದು ಆತ್ಮಹತ್ಯೆಗೆ ಶರಣಾದ ಪತಿ
ರೂಪ ರೀಲ್ಸ್​
Follow us
ಸೂರಜ್ ಪ್ರಸಾದ್ ಎಸ್.ಎನ್
| Updated By: ರಮೇಶ್ ಬಿ. ಜವಳಗೇರಾ

Updated on: Feb 15, 2024 | 5:20 PM

ಚಾಮರಾಜನಗರ, (ಫೆಬ್ರವರಿ 15): ರಿಯಲ್‌ ಸ್ಟಾರ್‌ ಉಪೇಂದ್ರ (Upendra) ನಟನೆಯ “ಉಪೇಂದ್ರʼʼ ಸಿನಿಮಾದ ಓ ನಲ್ಲ.. ನೀನಲ್ಲ, ಕರಿಮಣಿ ಮಾಲೀಕ ನೀನಲ್ಲ ಹಾಡು(karimani malika ninalla song) ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ಟ್ರೆಂಡಿಂಗ್‌ನಲ್ಲಿದೆ. ಎಲ್ಲರೂ ಹಾಡಿನ ರೀಲ್ಸ್, ಮಾಡಿದ್ದೇ ಮಾಡಿದ್ದು. ಅದರಂತೆ ಮಹಿಳೆಯೋರ್ವಳು ಇದೇ ಹಾಡಿಗೆ ರೀಲ್ಸ್​ ಮಾಡಿದ್ದು, ಇದರಿಂದ ಮನನೊಂದ ಪತಿ ಆತ್ಮಹತ್ಯೆ(Suicide) ಮಾಡಿಕೊಂಡಿದ್ದಾರೆ. ಚಾಮರಾಜನಗರ( Chamarajnagar) ಜಿಲ್ಲೆಯ ಹನೂರು ತಾಲೂಕಿನ ಪಿ.ಜಿ.ಪಾಳ್ಯ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪಿ.ಜಿ‌.ಪಾಳ್ಯ ಗ್ರಾಮದ ಕುಮಾರ್ (33) ನೇಣಿಗೆ ಶರಣಾದ ಪತಿ.

ಕುಮಾರ್‌ ಪತ್ನಿ ರೂಪಾ ಎಂಬಾಕೆ ತನ್ನ ಸೋದರಮಾವ ಹಾಗೂ ಸಹೋದರಿ ಜತೆಗೆ ಸೇರಿ ಓ ನಲ್ಲ, ನೀನಲ್ಲ.. ಕರಿಮಣಿ ಮಾಲೀಕ ನೀನಲ್ಲ ಎಂಬ ಸಾಂಗ್‌ಗೆ ರೀಲ್ಸ್‌ ಮಾಡಿ, ಸೋಶಿಯಲ್‌ ಮೀಡಿಯಾದಲ್ಲಿ ಅಪ್ಲೋಡ್‌ ಮಾಡಿದ್ದಳು. ಈ ರೀಲ್ಸ್‌ ವಿಚಾರಕ್ಕೆ ಊರಲ್ಲಿ ಕುಮಾರ್‌ನನ್ನು ಕೆಲವರು ಕಾಲೆಳೆದು ಯಾರಪ್ಪಾ ಕರಿಮಣಿ ಮಾಲೀಕ ಎಂದು ಹೀಯಾಳಿಸಿದ್ದರಿಂದ ಮನನೊಂದು ಕುಮಾರ್‌ ಆತ್ಮಹತ್ಯೆ ಶರಣಾಗಿದ್ದಾನೆ.

ಪತ್ನಿಯ ಈ ರೀಲ್ಸ್ ನೋಡಿ ಕುಮಾರ್​ನನ್ನು ಗೆಳೆಯರು ರೇಗಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕೋಪಗೊಂಡ ಕುಮಾರ್, ರೀಲ್ಸ್​ ಮಾಡಿರುವುದನ್ನು ಪ್ರಶ್ನಿಸಿ ರೂಪ ಜೊತೆ ಗಲಾಟೆ ಮಾಡಿದ್ದಾರೆ.​ ಬಳಿಕ ಅದೇನಾಯ್ತೋ ಏನು ಮನನೊಂದ ರೂಪಳ ಪತಿ ಕುಮಾರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ