ಚಾಮರಾನಗರ: ಅಜ್ಜನ ಅಂತ್ಯಕ್ರಿಯೆಗೆ ತೆರಳುತ್ತಿದ್ದ ಮೆಡಿಕಲ್ ವಿದ್ಯಾರ್ಥಿ ದುರಂತ ಅಂತ್ಯ
ತಾತಾನ ಅಂತ್ಯಕ್ರಿಯೆಗೆ ತೆರಳುತ್ತಿದ್ದ ಮೆಡಿಕಲ್ ವಿದ್ಯಾರ್ಥಿ ಅಪಘಾತದಲ್ಲಿ ಮೃತಪಟ್ಟಿದ್ದಾನೆ. ಎರಡನೇ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ನಿತೀಶ್ ಪೂಜಾರಿ, ತಾತನ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದಾ ಬೈಕ್ ನಿಯಂತ್ರಣ ತಪ್ಪಿ ಬಿದ್ದು ಮೃತಪಟ್ಟಿದ್ದಾನೆ.
ಚಾಮರಾನಗರ, (ನವೆಂಬರ್ , 27): ತಾತಾನ ಅಂತ್ಯಕ್ರಿಯೆಗೆ ತೆರಳುತ್ತಿದ್ದ ಮೆಡಿಕಲ್ ವಿದ್ಯಾರ್ಥಿ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಚಾಮರಾಜನಗರ (Chamarajnagar ) ತಾಲೋಕು ಪಣ್ಯದಹುಂಡಿ ಬಳಿ ನಡೆದಿದೆ. ನಿತೀಶ್ ಪೂಜಾರಿ ((23) ಮೃತ ವಿದ್ಯಾರ್ಥಿ. ಚಾಮರಾಜನಗರ ಸರ್ಕಾರಿ ಮೆಡಿಕಲ್ ಕಾಲೇಜಿನ ಎರಡನೇ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ನಿತೀಶ್ ಪೂಜಾರಿ, ತಾತನ ಅಂತ್ಯಕ್ರಿಯೆಯಲ್ಲಿ ಬೈಕ್ನಲ್ಲಿ ಹೋಗುತ್ತಿದ್ದಾಗ ಅಪಘಾತವಾಗಿದೆ. ಪಣ್ಯದಹುಂಡಿ ಬಳಿ ರೋಡ್ ಹಂಪ್ಸ್‌ನಲ್ಲಿ ನಿಯಂತ್ರಣ ತಪ್ಪಿ ಬಿದ್ದಿರಬಹುದು ಎನ್ನಲಾಗಿದ್ದು, ಈ ಬಗ್ಗೆ ಚಾಮರಾಜನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಸ್‌ನಿಂದ ಬಿದ್ದ ವಿದ್ಯಾರ್ಥಿನಿ ತಲೆಗೆ ಗಂಭೀರ ಗಾಯ
ಚಲಿಸುತ್ತಿದ್ದ ಬಸ್‌ನಿಂದ ಕೆಳಗೆ ಇಳಿಯಲು ಹೋಗಿ ವಿದ್ಯಾರ್ಥನಿ ರಸ್ತೆಗೆ ಬಿದ್ದಿದ್ದಾಳೆ. ಪರಿಣಾಮ ವಿದ್ಯಾರ್ಥಿನಿ ತಲೆಗೆ ಗಂಭೀರ ಗಾಯವಾಗಿದೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿಯ ಅಂಬೇಡ್ಕರ್ ವೃತ್ತದ ಬಳಿ ಈ ಘಟನೆ ನಡೆದಿದೆ. ರಾಯಬಾಗದಿಂದ ಚಿಕ್ಕೋಡಿಗೆ ಆಗಮಿಸುತ್ತಿದ್ದ ಬಸ್‌ನಿಂದ ನಂದಿಕುರಳಿ ನಿವಾಸಿ ಸಂಜನಾ ದತ್ತವಾಡೆ(17)ಗೆ ಬಿದ್ದಿದ್ದಾಳೆ. ಇನ್ನು ಬಸ್‌ನಿಂದ ಕೆಳಗೆ ಬಿಳುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಚಿಕ್ಕೋಡಿ ತಾಲೂಕು ಆಸ್ಪತ್ರೆಯಲ್ಲಿ ವಿದ್ಯಾರ್ಥಿನಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಆದ್ರೆ, ಗಂಭೀರ ಗಾಯವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ