ಚಾಮರಾಜನಗರ: ಗುಂಡ್ಲುಪೇಟೆ (Gundlupete) ತಾಲೂಕಿನ ಕಮರಹಳ್ಳಿ ಮಾದಪಟ್ಟಣ ರಸ್ತೆಯಲ್ಲಿ ಶಾಲಾ ಬಸ್ (School Bus) ವೊಂದು ಪಲ್ಟಿಯಾಗಿದ್ದು, ಅದೃಷ್ಟವಶಾತ್ ಬಸ್ನಲ್ಲಿದ್ದ 20 ಮಕ್ಕಳು ಪಾರಾಗಿದ್ದಾರೆ. ಶಾಲೆಯಿಂದ ಮಕ್ಕಳನ್ನು ವಾಪಸ್ ಕರೆದೊಯ್ಯುತ್ತಿರುವಾಗ ಮೈಸೂರು (Mysore) ಜಿಲ್ಲೆ ನಂಜನಗೂಡಿನ (Nanjangudu) ಗ್ಲೋಬಲ್ ಪಬ್ಲಿಕ್ ಶಾಲೆಗೆ ಸೇರಿದ ಬಸ್ ಪಲ್ಟಿಯಾಗಿದೆ. ಈ ವಿಷಯವನ್ನು ಶಾಲಾ ಆಡಳಿತ ಮಂಡಳಿ ಪೋಷಕರಿಗೆ ತಿಳಿಸದೆ ಮಕ್ಕಳನ್ನು ಗೂಡ್ಸ್ ವಾಹನದಲ್ಲಿ ತಮ್ಮ ಗ್ರಾಮಗಳಿಗೆ ಕಳುಹಿಸಿದೆ. ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ, ನಾಲ್ವರು ಅಪಾಯದಿಂದ ಪಾರು
ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಬಿದರಹಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿದೆ. ಅದೃಷ್ಟವಶಾತ್ ಕಾರಿನಲ್ಲಿ ತೆರಳುತ್ತಿದ್ದ ನಾಲ್ವರು ಅಪಾಯದಿಂದ ಪಾರಾಗಿದ್ದಾರೆ.
ಟೋಲ್ ಸಂಗ್ರಹ ಮಾಡುತ್ತಿರುವುದಕ್ಕೆ ಆಕ್ರೋಶ
ಧಾರವಾಡ: ಹದಗೆಟ್ಟ ರಸ್ತೆಗೆ ಟೋಲ್ ಸಂಗ್ರಹಿಸದಂತೆ ಆಗ್ರಹಿಸಿ ಆಮ್ ಆದ್ಮಿ ಪಕ್ಷದಿಂದ ಪ್ರತಿಭಟನೆ ಮಾಡಿದೆ. ನಗರದ ಹೊರವಲಯದ ಗೋವಾ ರಸ್ತೆಯಲ್ಲಿ ಟೋಲ್ ಸಂಗ್ರಹಿಸುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಪ್ರಾಪ್ತ ಪ್ರೇಮಿಗಳು ನೇಣಿಗೆ ಶರಣು
ಹಾವೇರಿ: ಒಂದೇ ಹಗ್ಗದಲ್ಲಿ ಅಪ್ರಾಪ್ತ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬ್ಯಾಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಾಲಕಿ ಅನ್ಯಕೋಮಿನ ಬಾಲಕನೊಂದಿಗೆ ನೇಣಿಗೆ ಶರಣಾಗಿದ್ದಾಳೆ. ಘಟನಾ ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲಿಸಿದ್ದಾರೆ.
Published On - 10:49 pm, Wed, 13 July 22