ಚಾಮರಾಜನಗರ: ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ನಿಂದ ಬಿದ್ದು ಮಹಿಳೆ ಸಾವು

ಕೆಎಸ್ಆರ್​ಟಿಸಿ ಬಸ್​ನಿಂದ ಮಹಿಳೆಯೊಬ್ಬರು ಬಿದ್ದು ಮೃತಪಟ್ಟಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಮತ್ತೊಂದೆಡೆ ಫಾಲ್ಸ್​ನಲ್ಲಿ ಈಜಲು ಹೋಗಿದ್ದ ಮಂಡ್ಯ ಜಿಲ್ಲೆಯ ಯುವಕನ ಶವ ಪತ್ತೆಯಾಗಿದೆ. ಈ ಎರಡೂ ಪ್ರತ್ಯೇಕ ಘಟನೆಗಳ ವಿವರ ಇಲ್ಲಿದೆ.

ಚಾಮರಾಜನಗರ: ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ನಿಂದ ಬಿದ್ದು ಮಹಿಳೆ ಸಾವು
ವಿನೋದಾ, ಮೃತ ಮಹಿಳೆ
Edited By:

Updated on: Aug 29, 2023 | 12:50 PM

ಚಾಮರಾಜನಗರ, (ಆಗಸ್ಟ್ 29): ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ನಿಂದ (KSRTC Bus) ಮಹಿಳೆ ಬಿದ್ದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ (Chamarajanagar) ಜಿಲ್ಲೆಯಲ್ಲಿ ನಡೆದಿದೆ. ವಿನೋದಾ ಎನ್ನುವ ಮಹಿಳೆ ಹನೂರು ತಾಲೂಕಿನ ಮಲೆಮಹಾದೇಶ್ವರ ಬೆಟ್ಟದಿಂದ ಹನೂರು ಕಡೆ ತೆರಳುತ್ತಿದ್ದ ಸಾರಿಗೆ ಬಸ್​ನಿಂದ ಬಿದ್ದು ಮೃತಪಟ್ಟಿದ್ದಾಳೆ. ನಿನ್ನೆ(ಆಗಸ್ಟ್ 28) ಮಾಧ್ಯಾಹ್ನ ಮಾದಪ್ಪನ ದರ್ಶನ ಪಡೆದು ಮನೆ ಹಿಂದಿರುಗುವಾಗ, ಬಸ್​ನ ಹಿಂಬಾಗದ ಬಾಗಿಲಲ್ಲಿ ನಿಂತಿದ್ದ ವಿನೋದಾ ಕಾಲು ಜಾರಿ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ವಿನೋದಾ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕರಡಿಗೆರೆ ಗ್ರಾಮದ ವಿನೋದಾ ನಿನ್ನೆ(ಆಗಸ್ಟ್ 28) ಮಾಧ್ಯಾಹ್ನ ಮಾದಪ್ಪನ ದರ್ಶನ ಪಡೆದು ವಾಪಸ್​ ಮನೆಗೆ ಹಿಂದುರುವಾಗ ಈ ದುರ್ಘಟನೆ ಸಂಭವಿಸಿದೆ. ಬಸ್​ ಫುಲ್ ಗದ್ದಲ ಇದ್ದಿದ್ದರಿಂದ ಹಿಂಬಾಗದ ಬಾಗಿಲಲ್ಲಿ ನಿಂತಿದ್ದಳು. ಆ ವೇಳೆ ಕಾಲು ಜಾರಿ ಬಸ್​ನಿಂದ ಕೆಳಗೆ ಬಿದ್ದಿದ್ದಾರೆ. ಸದ್ಯ ಹನೂರು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೊತ್ತರ ಪರೀಕ್ಷೆ ನಡೆದಿದ್ದು, ಕುಟುಂಬಕ್ಕೆ ಹಸ್ತಾಂತರಿಸಲಾಗಿದ್ದು, ಈ ಕುರಿತು ಮಲೆ ಮಹದೇಶ್ವರ ಬೆಟ್ಟದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಹಾಸನ: ಶುಂಠಿಗೆ ಕಳೆನಾಶಕ ಸಿಂಪಡಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು, ರಕ್ತ ಪರೀಕ್ಷೆಯಲ್ಲಿ ವಿಷ ಇರೋದು ದೃಢ

ಈಜಲು ಹೋಗಿ ನೀರಿನಲ್ಲಿ ಮುಳುಗಿ ಯುವಕ ಸಾವು

ಮಂಡ್ಯ: ಈಜಲು ಹೋಗಿ ನೀರಿನಲ್ಲಿ ಮುಳುಗಿ ಯುವಕನೋರ್ವ ಜೀವ ಕಳೆದುಕೊಂಡಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಹಲಗೂರಿನ ಗಾಣಾಳು ಪಾಲ್ಸ್ ನಲ್ಲಿ ನಡೆದಿದೆ. ಮನುಕುಮಾರ್(27)ಮೃತ ಯುವಕ. ಖಾಸಗಿ ಬಸ್ ನ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಮನುಕುಮಾರ್, ಸ್ನೇಹಿತರೊಂದಿಗೆ ಪಾಲ್ಸ್ ನೋಡಲು ಹೋಗಿದ್ದ. ಈ ವೇಳೆ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಭೇಟಿ ಕಳೆದೆರಡೂ ದಿನಗಳಿಂದ ಮೃತ ಯುವಕನ ಶವಕ್ಕಾಗಿ ಹುಡುಕಾಟ ನಡೆಸಿದ್ದು, ಆದ್ರೆ, ಇಂದು ಯುವಕನ ಶವ ನೀರಿನಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು  ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 12:47 pm, Tue, 29 August 23

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us