ಚಾಮರಾಜನಗರ: ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಅಪಘಾತ, 5 ಸಾವು

ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಬಳಿ ಟಿಪ್ಪರ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮಂಡ್ಯ ಮೂಲದ ಐದು ಮಂದಿ ಕಾರಿನಲ್ಲಿದ್ದವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೊಳ್ಳೇಗಾಲದಿಂದ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಟಿಪ್ಪರ್ ಡಿಕ್ಕಿಯಾಗಿ ರಸ್ತೆ ಪಕ್ಕಕ್ಕೆ ಉರುಳಿಬಿದ್ದಿದೆ. ಪೊಲೀಸರು ಅಪಘಾತದ ತನಿಖೆ ನಡೆಸುತ್ತಿದ್ದಾರೆ.

ಚಾಮರಾಜನಗರ: ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಅಪಘಾತ, 5 ಸಾವು
ಜಖಂಗೊಂಡಿರುವ ಕಾರು
Edited By: ವಿವೇಕ ಬಿರಾದಾರ

Updated on: Mar 01, 2025 | 2:32 PM

ಚಾಮರಾಜನಗರ, ಮಾರ್ಚ್​ 01: ಕೊಳ್ಳೇಗಾಲ (Kollegal) ತಾಲೂಕಿನ ಚಿಕ್ಕಿಂದುವಾಡಿ ಬಳಿ ಟಿಪ್ಪರ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೈಸೂರು ಮೂಲದ ನಿಖಿತ, ಶ್ರೀಲಕ್ಷ್ಮಿ ಮಂಡ್ಯ ಮೂಲದ ಸುಹಾಸ್, ಶ್ರೇಯಸ್ ಅಲಿಯಾಸ್ ಶೆಟ್ಟಿ, ನಿತಿನ್ ಮೃತ ದುರ್ದೈವಿಗಳು. ಟಿಪ್ಪರ್​ ಡಿಕ್ಕಿಯಾದ ರಭಸಕ್ಕೆ ರಸ್ತೆ ಪಕ್ಕಕ್ಕೆ ಕಾರು ಉರುಳಿಬಿದ್ದಿದೆ. ಕಾರು ಕೊಳ್ಳೇಗಾಲದಿಂದ ಮಹದೇಶ್ವರ ಬೆಟ್ಟದ (Mahadeshwar Hill) ಕಡೆಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ. ಅಪಘಾತದ ಸ್ಥಳಕ್ಕೆ ಕೊಳ್ಳೇಗಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಘಟನೆ ಸಂಬಂಧ ಚಾಮರಾಜನಗರ ಪೊಲೀಸ್ ವರಿಷ್ಠಾಧಿಕಾರಿ ಡಾ‌.ಬಿ.ಟಿ.ಕವಿತಾ ಮಾತನಾಡಿ,  ಅಪಘಾತದಲ್ಲಿ ಮೃತಪಟ್ಟ ಐವರೂ ಕಾಲೇಜು ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ. ನಾಲ್ವರು ಇಂಜಿನಿಯರಿಂಗ್​ ವಿದ್ಯಾರ್ಥಿಗಳು, ಓರ್ವ ಡಿಪ್ಲೊಮಾ ವಿದ್ಯಾರ್ಥಿಯಾಗಿದ್ದಾರೆ. ಮೃತರು ಮೈಸೂರಿನ ಎಂಐಟಿ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ. ಶಿವರಾತ್ರಿ ಜಾತ್ರೆಗೆಂದು ಮಲೆಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಹೇಳಿದರು.

ಇದನ್ನೂ ಓದಿ: ಚಾಮರಾಜನಗರ: ನೀರಿನಲ್ಲಿ ಯೋಗ ಮಾಡುತ್ತಲೇ ಮೃತಪಟ್ಟ ಯೋಗಪಟು

ಇದನ್ನೂ ಓದಿ
ಬಸ್-ಕಾರು ನಡುವೆ ಅಪಘಾತ ಐವರು ಸಾವು, ಕಾರು ಕತ್ತರಿಸಿ ಶವ ಹೊರ ತೆಗೆದ್ರು
ರಸ್ತೆ ಅಪಘಾತದಲ್ಲಿ ಕರ್ನಾಟಕದ ನಾಲ್ವರು ಕುಂಭಮೇಳ ಯಾತ್ರಿಕರ ಸಾವು
ಬಂಟ್ವಾಳ: ಅಂಗಡಿಗೆ ನುಗ್ಗಿದ ಕಾರು, ವೃದ್ಧೆ ಸಾವು
ಕುಂಭಮೇಳಕ್ಕೆ​ ತೆರಳುತ್ತಿದ್ದ ಕ್ರೂಸರ್​ ವಾಹನ ಅಪಘಾತ: ಬೆಳಗಾವಿಯ 6 ಸಾವು

ಮೃತಪಟ್ಟವರಲ್ಲಿ ಶ್ರೀಲಕ್ಷ್ಮೀ ಕೊಳ್ಳೇಗಾಲ ತಾಲೂಕಿನ ಕೆಂಪನಪಾಳ್ಯದ ನಿವಾಸಿಯಾಗಿದ್ದಾರೆ. ಶ್ರೀಲಕ್ಷ್ಮೀ ಪೋಷಕರು  ಮಗಳ ಶಿಕ್ಷಣಕ್ಕಾಗಿ ಮೈಸೂರಿನಲ್ಲಿ ಮನೆ ಮಾಡಿಕೊಂಡಿದ್ದರು. ಸ್ನೇಹಿತರ ಜೊತೆ ಮಲೆಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದಾಗ ಕಾರಿಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಐವರು ಮೃತಪಟ್ಟಿದ್ದಾರೆ. ಸದ್ಯ ಟಿಪ್ಪರ್ ಚಾಲಕನಿಗಾಗಿ ಹುಡುಕಾಟ ನಡೆಸುತ್ತಿದ್ದೇವೆ ಎಂದು ತಿಳಿಸಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:12 am, Sat, 1 March 25

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us