ಹುಲಿ, ಮಂಗ ಆಯ್ತು ಈಗ ಚಿರತೆ ಸರದಿ: ಚಾಮರಾಜನಗರ ಕೊತ್ತಲವಾಡಿ ಬಳಿ ಚಿರತೆ ಶವ ಪತ್ತೆ

ಚಾಮರಾಜನಗರ ಜಿಲ್ಲೆಯಲ್ಲಿ ವನ್ಯ ಪ್ರಾಣಿಗಳ ಸಾವಿನ ಸರಣಿ ಮುಂದುವರಿದಿದೆ. ಹುಲಿಗಳ ಹತ್ಯಾಕಾಂಡ, ಮಂಗಗಳ ಸಾವಿನ ಬೆನ್ನಲ್ಲೇ ಇದೀಗ ಚಿರತೆಯೊಂದರ ಶವ ಅರ್ಧ ಕೊಳೆತ ಸ್ಥಿತಿಯಲ್ಲಿ ಕೊತ್ತಲವಾಡಿ ಬಳಿ ಪತ್ತೆಯಾಗಿದೆ. ಜತೆಗೆ ನಾಯಿ, ಹಾಗೂ ಕರುವಿನ ಶವಗಳೂ ಅರ್ಧ ಕೊಳೆತ ಸ್ಥಿತಿಯಲ್ಲಿ ಕಂಡುಬಂದಿದ್ದು, ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಹುಲಿ, ಮಂಗ ಆಯ್ತು ಈಗ ಚಿರತೆ ಸರದಿ: ಚಾಮರಾಜನಗರ ಕೊತ್ತಲವಾಡಿ ಬಳಿ ಚಿರತೆ ಶವ ಪತ್ತೆ
ಕೊತ್ತಲವಾಡಿ ಬಳಿ ಚಿರತೆ ಶವ ಪತ್ತೆ
Edited By:

Updated on: Jul 11, 2025 | 2:49 PM

ಚಾಮರಾಜನಗರ, ಜುಲೈ 11: ಮಲೆ ಮಹದೇಶ್ವರ ವನ್ಯಧಾಮ ವ್ಯಾಪ್ತಿಯ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ಐದು ಹುಲಿಗಳು ವಿಶಪ್ರಾಷನದಿಂದ ಮೃತಪಟ್ಟ ಕೆಲವೇ ದಿನಗಳ ನಂತರ ಗುಂಡ್ಲುಪೇಟೆ ತಾಲೂಕಿನ ಕಂದೇಗಾಲ-ಕೊಡಸೋಗೆ ರಸ್ತೆಯಲ್ಲಿ 18 ಕೋತಿಗಳ ಶವ ಪತ್ತೆಯಾಗಿತ್ತು. ಅವುಗಳನ್ನೂ ವಿಷವಿಕ್ಕಿ ಕೊಂದಿರುವುದು ತಿಳಿದುಬಂದಿತ್ತು. ಇದೀಗ ಚಿರತೆಯ ಸರದಿ. ಚಾಮರಾಜನಗರ  (Chamarajanagar) ತಾಲೂಕಿನ ಕೊತ್ತಲವಾಡಿ ಬಳಿ ಚಿರತೆ ಶವ ಶುಕ್ರವಾರ ಪತ್ತೆಯಾಗಿದೆ. ಗಣಿ ತ್ಯಾಜ್ಯದ‌ ಕಲ್ಲು ಸಂಗ್ರಹಿಸಿರುವ ಜಮೀನಿನಲ್ಲಿ ಕೊಳೆತ ಸ್ಥಿತಿಯಲ್ಲಿ ಚಿರತೆಯ ಕಳೇಬರ ಪತ್ತೆಯಾಗಿದೆ. 5 ವರ್ಷದ ಗಂಡು ಚಿರತೆ ಕಳೇಬರದ ಬಳಿ ನಾಯಿ ಮತ್ತು ಕರುವಿನ ಶವವೂ ಪತ್ತೆಯಾಗಿರುವುದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಸ್ಥಳಕ್ಕೆ ಬಿಆರ್​​ಟಿ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೆಟಲ್ ಡಿಟೆಕ್ಟರ್ ಜೊತೆಗೆ ಶ್ವಾನದಳವೂ ಆಗಮಿಸಿ ತಪಾಸಣೆ ನಡೆಸಿದೆ. ಸದ್ಯ ಬಿಆರ್​​ಟಿ ಡಿಸಿಎಫ್ ಶ್ರೀಪತಿ ಹಾಗೂ ಸಿಸಿಎಫ್ ಹೀರಾಲಾಲ್ ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ.

ಚಿರತೆ ಕಳೇಬರದ ಸುತ್ತಮುತ್ತ ಮೆಟಲ್ ಡಿಟೆಕ್ಟರ್​​​ನಿಂದಲೂ ಶೋಧ ಮಾಡಲಾಗಿದ್ದು, ಯಾರಾದರೂ ಗುಂಡು ಹೊಡೆದು ಕೊಂದಿದ್ದಾರೆಯೇ ಎಂಬ ಆಯಾಮದಲ್ಲೂ ತನಿಖೆ ನಡೆಯುತ್ತಿದೆ. ಚಿರತೆ ಕಳೇಬರದ ಪಕ್ಕದಲ್ಲೇ ಕರು ಹಾಗೂ ಒಂದು ಶ್ವಾನದ ಶವವೂ ಬಿದ್ದಿರುವುದು ಕಂಡುಬಂದಿದೆ. ಹೀಗಾಗಿ ಯಾರಾದರೂ ವಿಷ ಹಾಕಿ ಕೊಂದಿದ್ದಾರೆಯೇ ಎಂಬ ಆಯಾಮದಲ್ಲೂ ತನಿಖೆ ನಡೆಯುತ್ತಿದೆ. ಕಲ್ಲು ಕ್ವಾರಿ ಪಕ್ಕದಲ್ಲೇ ಚಿರತೆ ಮೃತಪಟ್ಟಿರುವ ಹಿನ್ನಲೆ ಕಲ್ಲು ಕ್ವಾರಿ ಮಾಲೀಕನ ಮೇಲೆಯೂ ಅನುಮಾನ ವ್ಯಕ್ತವಾಗಿದೆ.

ಇದನ್ನೂ ಓದಿ
5 ಹುಲಿಗಳ ಸಾವು ಪ್ರಕರಣ: ಪ್ರಾಥಮಿಕ ವರದಿಯಲ್ಲಿ ಸ್ಫೋಟಕ ಅಂಶ ಬಯಲಿಗೆ
ಚಾಮರಾಜನಗರ: ಕೊಡಸೋಗೆ ರಸ್ತೆಯಲ್ಲಿ 18 ಕೋತಿಗಳ ಶವ ಪತ್ತೆ
ಚಾಮರಾಜನಗರದಲ್ಲಿ ಐದು ಹುಲಿಗಳ ಸಾವು ಕೇಸ್​: ಕೊನೆಗೂ ಮೂವರ ಬಂಧನ​
ಐದು ಹುಲಿಗಳ ನಿಗೂಢ ಸಾವು ಬೆನ್ನಲ್ಲೇ ಬಂಡೀಪುರದಲ್ಲಿ ಮತ್ತೊಂದು ಹುಲಿ ಸಾವು

ವಿಷ ಹಾಕಿ ಕೊಂದಿರುವ ಶಂಕೆ: ಬಿಆರ್​​ಟಿ ಅರಣ್ಯಾಧಿಕಾರಿ ಶ್ರೀಪತಿ ಮಾಹಿತಿ

ಚಿರತೆಯನ್ನು ವಿಷ ಹಾಕಿ ಕೊಲೆ ಮಾಡಿರಬಹುದು ಎಂಬ ಅನುಮಾನ ಮೇಲ್ನೋಟಕ್ಕೆ ವ್ಯಕ್ತವಾಗಿದೆ ಎಂದು ಬಿಆರ್​​ಟಿ ಡಿಸಿಎಫ್ ಶ್ರೀಪತಿ ‘ಟಿವಿ9’ಗೆ ತಿಳಿಸಿದ್ದಾರೆ. ಚಿರತೆ ಕಳೇಬರದ ಪಕ್ಕದಲ್ಲೇ ನಾಯಿ, ಕರುವಿನ ಕಳೇಬರ ಪತ್ತೆಯಾಗಿದೆ. ಹಾಗಾಗಿ ಚಿರತೆಗೆ ವಿಷ ಹಾಕಿ ಕೊಂದಿರುವ ಶಂಕೆ ವ್ಯಕ್ತವಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: 5 ಹುಲಿಗಳ ಸಾವು ಪ್ರಕರಣ: ಉನ್ನತ ಸಮಿತಿಯ ಪ್ರಾಥಮಿಕ ವರದಿಯಲ್ಲಿ ಸ್ಫೋಟಕ ಅಂಶ ಬಯಲಿಗೆ

ಪಶು ವೈದ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿರತೆ, ನಾಯಿ, ಕರುವಿನ ಕಳೇಬರದ ಸ್ಯಾಂಪಲ್ ಸಂಗ್ರಹಿಸಲಾಗಿದ್ದು, ಲ್ಯಾಬ್​ಗೆ ಕಳುಹಿಸಲಾಗುತ್ತದೆ. ಎಫ್​ಎಸ್​ಎಲ್​​​ ವರದಿ ಬಳಿಕ ಸಾವಿಗೆ ಕಾರಣ ತಿಳಿಯಲಿದೆ ಎಂದು ಅವರು ಹೇಳಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂರಜ್ ಪ್ರಸಾದ್ ಎಸ್ಎನ್

ಸೂರಜ್ ಪ್ರಸಾದ್ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದಾರೆ. 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದರು. ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದಾರೆ. ಟಿವಿ9 ಕನ್ನಡ ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು ಇವರ ಹವ್ಯಾಸ.

Read More
Loading...
Unable to load recommendations.
Follow Us