ಬಂಡೀಪುರಕ್ಕೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆ; ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ನಿರ್ಬಂಧ
ಪ್ರಧಾನಿ ನರೇಂದ್ರ ಮೋದಿ ಭಾನುವಾರ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಏಪ್ರಿಲ್ 7ರ ಸಂಜೆ 4 ಗಂಟೆಯಿಂದ ಏಪ್ರಿಲ್ 9ರ ಮಧ್ಯಾಹ್ನ 12ರವರೆಗೆ ಬಂಡೀಪುರ ಮಾರ್ಗದಿಂದ ತಮಿಳುನಾಡಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 181 ಮತ್ತು 766ರಲ್ಲಿ (ಊಟಿ ರಸ್ತೆ) ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.
ಚಾಮರಾಜನಗರ: ಪ್ರಧಾನಿ ನರೇಂದ್ರ ಮೋದಿ (Narendra Modi) ಭಾನುವಾರ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಏಪ್ರಿಲ್ 7ರ ಸಂಜೆ 4 ಗಂಟೆಯಿಂದ ಏಪ್ರಿಲ್ 9ರ ಮಧ್ಯಾಹ್ನ 12ರವರೆಗೆ ಬಂಡೀಪುರ ಮಾರ್ಗದಿಂದ ತಮಿಳುನಾಡಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 181 ಮತ್ತು 766ರಲ್ಲಿ (ಊಟಿ ರಸ್ತೆ) ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಸರ್ಕಾರಿ ಬಸ್, ವಾಹನ ಹೊರತುಪಡಿಸಿ ಭಾರಿ ವಾಹನ ಸಂಚಾರ ನಿರ್ಬಂಧಿಸಿ ಚಾಮರಾಜನಗರ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಗುರುವಾರ ಆದೇಶ ಹೊರಿಡಿಸಿದ್ದಾರೆ. ಮೋದಿ ಭೇಟಿ ಹಿನ್ನೆಲೆಯಲ್ಲಿ ಭದ್ರತೆ, ರಸ್ತೆ ನಿರ್ವಹಣೆ ಹಾಗೂ ಇತರ ಸಿದ್ಧತೆ ಮಾಡಿಕೊಳ್ಳುವುದಕ್ಕಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಡಿ.ಎಸ್. ರಮೇಶ್ ಅವರು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.
ಬಂಡೀಪುರ ಅರಣ್ಯವನ್ನು ರಾಷ್ಟ್ರೀಯ ಹುಲಿ ಸಂರಕ್ಷಿತಾರಣ್ಯವೆಂದು ಘೋಷಿಸಿ 50 ವರ್ಷಗಳು ಸಂದ ಹಿನ್ನೆಲೆ ಏಪ್ರಿಲ್ 9ರಂದು ಪ್ರಧಾನಿ ನರೇಂದ್ರ ಮೋದಿಯವರು ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೇ ಭೇಟಿ ನೀಡಲಿದ್ದು, ಅಲ್ಲಿ ಸಫಾರಿ ನಡೆಸಲಿದ್ದಾರೆ. ಹೀಗಾಗಿ ಇಂದಿನಿಂದ (ಏಪ್ರಿಲ್ 6) ಭಾನುವಾರದ ವರೆಗೆ ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಅಲ್ಲದೇ ಬಂಡೀಪುರ ವ್ಯಾಪ್ತಿಯ ಎಲ್ಲಾ ಹೋಂಸ್ಟೇ, ರೆಸಾರ್ಟ್, ಲಾಡ್ಜ್ಗಳಲ್ಲಿ ಪ್ರವಾಸಿಗರ ವಾಸ್ತವ್ಯಕ್ಕೆ ನಿರ್ಬಂಧಿಸಲಾಗಿದೆ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಬುಧವಾರ ಆದೇಶ ಹೊರಡಿಸಿದ್ದರು.
ಇದನ್ನೂ ಓದಿ: ಏಪ್ರಿಲ್ 8, 9ರಂದು ಪ್ರಧಾನಿ ಮೋದಿ ಮೈಸೂರು ಪ್ರವಾಸದ ವೇಳಾಪಟ್ಟಿ ಹೀಗಿದೆ
ಏಪ್ರಿಲ್ 9ರಂದು ರಾಜ್ಯಕ್ಕೆ ಆಗಮಿಸಲಿರುವ ಮೋದಿ, ಮೈಸೂರಿನಲ್ಲಿ ಹುಲಿ ಸಂರಕ್ಷಣೆ ಸಂಬಂಧಿತ 3 ದಿನಗಳ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಈ ವೇಳೆ ಇತ್ತೀಚಿನ ಹುಲಿಗಣತಿ ವರದಿ, ಹುಲಿ ಸಂರಕ್ಷಣೆಗಾಗಿ ಸರ್ಕಾರ ಕೈಗೊಂಡ ಕ್ರಮಗಳ ವರದಿ, ಮತ್ತು ನಾಣ್ಯ ಸ್ಮರಣಿಕೆಯನ್ನು ಪ್ರಧಾನಿ ಬಿಡುಗಡೆ ಮಾಡಲಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:12 pm, Thu, 6 April 23