AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲೆ ಮಹದೇಶ್ವರ ಬೆಟ್ಟ ಇನ್ಮುಂದೆ ಪಾನ ಮುಕ್ತ: ಸಿಎಂ ಸಿದ್ದರಾಮಯ್ಯ ಘೋಷಣೆ

Male Mahadeshwara Hills: ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಗುರುವಾರದ ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಯಿತು. ಈ ವೇಳೆ ಹಲವು ವಿಚಾರಗಳ ಬಗ್ಗೆ ಚರ್ಚೆಯಾಗಿದ್ದು, ಮಲೆ ಮಹದೇಶ್ವರ ಬೆಟ್ಟ ಇನ್ನುಮುಂದೆ ಪಾನ ಮುಕ್ತ ಎಂದು ಘೋಷಿಸಿದ್ದಾರೆ. ಈ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮತ್ತು ಪ್ರಾಧಿಕಾರದ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಸೂಚನೆ ಕೊಟ್ಟಿದ್ದಾರೆ. ಹಾಗಾದ್ರೆ, ಸಭೆಯಲ್ಲಿ ಏನೇನು ಚರ್ಚೆಗಳಾದವು ಎನ್ನುವ ವಿವರ ಇಲ್ಲಿದೆ.

ಮಲೆ ಮಹದೇಶ್ವರ ಬೆಟ್ಟ ಇನ್ಮುಂದೆ ಪಾನ ಮುಕ್ತ:  ಸಿಎಂ ಸಿದ್ದರಾಮಯ್ಯ ಘೋಷಣೆ
Male Mahadeshwara Hills
ಪ್ರಸನ್ನ ಗಾಂವ್ಕರ್​
| Edited By: |

Updated on: Apr 24, 2025 | 6:46 PM

Share

ಚಾಮರಾಜನಗರ, (ಏಪ್ರಿಲ್ 24): ಮಲೆ ಮಹದೇಶ್ವರ ಬೆಟ್ಟ (Male Mahadeshwara Hills) ಇನ್ನು ಮುಂದೆ ಪಾನ ಮುಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಘೋಷಿಸಿದರು. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಇಂದು (ಏಪ್ರಿಲ್ 24) ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಸಿ ಮಹತ್ವದ ವಿಚಾರಗಳ ಬಗ್ಗೆ ಸಭೆ ನಡೆಸಿದ್ದು, ಇಲ್ಲಿಯವರೆಗೂ ಬೆಟ್ಟದಲ್ಲಿ, ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಾರಾಟ ಮುಕ್ತ ಇತ್ತು. ಇನ್ನು ಮುಂದೆ ಹೊರಗಿನಿಂದ ತರುವುದಕ್ಕೂ ಬ್ರೇಕ್​ ಹಾಕಬೇಕು ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮತ್ತು ಪ್ರಾಧಿಕಾರದ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್​ ಸೂಚನೆ ನೀಡಿದರು.

ಈ ವೇಳೆ ಹಿಂದಿನ ಪ್ರಾಧಿಕಾರದ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳು ಒಂದೂವರೆ ವರ್ಷದಿಂದ ಜಾರಿ ಆಗದೇ ಇರುವುದಕ್ಕೆ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರನ್ನು ತೀವ್ರವಾಗಿ ಪ್ರಶ್ನಿಸಿದರು. ಪ್ರವಾಸಿಗರ ಶೆಲ್ಟರ್ ಮತ್ತು ಶೌಚಾಲಯಗಳ ಕಾಮಗಾರಿ ಪೂರ್ಣಗೊಳ್ಳದ ಬಗ್ಗೆ ಸಿಎಂ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು. ಅಲ್ಲದೇ ಪ್ರಾಧಿಕಾರದ ಕೆಲಸ ಕಾರ್ಯಗಳು, ಕಾಮಗಾರಿಗಳು ಸೂಕ್ತವಾಗಿ, ವೇಗವಾಗಿ ನಡೆಯಲು ಒಬ್ಬ ಎಇಇಯನ್ನು ಪ್ರಾಧಿಕಾರಕ್ಕೇ ನೇಮಿಸಲು ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಸತ್ಯನಾರಾಯಣ್ ಅವರಿಗೆ ಸೂಚಿಸಿದರು.

ಇದನ್ನೂ ಓದಿ: ಬೆಂಗಳೂರಿಗೆ ಬಂದ 320 ಎಸಿ ಎಲೆಕ್ಟ್ರಿಕ್ ಬಸ್: ಮೊದಲ ಬಾರಿಗೆ ರಾಜಧಾನಿಯಲ್ಲಿ ಬಿಎಂಟಿಸಿ ಎಸಿ ಎಲೆಕ್ಟ್ರಿಕ್ ಬಸ್ ಸಂಚಾರ

ಪ್ರಾಧಿಕಾರ ಮತ್ತು ಮಹದೇಶ್ವರ ಬೆಟ್ಟಕ್ಕೆ ಸೇರಿದ ಜಾಗದಲ್ಲಿ ನೆಲೆಸಿರುವ 13 ಕುಟುಂಬಗಳಿಗೆ ಪರ್ಯಾಯ ಸ್ಥಳ ಒದಗಿಸಿ ಸ್ಥಳಾಂತರಿಸುವ ಮತ್ತು ಉಳಿದಿರುವವರನ್ನು ಹಾಗೇ ಉಳಿಸಿ, ಹೊಸದಾಗಿ ವಾಣಿಜ್ಯ ಉದ್ದೇಶದ ನಿರ್ಮಾಣಗಳಿಗೆ ಅವಕಾಶ ಆಗದಂತೆ ಖಚಿತವಾಗಿ ತಡೆಯುವ ಬಗ್ಗೆ ಚರ್ಚೆ ನಡೆಸಿದ್ದು, ಪ್ರಾಧಿಕಾರದಲ್ಲಿ ಕೆಲಸ ಮಾಡುವ 66 ಕಾರ್ಮಿಕ ಕುಟುಂಬಗಳಿಗೆ ತಲಾ 20 ಲಕ್ಷ ರೂ. ವೆಚ್ಚದಲ್ಲಿ, ಒಟ್ಟು 12 ರಿಂದ13 ಕೋಟಿ ರೂಪಾಯಿ ವೆಚ್ಚದಲ್ಲಿ ಆದಷ್ಟು ಬೇಗ ನೂತನ ಮನೆ ಕಟ್ಟಿ ಕೊಡಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಮಲೈ ಮಹದೇಶ್ವರ ಬೆಟ್ಟದ ಪ್ರಸಾದ ಲಾಡುಗೆ, ತಿರುಪತಿ ದೇವಸ್ಥಾನದ ಮಾದರಿಯಲ್ಲಿ ನಂದಿನಿ ತುಪ್ಪ ಬಳಸಿ, ಪ್ರಸಾದದ ಗುಣಮಟ್ಟವನ್ನು ಇನ್ನಷ್ಟು ಉನ್ನತೀಕರಿಸುವುದು. ಮುಂದಿನ ದಿನಗಳಲ್ಲಿ 100 ಗ್ರಾಂ ತೂಕದ ಪ್ರಸಾದ ಲಾಡುವನ್ನು ಕೇವಲ 35 ರೂಪಾಯಿಗೆ ವಿತರಿಸುವ ಬಗ್ಗೆ ಸಭೆ ನಿರ್ಣಯಿಸಿತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಈ ಮೂರು ರಾಶಿಯವರು ಕಪ್ಪು ಬಟ್ಟೆ ಧರಿಸಿದ್ರೆ ಕಷ್ಟಗಳು ತಪ್ಪಿದ್ದಲ್ಲ !
ಈ ಮೂರು ರಾಶಿಯವರು ಕಪ್ಪು ಬಟ್ಟೆ ಧರಿಸಿದ್ರೆ ಕಷ್ಟಗಳು ತಪ್ಪಿದ್ದಲ್ಲ !
ಇಂದು ಈ ರಾಶಿಯವರಿಗೆ ಹಿತಶತ್ರುಗಳ ಕಾಟ!
ಇಂದು ಈ ರಾಶಿಯವರಿಗೆ ಹಿತಶತ್ರುಗಳ ಕಾಟ!
ಮಾತೃ ಭಾಷೆ ತೆಲುಗು, ಜೀವನದ ಭಾಷೆ ಕನ್ನಡ: ಸಾಯಿಕುಮಾರ್
ಮಾತೃ ಭಾಷೆ ತೆಲುಗು, ಜೀವನದ ಭಾಷೆ ಕನ್ನಡ: ಸಾಯಿಕುಮಾರ್
ಕೋಗಿಲು ಲೇಔಟ್ ಒತ್ತುವರಿದಾರರಿಗೆ ಭರ್ಜರಿ ಶಾಕ್​​: 80 ಅರ್ಜಿಗಳು ರಿಜೆಕ್ಟ್​
ಕೋಗಿಲು ಲೇಔಟ್ ಒತ್ತುವರಿದಾರರಿಗೆ ಭರ್ಜರಿ ಶಾಕ್​​: 80 ಅರ್ಜಿಗಳು ರಿಜೆಕ್ಟ್​
ಗಣರಾಜ್ಯೋತ್ಸವ 2026: ಕೈದಿಗಳು ತಯಾರಿಸಿದ ಬೇಕರಿ ಉತ್ಪನ್ನಗಳ ಉಪಹಾರ ವಿತರಣೆ
ಗಣರಾಜ್ಯೋತ್ಸವ 2026: ಕೈದಿಗಳು ತಯಾರಿಸಿದ ಬೇಕರಿ ಉತ್ಪನ್ನಗಳ ಉಪಹಾರ ವಿತರಣೆ
ರೈತರ ಪ್ರತಿಭಟನೆ ವೇಳೆ ಕುಮಾರಸ್ವಾಮಿ ಬಳಿ ಸೆರಗೊಡ್ಡಿ ಮಹಿಳೆ ಮನವಿ
ರೈತರ ಪ್ರತಿಭಟನೆ ವೇಳೆ ಕುಮಾರಸ್ವಾಮಿ ಬಳಿ ಸೆರಗೊಡ್ಡಿ ಮಹಿಳೆ ಮನವಿ
ಚೋರ್ಲಾ ಘಾಟ್‌ ರಾಬರಿ ರಹಸ್ಯ ಬಿಚ್ಚಿಟ್ಟ ಪೊಲೀಸ್​​ ವರಿಷ್ಠಾಧಿಕಾರಿ
ಚೋರ್ಲಾ ಘಾಟ್‌ ರಾಬರಿ ರಹಸ್ಯ ಬಿಚ್ಚಿಟ್ಟ ಪೊಲೀಸ್​​ ವರಿಷ್ಠಾಧಿಕಾರಿ
ಬಿಬಿಎಲ್​ನಲ್ಲಿ ದಾಖಲೆಯ 6ನೇ ಬಾರಿಗೆ ಪ್ರಶಸ್ತಿ ಗೆದ್ದ ಪರ್ತ್ ಸ್ಕಾರ್ಚರ್ಸ್
ಬಿಬಿಎಲ್​ನಲ್ಲಿ ದಾಖಲೆಯ 6ನೇ ಬಾರಿಗೆ ಪ್ರಶಸ್ತಿ ಗೆದ್ದ ಪರ್ತ್ ಸ್ಕಾರ್ಚರ್ಸ್
ನಾನು ಇರೋದೇ ಬೋಡ ಕಣೇ: ಬಾಲಕಿ ಜತೆ ರಾಜ್ ಬಿ. ಶೆಟ್ಟಿ ಕ್ಯೂಟ್ ಮಾತುಕಥೆ
ನಾನು ಇರೋದೇ ಬೋಡ ಕಣೇ: ಬಾಲಕಿ ಜತೆ ರಾಜ್ ಬಿ. ಶೆಟ್ಟಿ ಕ್ಯೂಟ್ ಮಾತುಕಥೆ
ರಾಜ್ಯಪಾಲರ ಭಾಷಣದ ಕುರಿತು ಸಿದ್ದರಾಮಯ್ಯ ರಿಯಾಕ್ಷನ್ ಹೀಗಿತ್ತು!
ರಾಜ್ಯಪಾಲರ ಭಾಷಣದ ಕುರಿತು ಸಿದ್ದರಾಮಯ್ಯ ರಿಯಾಕ್ಷನ್ ಹೀಗಿತ್ತು!