ಚಾಮರಾಜನಗರ: ಅಂಬೇಡ್ಕರ್​ಗೆ ಅವಮಾನ ಆರೋಪ; ಅಂಬೇಡ್ಕರ್ ಅಭಿಮಾನಿಗಳಿಂದ ಮೆಡಿಕಲ್ ಕಾಲೇಜು ಡೀನ್​ಗೆ ಕಪ್ಪು ಮಸಿ

ಡಾ. ಬಿ.ಆರ್​ ಅಂಬೇಡ್ಕರ್​​ರವರಿಗೆ ಅವಮಾನ ಆರೋಪ ಕೇಳಿಬಂದಿದ್ದು, ಅಂಬೇಡ್ಕರ್ ಅಭಿಮಾನಿಗಳು ಸೇರಿ ಮೆಡಿಕಲ್ ಕಾಲೇಜು ಡೀನ್ ಡಾ.ಸಂಜೀವ್ ಮೇಲೆ ಕಪ್ಪು ಮಸಿ ಎರಚಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಚಾಮರಾಜನಗರ: ಅಂಬೇಡ್ಕರ್​ಗೆ ಅವಮಾನ ಆರೋಪ; ಅಂಬೇಡ್ಕರ್ ಅಭಿಮಾನಿಗಳಿಂದ ಮೆಡಿಕಲ್ ಕಾಲೇಜು ಡೀನ್​ಗೆ ಕಪ್ಪು ಮಸಿ
ಅಂಬೇಡ್ಕರ್​ಗೆ ಅವಮಾನ, ಡೀನ್​ ಮುಖಕ್ಕೆ ಮಸಿ
Follow us
|

Updated on: May 19, 2023 | 6:46 PM

ಚಾಮರಾಜನಗರ: ಡಾ.ಬಿ.ಆರ್​ ಅಂಬೇಡ್ಕರ್(Dr BR Ambedkar)​​ರವರಿಗೆ ಅವಮಾನ ಆರೋಪ ಕೇಳಿಬಂದಿದ್ದು, ಅಂಬೇಡ್ಕರ್ ಅಭಿಮಾನಿಗಳು ಸೇರಿ ಮೆಡಿಕಲ್ ಕಾಲೇಜು ಡೀನ್ ಡಾ.ಸಂಜೀವ್ ಮೇಲೆ ಕಪ್ಪು ಮಸಿ ಎರಚಿರುವ ಘಟನೆ ಚಾಮರಾಜನಗರ (Chamarajanagar)ದಲ್ಲಿ ನಡೆದಿದೆ. ಬಳಿಕ ಡಾ. ಸಂಜೀವ್ ಕಾರಿಗೆ ಕಲ್ಲೆಸೆದು ಗಾಜು ಪುಡಿಗೊಳಿಸುವ ಮೂಲಕ ಪ್ರತಿಭಟಿಸಿದ್ದಾರೆ. ನಿನ್ನೆ(ಮೇ.18) ಸಂಜೆ ಕಚೇರಿಯಲ್ಲಿ ಅಂಬೇಡ್ಕರ್ ಕುರಿತು ಹಗುರವಾಗಿ ಮಾತಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಇನ್ನು ಘಟನೆ ಕುರಿತು ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.

ಜೈನ್ ವಿವಿಯಲ್ಲಿ ಅಂಬೇಡ್ಕರ್‌ಗೆ ಅವಮಾನ

ಬೆಂಗಳೂರು: ಇದೊಂದೆ ಅಲ್ಲ, ಕಳೆದ ಪೆಬ್ರವರಿಯಲ್ಲಿ ಜೈನ್ ವಿಶ್ವ ವಿದ್ಯಾನಿಲಯದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಅವರಿಗೆ ನಾಟಕದಲ್ಲಿ ಅವಮಾನ ಮಾಡಲಾಗಿದೆ ಎಂಬ ವಿಚಾರ ವಿಧಾನಸಭೆಯಲ್ಲಿ ಗದ್ದಲಕ್ಕೆ ಕಾರಣವಾಗಿತ್ತು. ಹೌದು ವಿಧಾನಸಭೆಯಲ್ಲಿ ಹಲವಾರು ಶಾಸಕರುಗಳು ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದರು.

ಅಂಬೇಡ್ಕರ್‌ ಅವರಿಗೆ ಜೈನ್‌ ವಿವಿ ಮಾಡಿದ್ದ ಅಪಮಾನ ಏನು?

ಜೈನ್‌ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ವಿವಿ ಉತ್ಸವ ಸಮಾರಂಭದಲ್ಲಿ ದಿ ಡೆಲ್ರಾಯ್ಸ್ ಬಾಯ್ಸ್ ತಂಡ ಪ್ರದರ್ಶಿಸಿದ ಕಿರು ನಾಟಕದಲ್ಲಿ ಭಾರತೀಯ ಸಂವಿಧಾನದ ಪಿತಾಮಹ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಗುರಿಯಾಗಿಸಿಕೊಂಡು ಅವಹೇಳನ ಮಾಡಿತ್ತು. ಮ್ಯಾಡ್ ಆಡ್ಸ್ ಎಂಬ ಕಾರ್ಯಕ್ರಮದಲ್ಲಿ ಅವಹೇಳನಕಾರಿ ರೀತಿಯಲ್ಲಿ ಅಂಬೇಡ್ಕರ್‌ ಹೆಸರನ್ನ ಬರೆಯಲಾಗಿತ್ತು. ಈ ಬಗ್ಗೆ ದಲಿತ ಸಂಘಟನೆಗಳ ಸದಸ್ಯರು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ವಿವಿ ಆಡಳಿತ ಮಂಡಳಿ ಮತ್ತು ಕಾರ್ಯಕ್ರಮ ಮಾಡಿರುವ ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ದಾಖಲಿಸಿದ್ದರು.

ಇದನ್ನೂ ಓದಿ:ದೇವನಹಳ್ಳಿ: ಯನಗುಂಟೆ ಗ್ರಾಮದಲ್ಲಿ ತಡರಾತ್ರಿ ಕಿಡಿಗೇಡಿಗಳಿಂದ ಅಂಬೇಡ್ಕರ್ ಪ್ರತಿಮೆ ಧ್ವಂಸ

ಕ್ಷಮೆಯಾಚಿಸಿದ್ದ ಜೈನ್‌ ವಿವಿಯ ಕುಲಸಚಿವ

ಸಂವಿಧಾನ ಶಿಲ್ಪಿ ಡಾ. ಬಿ. ಆರ್.ಅಂಬೇಡ್ಕರ್ ಅವರ ಬಗ್ಗೆ ಜೈನ್ ವಿಶ್ವವಿದ್ಯಾಲಯಕ್ಕೆ ಹೆಚ್ಚಿನ ಗೌರವ ಇದೆ. ಅದನ್ನು ವಿಶ್ವವಿದ್ಯಾಲಯ ಸದಾ ಎತ್ತಿ ಹಿಡಿಯುತ್ತದೆ. ಜೈನ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಕಿರು ನಾಟಕವನ್ನು ಪ್ರದರ್ಶಿಸಿದ ಘಟನೆಯಿಂದ ನೋವು ಅನುಭವಿಸಿದ ಎಲ್ಲರಿಗೂ ವಿಶ್ವವಿದ್ಯಾಲಯವು ಕ್ಷಮೆ ಕೋರುತ್ತದೆ ಎಂದು ವಿವಿಯ ಕುಲಸಚಿವರು ತಿಳಿಸಿದ್ದರು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ