ರಾಜಕೀಯ ಪ್ರವೇಶಕ್ಕಾಗಿ ಪೊಲೀಸ್ ಇನ್ಸ್ಪೆಕ್ಟರ್ ಹುದ್ದೆಗೆ ರಾಜೀನಾಮೆ ನೀಡಿದ ಬಿ.ಪುಟ್ಟಸ್ವಾಮಿ
ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಬಿ.ಪುಟ್ಟಸ್ವಾಮಿ ರಾಜಕೀಯ ಪ್ರವೇಶಕ್ಕಾಗಿ ಪೊಲೀಸ್ ಇನ್ಸ್ಪೆಕ್ಟರ್ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಚಾಮರಾಜನಗರ: ರಾಜಕೀಯ ಪ್ರವೇಶಕ್ಕಾಗಿ ಬಿ.ಪುಟ್ಟಸ್ವಾಮಿ ಅವರು ಪೊಲೀಸ್ ಇನ್ಸ್ಪೆಕ್ಟರ್ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಬಿ.ಪುಟ್ಟಸ್ವಾಮಿ, ಪ್ರಸ್ತುತ ಮೈಸೂರಿನಲ್ಲಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಪೊಲೀಸ್ ಕಾನ್ಸ್ಟೇಬಲ್, ಪಿಎಸ್ಐ, ಇನ್ಸ್ಪೆಕ್ಟರ್ ಆಗಿ 27 ವರ್ಷ ಸೇವೆ ಸಲ್ಲಿಸಿ, 13 ವರ್ಷ ಸೇವೆ ಬಾಕಿ ಇರುವಾಗಲೇ ಸ್ವಯಂನಿವೃತ್ತಿ ಬಯಸಿ ಬಿ.ಪುಟ್ಟಸ್ವಾಮಿ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ ನೀಡಿರುವುದನ್ನು ಟಿವಿ9ಗೆ ಖಚಿತಪಡಿಸಿದ್ದಾರೆ. ಬಿ.ಪುಟ್ಟಸ್ವಾಮಿ ಚಾಮರಾಜನಗರ, ಕೊಳ್ಳೇಗಾಲ ಗ್ರಾಮಾಂತರ, ರಾಮಾಪುರ, ಕೆಆರ್ಎಸ್ ಠಾಣೆ, ಅಗರ-ಮಾಂಬಳ್ಳಿ, ಹುಣಸೂರು ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಣೆ ಮಾಡಿದ್ದಾರೆ. ಅಲ್ಲದೆ ಬಿ.ಪುಟ್ಟಸ್ವಾಮಿ ಅಭಿಮಾನಿ ಬಳಗ, ಸೇವಾ ಟ್ರಸ್ಟ್ ಮೂಲಕ ಕ್ಷೇತ್ರದಲ್ಲಿ ಹಲವು ಸೇವಾ ಕಾರ್ಯಗಳಲ್ಲಿ ನಮ್ಮನ್ನು ತೊಡಗಿಸಿಕೊಂಡಿದ್ದಾರೆ.
ಇದನ್ನೂ ಓದಿ: Ganga Vilas Cruise : ವಿಶ್ವದ ಅತಿ ಉದ್ದದ ಜಲಮಾರ್ಗ ಪ್ರಯಾಣಕ್ಕೆ ಜ. 13ರಂದು ಪ್ರಧಾನಿ ಮೋದಿ ಚಾಲನೆ, ವಿಶೇಷತೆ ಏನು?
ಕೊಳ್ಳೇಗಾಲ ಕ್ಷೇತ್ರದಲ್ಲಿ ಹೆಚ್ಚಾದ ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ
ಹಾಲಿ ಶಾಸಕ ಎನ್.ಮಹೇಶ್, ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ, ಇದೀಗ ಸ್ವಯಂ ನಿವೃತ್ತಿಯಾಗಿರುವ ಬಿ.ಪುಟ್ಟಸ್ವಾಮಿ, ಬಿಜೆಪಿ ಮುಖಂಡರಾದ ಕಿನಕಳ್ಳಿ ರಾಚಯ್ಯ, ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅಳಿಯ ಡಾ.ಮೋಹನ್ ನಡುವೆ ಬಿಜೆಪಿ ಟಿಕೆಟ್ ಗಾಗಿ ಪೈಪೋಟಿ ಶುರುವಾಗಿದೆ.
ದೂಂತೂರು ವಿಶ್ವನಾಥ್ ಕಾಂಗ್ರೆಸ್ ಸೇರ್ಪಡೆ
ಕನಕಪುರದ ಜೆಡಿಎಸ್ ನಾಯಕ ದೂಂತೂರು ವಿಶ್ವನಾಥ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಕಳೆದ ಬಾರಿ ಕನಕಪುರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಡಿಕೆ ಶಿವಕುಮಾರ್ ವಿರುದ್ಧ ವಿಶ್ವನಾಥ್ ಸ್ಪರ್ಧಿಸಿದ್ದರು. ಇತ್ತೀಚೆಗೆ ವಿಶ್ವನಾಥ್ಗೆ ಬಿಜೆಪಿ ಗಾಳ ಹಾಕಿತ್ತು. ಅಲ್ಲದೆ ಬಿಜೆಪಿ ಸೇರ್ಪಡೆಯಾಗುವುದಾಗಿ ವಿಶ್ವನಾಥ್ ಗ್ರೀನ್ ಸಿಗ್ನಲ್ ಕೊಟ್ಟಿದ್ದರು. ಆದ್ರೆ ಕೊನೆ ಘಳಿಗೆಯಲ್ಲಿ ಕಾಂಗ್ರೆಸ್ ಪಕ್ಷದತ್ತ ಒಲವು ತೋರಿಸಿದ್ದಾರೆ. ಬೆಂಬಲಿಗರೊಂದಿಗೆ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ವಿಶ್ವನಾಥ್ ಘೋಷಿಸಿದ್ದಾರೆ. ನಾಳೆ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ಸಿದ್ದರಾಮಯ್ಯ, ಡಿಕೆಶಿ ನೇತ್ರತ್ವದಲ್ಲಿ ಕೈ ಸೇರಲಿದ್ದಾರೆ.
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 12:34 pm, Sun, 8 January 23