Bandipur National Park: ಪ್ರವಾಸಿಗರ ಗಮನಕ್ಕೆ, ಏಪ್ರಿಲ್​ 8 ಮತ್ತು 9 ರಂದು ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ನೋ ಎಂಟ್ರಿ

ಏಪ್ರಿಲ್ 9ರಂದು ಪ್ರಧಾನಿ ನರೇಂದ್ರ ಮೋದಿಯವರು ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿ ನಡೆಸಲಿದ್ದಾರೆ. ಹೀಗಾಗಿ ಏ. 8 ಹಾಗೂ 9ರಂದು ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಗೊಳಿಸಲಾಗಿದೆ.

Bandipur National Park: ಪ್ರವಾಸಿಗರ ಗಮನಕ್ಕೆ,  ಏಪ್ರಿಲ್​ 8 ಮತ್ತು 9 ರಂದು ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ನೋ ಎಂಟ್ರಿ
ಬಂಡೀಪುರ ರಾಷ್ಟ್ರೀಯ ಉದ್ಯಾನವನ
Follow us
ವಿವೇಕ ಬಿರಾದಾರ
|

Updated on:Apr 01, 2023 | 1:56 PM

ಚಾಮರಾಜನಗರ: ಏಪ್ರಿಲ್​ 8 ಮತ್ತು 9 (ಶನಿವಾರ ಮತ್ತು ಭಾನುವಾರ) ವೀಕೆಂಡ್​​ ರಜಾ ದಿನಗಳು, ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ (Bandipur National Park) ಟ್ರಿಪ್​ ಮಾಡಲು ಪ್ಲಾನ್​ ಮಾಡಿಕೊಂಡಿದ್ದರೇ ಇಂದೇ ಕ್ಯಾನ್ಸಲ್​ ಮಾಡಿಬಿಡಿ!. ಏಕೆಂದರೇ ಈ ಎರಡು ದಿನ ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಸಾರ್ವಜನಿಕ ಪ್ರವೇಶಕ್ಕೆ ನಿಷೇಧಿಸಲಾಗಿದೆ. ಕಾರಣ ಬಂಡೀಪುರ ಅರಣ್ಯವನ್ನು ರಾಷ್ಟ್ರೀಯ ಹುಲಿ ಸಂರಕ್ಷಿತಾರಣ್ಯವೆಂದು ಘೋಷಿಸಿ 50 ವರ್ಷಗಳು ಸಂದಿವೆ. ಈ ಹಿನ್ನೆಲೆ ಏಪ್ರಿಲ್ 9ರಂದು ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿ ನಡೆಸಲಿದ್ದಾರೆ. ಹೀಗಾಗಿ ಏ. 8 ಹಾಗೂ 9ರಂದು ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಗೊಳಿಸಲಾಗಿದೆ.

ಇತ್ತೀಚಿನ ಹುಲಿಗಣತಿ ವರದಿ, ಹುಲಿ ಸಂರಕ್ಷಣೆಗಾಗಿ ಸರ್ಕಾರ ಕೈಗೊಂಡ ಕ್ರಮಗಳ ವರದಿ, ಮತ್ತು ನಾಣ್ಯ ಸ್ಮರಣಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಮೈಸೂರಿನಲ್ಲಿ ಬಿಡುಗಡೆ ಮಾಡಲಿದ್ದಾರೆ. ಅಂದೇ ಬಂಡೀಪುರಕ್ಕೂ ಮೋದಿ ಭೇಟಿ ನೀಡಲಿದ್ದಾರೆ.

ಮೋದಿಯವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ, ಬಂಡೀಪುರವನ್ನು ತಲುಪುವ ಮಾರ್ಗದ ದುರಸ್ತಿಯಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಯು ನಿರತರಾಗಿದ್ದಾರೆ. ಮೇಲುಕಮನಹಳ್ಳಿಯಲ್ಲಿಯೂ (ಸಫಾರಿ ಪಾಯಿಂಟ್) ರಸ್ತೆಗಳನ್ನು ದುರಸ್ತಿ ಮಾಡಿಸಿ, ಸಫಾರಿಗೆ ಮತ್ತಷ್ಟು ಅನುಕೂಲ ಕಲ್ಪಿಸಲು ಅರಣ್ಯ ಇಲಾಖೆಯ ಸಿಬ್ಬಂದಿ ನಿರತರಾಗಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:55 pm, Sat, 1 April 23

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ