
ಚಾಮರಾಜನಗರ, ಜುಲೈ 27: 2023 ರಲ್ಲಿ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ ಬಳಿಕ ದೇಶದ ಗಮನ ಸೆಳೆದಿರುವ ಕರ್ನಾಟಕದ ಪ್ರಸಿದ್ಧ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ (Bandipur Tiger Reserve) ಭೇಟಿ ನೀಡುವ ಪ್ರವಾಸಿಗರಿಗೆ ಅರಣ್ಯ ಇಲಾಖೆ ಶಾಕ್ ನೀಡಿದೆ. ಚಾಮರಾಜನಗರ (Chamarajanagar) ಜಿಲ್ಲೆಯಲ್ಲಿರುವ ಬಂಡೀಪುರದಲ್ಲಿ ಸೆಪ್ಟೆಂಬರ್ 1, 2026ರಿಂದ ಜಾರಿಗೆ ಬರುವಂತೆ ಸಫಾರಿ, ಖಾಸಗಿ ವಾಹನ, ಕ್ಯಾಮೆರಾ ಬಳಕೆ ಸೇರಿದಂತೆ ಹಲವು ಸೇವೆಗಳ ಶುಲ್ಕವನ್ನು ಪರಿಷ್ಕರಿಸಿ ಆದೇಶ ಹೊರಡಿಸಲಾಗಿದೆ. ಹೊಸ ದರಗಳ ಪ್ರಕಾರ ಹಲವು ಸೇವೆಗಳ ಶುಲ್ಕವು ಹಿಂದಿನದರಿಗಿಂತ ಗಣನೀಯವಾಗಿ ಏರಿಕೆಯಾಗಿದ್ದು, ಬಂಡೀಪುರ ಸಫಾರಿ ಪ್ರವಾಸ ಮಧ್ಯಮ ವರ್ಗದ ಕುಟುಂಬಗಳಿಗೆ ಮತ್ತಷ್ಟು ದುಬಾರಿಯಾಗಲಿದೆ.
2023ರ ಏಪ್ರಿಲ್ 9 ರಂದು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ಸಫಾರಿಯನ್ನೂ ಮಾಡಿದ್ದರು. ಸುಮಾರು 2 ಗಂಟೆಗಳ ಕಾಲ ಅರಣ್ಯದಲ್ಲಿ ಸಂಚರಿಸಿದ್ದ ಮೋದಿ, 20 ಕಿಲೋಮೀಟರ್ ಸಫಾರಿ ಮಾಡಿದ್ದರು. ಮೋದಿ ಅವರ ಬಂಡೀಪುರ ಭೇಟಿಯ ಚಿತ್ರಗಳು ವೈರಲ್ ಆಗಿ ದೇಶದ ಗಮನ ಸೆಳೆದಿತ್ತು. ಆ ನಂತರದಲ್ಲಿ ಬಂಡೀಪುರಕ್ಕೆ ಬರುವ ಪ್ರವಾಸಿಗರ ಸಂಖ್ಯೆಯಲ್ಲಿಯೂ ಗಣನೀಯ ಏರಿಕೆಯಾಗಿತ್ತು. ಇದೀಗ ಅರಣ್ಯ ಇಲಾಖೆಯು ದರ ಏರಿಕೆ ಮೂಲಕ ಪ್ರವಾಸಿಗರ ಖುಷಿಗೆ ತಣ್ಣೀರೆರಚಿದೆ.
ಅರಣ್ಯ ಇಲಾಖೆಯ ಆದೇಶದ ಪ್ರಕಾರ, ಬಸ್ ಮತ್ತು ಜೀಪ್ ಸಫಾರಿಯ ಪ್ರವೇಶ ದರವನ್ನು ಹೆಚ್ಚಿಸಲಾಗಿದೆ. ಇದೇ ವೇಳೆ ಖಾಸಗಿ ವಾಹನಗಳ ಪ್ರವೇಶ ಶುಲ್ಕ, ಬೋಟ್ ಸೇವೆ, ಕ್ಯಾಮೆರಾ ಬಳಕೆ ಹಾಗೂ ಅರಣ್ಯ ಇಲಾಖೆಯ ಅತಿಥಿಗೃಹಗಳ ಶುಲ್ಕಗಳಲ್ಲಿಯೂ ಪರಿಷ್ಕರಣೆ ಮಾಡಲಾಗಿದೆ.
ಇದುವರೆಗೆ 200 ಮಿ.ಮೀ.ಗಿಂತ ಹೆಚ್ಚಿನ ಲೆನ್ಸ್ ಹೊಂದಿರುವ ಕ್ಯಾಮೆರಾಗಳಿಗೆ ಪ್ರತ್ಯೇಕ ಶುಲ್ಕ ಇರಲಿಲ್ಲ. ಹೊಸ ಆದೇಶದಂತೆ;
ಅರಣ್ಯ ಪ್ರದೇಶಕ್ಕೆ ಪ್ರವೇಶಿಸುವ ಖಾಸಗಿ ವಾಹನಗಳಿಗೂ ಹೊಸ ದರ ನಿಗದಿಯಾಗಿದೆ.
ಬಂಡೀಪುರದಲ್ಲಿ ಸ್ವಂತ ಜೀಪ್, ಎಲ್‌ಸಿವಿ ಅಥವಾ ಬೋಟ್ ಮೂಲಕ ಅನುಮತಿ ಪಡೆದ ಪ್ರದೇಶಗಳಿಗೆ ಪ್ರವೇಶಿಸುವವರಿಗೂ ಹೊಸ ದರ ನಿಗದಿಯಾಗಿದೆ.
ಅರಣ್ಯ ಇಲಾಖೆಯ ಆದೇಶದ ಪ್ರಕಾರ 2026ರ ಸೆಪ್ಟೆಂಬರ್ 1ರಿಂದ ಪರಿಷ್ಕೃತ ದರಗಳು ಜಾರಿಗೆ ಬರಲಿವೆ. ಈ ಆದೇಶವು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಸೇರಿದಂತೆ ಸಂಬಂಧಿತ ಅರಣ್ಯ ಪ್ರವಾಸೋದ್ಯಮ ಸೇವೆಗಳಿಗೆ ಅನ್ವಯವಾಗಲಿದೆ.
ಇದನ್ನೂ ಓದಿ: ಮುಂಗಾರು ಮಳೆ ಕೊರತೆ: ಭರಚುಕ್ಕಿ ಜಲಪಾತ ಭಣಭಣ, ಪ್ರವಾಸಿಗರ ಸಂಖ್ಯೆಯಲ್ಲೂ ಇಳಿಮುಖ
ಹೊಸ ದರಗಳು ಪ್ರವಾಸೋದ್ಯಮದ ಗುಣಮಟ್ಟ ಹೆಚ್ಚಿಸುವ ಉದ್ದೇಶದಿಂದ ಜಾರಿಯಾಗಿದ್ದರೂ, ಏಕಾಏಕಿ ದರ ಏರಿಕೆಯಿಂದ ಸಾಮಾನ್ಯ ಹಾಗೂ ಮಧ್ಯಮ ವರ್ಗದ ಪ್ರವಾಸಿಗರ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಬೀಳಲಿದೆ ಎಂಬ ಅಭಿಪ್ರಾಯಗಳು ಕೇಳಿಬರುತ್ತಿವೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:56 am, Mon, 27 July 26