AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಜ್ಞೆ ತಪ್ಪಿತೆಂದು ಹಿಡಿಯಲು ಹೋದಾಗ ದಿಢೀರ್ ಎದ್ದು ದಾಳಿ ಮಾಡಿದ ಹುಲಿ! ಆಮೇಲಾಗಿದ್ದೇ ಬೇರೆ

ಚಾಮರಾಜನಗರದಲ್ಲಿ ಹುಲಿ ಸೆರೆ ಕಾರ್ಯಾಚರಣೆ ವೇಳೆ ಅರಣ್ಯ ಇಲಾಖೆಯ ಸಣ್ಣ ನಿರ್ಲಕ್ಷ್ಯ ಭಾರಿ ಅವಘಡಕ್ಕೆ ಕಾರಣವಾಗಿದೆ. ಪ್ರಜ್ಞೆ ತಪ್ಪಿತೆಂದು ಹುಲಿಯ ಹತ್ತಿರ ಹೋದ ಸಿಬ್ಬಂದಿ ಮೇಲೆ ಅದು, ದಿಢೀರ್ ರೌದ್ರಾವತಾರ ತಾಳಿ ದಾಳಿ ಮಾಡಿದೆ. ಅದೃಷ್ಟವಶಾತ್, ಕೈಗೆ ಗಂಭೀರ ಗಾಯವಾದರೂ ಫಾರೆಸ್ಟ್ ಗಾರ್ಡ್ ಸಾವಿನ ದವಡೆಯಿಂದ ಪಾರಾಗಿ ಬಂದಿದ್ದಾರೆ.

ಪ್ರಜ್ಞೆ ತಪ್ಪಿತೆಂದು ಹಿಡಿಯಲು ಹೋದಾಗ ದಿಢೀರ್ ಎದ್ದು ದಾಳಿ ಮಾಡಿದ ಹುಲಿ! ಆಮೇಲಾಗಿದ್ದೇ ಬೇರೆ
ಹುಲಿ ಸೆರೆ ಕಾರ್ಯಾಚರಣೆಯ ಚಿತ್ರImage Credit source: tv9
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Mar 24, 2026 | 7:31 AM

Share

ಚಾಮರಾಜನಗರ, ಮಾರ್ಚ್ 24: ಹುಲಿ ಸೆರೆಗೆ ಹಮ್ಮಿಕೊಳ್ಳಲಾಗಿದ್ದ ‘ಆಪರೇಷನ್ ಬೀಸ್ಟ್ (Operation Beast)’ ಕಾರ್ಯಾಚರಣೆಯ ಎರಡನೇ ಹಂತ ಯಶಸ್ವಿಯಾಗಿ ಪೂರ್ಣಗೊಂಡ ಬೆನ್ನಲ್ಲೇ ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಅವಘಡವೊಂದು ಸಂಭವಿಸಿರುವುದು ಬೆಳಕಿಗೆ ಬಂದಿದೆ. ಚಾಮರಾಜನಗರ (Chamarajanagar) ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಭೀಮನ ಬೀಡು ಗ್ರಾಮದಲ್ಲಿ ನಡೆದ ಕಾರ್ಯಾಚರಣೆಯ ವೇಳೆ, ಬಂಡೀಪುರ (Bandipur) ಅರಣ್ಯ ಸಿಬ್ಬಂದಿ ಕೂಂಬಿಂಗ್ ವೇಳೆ ಅನುಸರಿಸಬೇಕಾದ ನಿಯಮಗಳನ್ನು ಪಾಲಿಸದೇ ಇರುವುದು ಗೊತ್ತಾಗಿದೆ. ಇದರಿಂದ ಸಿಬ್ಬಂದಿಯೊಬ್ಬರ ಪ್ರಾಣಕ್ಕೆ ಸಂಚಕಾರ ಎದುರಾಗಿದ್ದು, ಅದೃಷ್ಟವಶಾತ್ ಅನಾಹುತವೊಂದು ತಪ್ಪಿದೆ.

ಹುಲಿ ಸೆರೆ ಕಾರ್ಯಾಚರಣೆಯಲ್ಲಿ ಎಡವಟ್ಟು

ಹುಲಿಗೆ ಅರವಳಿಕೆ (ಡಾಟ್) ನೀಡಿದ ನಂತರ ಅದು ಸಂಪೂರ್ಣವಾಗಿ ಪ್ರಜ್ಞೆ ತಪ್ಪುವ ಮುನ್ನವೇ ಸೆರೆ ಹಿಡಿಯಲು ಸಿಬ್ಬಂದಿ ಮುಂದಾಗಿದ್ದರು. ನಿಯಮ ಪ್ರಕಾರ, ಹಿರಿಯ ಅಧಿಕಾರಿಗಳು ಮತ್ತು ಪಶುವೈದ್ಯರ ಮೇಲ್ವಿಚಾರಣೆಯಲ್ಲಿ ಮಾತ್ರ ಮುಂದಿನ ಕ್ರಮ ಕೈಗೊಳ್ಳಬೇಕಾಗಿದ್ದರೂ, ಈ ಸಂದರ್ಭದಲ್ಲಿ ಆತುರದ ನಿರ್ಧಾರ ಕೈಗೊಳ್ಳಲಾಗಿತ್ತು ಎನ್ನಲಾಗಿದೆ. ಸಿಬ್ಬಂದಿ ಸೆರೆ ಹಿಡಿಯಲು ಬರುತ್ತಿದ್ದಂತೆಯೇ ಗಾಬರಿಗೊಂಡ ಹುಲಿ ರಿವರ್ಸ್ ಅಟ್ಯಾಕ್ ನಡೆಸಿ, ಫಾರೆಸ್ಟ್ ಗಾರ್ಡ್ ಬಸವೇಗೌಡ ಮೇಲೆ ದಾಳಿ ನಡೆಸಿದೆ. ಹುಲಿಯ ಒಂದೇ ಹೊಡೆತಕ್ಕೆ ಅವರ ಕೈಗೆ ಗಂಭೀರ ಗಾಯವಾಗಿದೆ.

ಕಾರ್ಯಾಚರಣೆ ವೇಳೆ ಸ್ಥಳದಲ್ಲಿದ್ದ ಜನರ ಕೂಗಾಟ ಮತ್ತು ಗದ್ದಲದಿಂದ ಹುಲಿ ಇನ್ನಷ್ಟು ಗಾಬರಿಗೊಂಡಿತ್ತು. ಅರವಳಿಕೆ ಮದ್ದು ನೀಡಿದ ಬಳಿಕವೂ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿರಲಿಲ್ಲ ಎಂಬುದು ತಿಳಿದುಬಂದಿದೆ. ಗಾಯಗೊಂಡ ಫಾರೆಸ್ಟ್ ಗಾರ್ಡ್ ಬಸವೇಗೌಡರನ್ನು ತಕ್ಷಣವೇ ಗುಂಡ್ಲುಪೇಟೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ನಿಯಮ ಉಲ್ಲಂಘನೆ ಆರೋಪ

ಹಿರಿಯ ಅಧಿಕಾರಿಗಳು ಸ್ಥಳದಲ್ಲಿರದೇ ಕಾರ್ಯಾಚರಣೆ ನಡೆಸಿದ ಆರೋಪ ಕೇಳಿಬಂದಿದ್ದು, ಅರಣ್ಯ ಇಲಾಖೆಯ ಕಾರ್ಯವಿಧಾನಗಳ ಬಗ್ಗೆ ಪ್ರಶ್ನೆಗಳು ಉದ್ಭವಿಸಿವೆ.

ಇದನ್ನೂ ಓದಿ: ಚಾಮರಾಜನಗರ: ವಿದ್ಯುತ್ ಶಾಕ್​​ಗೆ ಹೆಣ್ಣು ಹುಲಿ ಬಲಿ; ಅರಣ್ಯಾಧಿಕಾರಿಗಳ ಕಳ್ಳಾಟಕ್ಕೆ ರೊಚ್ಚಿಗೆದ್ದ ರೈತರು

ಒಟ್ಟಿನಲ್ಲಿ, ಕಾಡುಪ್ರಾಣಿಗಳ ಸೆರೆ ಕಾರ್ಯಾಚರಣೆಯಲ್ಲಿ ಅನುಸರಿಸಬೇಕಾದ ಸುರಕ್ಷತಾ ಕ್ರಮಗಳನ್ನು ಲೆಕ್ಕಿಸದ ಪರಿಣಾಮ ಈ ಅವಘಡ ಸಂಭವಿಸಿದ್ದು, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಅಗತ್ಯವಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More