AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರೌಡಿ ಶೀಟರ್ ಎಣ್ಣೆ ಪಾರ್ಟಿ!

ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದಲ್ಲಿ ಭದ್ರತಾ ಲೋಪ ಎದ್ದು ಕಂಡಿದೆ. ಸಾರ್ವಜನಿಕರಿಗೆ ನಿರ್ಬಂಧವಿರುವ ಕಳ್ಳಬೇಟೆ ತಡೆ ಶಿಬಿರದ (APC) ಮುಂಭಾಗದಲ್ಲೇ ಗುಂಡ್ಲುಪೇಟೆಯ ರೌಡಿ ಶೀಟರ್ ಸತೀಶ್ ಮತ್ತು ಆತನ ಸಂಗಡಿಗರು ಮದ್ಯದ ಪಾರ್ಟಿ ನಡೆಸಿದ್ದಾರೆ. ಸಾಮಾನ್ಯ ರೈತರಿಗೆ ದಂಡ ಹಾಕುವ ಅರಣ್ಯ ಇಲಾಖೆ, ಕ್ರಿಮಿನಲ್‌ಗಳ ಈ ಕೃತ್ಯಕ್ಕೆ ಮೂಕಪ್ರೇಕ್ಷಕನಾಗಿ ನಿಂತಿರುವುದು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರೌಡಿ ಶೀಟರ್ ಎಣ್ಣೆ ಪಾರ್ಟಿ!
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರೌಡಿ ಶೀಟರ್ ಎಣ್ಣೆ ಪಾರ್ಟಿ!
ಸೂರಜ್ ಪ್ರಸಾದ್ ಎಸ್ಎನ್
| Edited By: |

Updated on: Jun 05, 2026 | 8:54 AM

Share

ಚಾಮರಾಜನಗರ, ಜೂನ್ 05: ಸಾರ್ವಜನಿಕರಿಗೆ ಕಟ್ಟುನಿಟ್ಟಿನ ನಿಷೇಧವಿರುವ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ (Bandipur Tiger Reserve) ದಟ್ಟ ಕಾನನದೊಳಗೆ ರೌಡಿ ಶೀಟರ್ ಒಬ್ಬ ತನ್ನ ಸಂಗಡಿಗರೊಂದಿಗೆ ರಾಜಾರೋಷವಾಗಿ ‘ಎಣ್ಣೆ ಪಾರ್ಟಿ’ ನಡೆಸಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಅರಣ್ಯ ಇಲಾಖೆಯ ಅತ್ಯಂತ ಸುರಕ್ಷಿತ ಮತ್ತು ನಿರ್ಬಂಧಿತ ವಲಯ ಎಂದೇ ಪರಿಗಣಿಸಲಾಗುವ ಕಳ್ಳಬೇಟೆ ತಡೆ ಶಿಬಿರದ (APC Camp) ಮುಂಭಾಗದಲ್ಲೇ ಈ ಮೋಜು-ಮಸ್ತಿ ನಡೆದಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಮುಖ್ಯಾಂಶಗಳು

  • ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದೊಳಗೆ ರೌಡಿ ಶೀಟರ್‌ನಿಂದ ರಾಜಾರೋಷವಾಗಿ ಎಣ್ಣೆ ಪಾರ್ಟಿ.
  • ಕಳ್ಳಬೇಟೆ ತಡೆ ಶಿಬಿರದ ಮುಂದೆಯೇ ಮೋಜು; ಅರಣ್ಯ ಇಲಾಖೆಯ ಭದ್ರತಾ ವೈಫಲ್ಯ.
  • ಬಡ ರೈತರಿಗೆ ಕೇಸ್ ಹಾಕುವ ಅಧಿಕಾರಿಗಳು ಕ್ರಿಮಿನಲ್‌ಗಳಿಗೆ ಸಾಥ್ ನೀಡಿದ್ದು ಆಕ್ರೋಶ.

ದಟ್ಟಾರಣ್ಯದಲ್ಲಿ ರೌಡಿಗಳ ದಿಲ್ದಾರ್ ಪಾರ್ಟಿ!

ಗುಂಡ್ಲುಪೇಟೆ ಪೊಲೀಸ್ ಠಾಣೆಯ ರೌಡಿ ಶೀಟರ್ ಸತೀಶ್ ಎಂಬಾತ ತನ್ನ ಸಂಗಡಿಗರಾದ ಗಂಗಾಧರ್ ಮತ್ತು ಚೇತನ್ ಎಂಬುವವರೊಂದಿಗೆ ಸೇರಿ ಬಂಡೀಪುರ ಅರಣ್ಯದ ಮದ್ದೂರು ವಲಯದ ಹುಲಿಕಟ್ಟೆ ಎಂಬಲ್ಲಿ ಈ ಜಾಲಸಾಬ್ ಪಾರ್ಟಿ ಮಾಡಿದ್ದಾನೆ. ವನ್ಯಜೀವಿಗಳ ಮುಕ್ತ ಸಂಚಾರವಿರುವ, ಸದಾ ಹದ್ದಿನ ಕಣ್ಣಿಡಬೇಕಾದ ಆಂಟಿ ಪೋಚಿಂಗ್ ಕ್ಯಾಂಪ್ ಮುಂಭಾಗದಲ್ಲೇ ಮದ್ಯದ ಬಾಟಲಿಗಳನ್ನು ಇಟ್ಟುಕೊಂಡು ಮೋಜು ಮಾಡಿದ್ದಾರೆ. ರೌಡಿ ಶೀಟರ್‌ಗಳು ಕಾಡಿನೊಳಗೆ ಮದ್ಯದ ಪಾರ್ಟಿ ಮಾಡುತ್ತಿರುವ ಎಕ್ಸ್‌ಕ್ಲೂಸಿವ್ ಫೋಟೋಗಳು ಈಗ ಲಭ್ಯವಾಗಿವೆ. ಈ ಮದ್ದೂರು ವಲಯವು ಆರ್‌ಎಫ್‌ಒ (RFO) ಪುನೀತ್ ಅವರ ಉಸ್ತುವಾರಿಯಲ್ಲಿದ್ದು, ಅರಣ್ಯ ಇಲಾಖೆಯ ಕಾರ್ಯವೈಖರಿಯನ್ನು ಪ್ರಶ್ನಿಸುವಂತೆ ಮಾಡಿವೆ.

ಅರಣ್ಯ ಇಲಾಖೆಯ ಸಂಪೂರ್ಣ ವೈಫಲ್ಯ

ಈ ಘಟನೆಯು ಬಂಡೀಪುರ ಅರಣ್ಯ ಇಲಾಖೆಯ ಸಂಪೂರ್ಣ ಭದ್ರತಾ ವೈಫಲ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಅತ್ಯಂತ ಸೂಕ್ಷ್ಮ ಪ್ರದೇಶಕ್ಕೆ ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ. ಇಂತಹ ಪರಿಸ್ಥಿತಿಯಲ್ಲಿ, ಮಾರಕಾಸ್ತ್ರಗಳನ್ನು ಹಿಡಿಯುವ ರೌಡಿ ಶೀಟರ್‌ಗೆ ದಟ್ಟ ಕಾನನದೊಳಗಿನ ಕಳ್ಳಬೇಟೆ ಶಿಬಿರದವರೆಗೂ ಹೋಗಲು ದಾರಿ ಮಾಡಿಕೊಟ್ಟವರು ಯಾರು? ಅರಣ್ಯ ಸಿಬ್ಬಂದಿಯ ಆಶೀರ್ವಾದ ಅಥವಾ ಸಹಕಾರವಿಲ್ಲದೆ ಇಂತಹ ಕೃತ್ಯ ನಡೆಯಲು ಹೇಗೆ ಸಾಧ್ಯ ಎಂಬ ಪ್ರಶ್ನೆ ಮೂಡಿದೆ.

ಕಾಡಿನಲ್ಲಿ ಒಣಗಿ ಬಿದ್ದ ಸೌದೆಯನ್ನು ತರಲು ಹೋಗುವ ಬಡ ರೈತರು ಮತ್ತು ಬುಡಕಟ್ಟು ಜನರನ್ನು ಕಂಡರೆ ಮುಲಾಜಿಲ್ಲದೆ ಕೇಸ್ ದಾಖಲಿಸುವ ಅರಣ್ಯ ಸಿಬ್ಬಂದಿ, ಇಂತಹ ಕ್ರಿಮಿನಲ್ ಹಿನ್ನೆಲೆಯುಳ್ಳವರು ಕಾಡಿನ ನಿಯಮಗಳನ್ನು ಗಾಳಿಗೆ ತೂರಿ ಗುಂಡಿನ ಪಾರ್ಟಿ ಮಾಡುತ್ತಿದ್ದರೂ ಕಣ್ಮುಚ್ಚಿ ಕುಳಿತಿರುವುದು ಏಕೆ? ಇಷ್ಟೆಲ್ಲಾ ಸಾಕ್ಷ್ಯಾಧಾರಗಳು ಸಿಕ್ಕಿದ್ದರೂ ಉನ್ನತ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಿರುವುದು ಇಲಾಖೆಯೊಳಗಿನ ಶಾಮೀಲಾತಿಯನ್ನು ಶಂಕಿಸುವಂತೆ ಮಾಡಿದೆ. ಬಂಡೀಪುರದಂತಹ ಸೂಕ್ಷ್ಮ ವಲಯದ ಭದ್ರತೆಯ ಹಿತದೃಷ್ಟಿಯಿಂದ ತಕ್ಷಣವೇ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಸೂರಜ್ ಪ್ರಸಾದ್ ಎಸ್ಎನ್
ಸೂರಜ್ ಪ್ರಸಾದ್ ಎಸ್ಎನ್

ಸೂರಜ್ ಪ್ರಸಾದ್ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದಾರೆ. 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದರು. ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದಾರೆ. ಟಿವಿ9 ಕನ್ನಡ ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು ಇವರ ಹವ್ಯಾಸ.

Read More
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ