ಕೊಳ್ಳೇಗಾಲ ಬಳಿ ಬಿಜೆಪಿ ಮುಖಂಡನ ಮೇಲೆ ಹಲ್ಲೆ; ಆರೋಪಿಗಳಿಗಾಗಿ ಪೊಲೀಸರಿಂದ ಶೋಧ

ಟಿ. ನರಸೀಪುರದಲ್ಲಿ ಯುವ ಬ್ರಿಗೇಡ್​​ ಕಾರ್ಯಕರ್ತ ವೇಣುಗೋಪಾಲ ನಾಯಕ್ ಅವರನ್ನು ಹತ್ಯೆ ಮಾಡಿರುವ ವಿಚಾರ ರಾಜ್ಯದಾದ್ಯಂತ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಕೊಳ್ಳೆಗಾಲದಲ್ಲಿ ಬಿಜೆಪಿ ಮುಖಂಡನ ಮೇಲೆ ಹಲ್ಲೆ ನಡೆದಿದೆ.

ಕೊಳ್ಳೇಗಾಲ ಬಳಿ ಬಿಜೆಪಿ ಮುಖಂಡನ ಮೇಲೆ ಹಲ್ಲೆ; ಆರೋಪಿಗಳಿಗಾಗಿ ಪೊಲೀಸರಿಂದ ಶೋಧ
ಕೊಳ್ಳೇಗಾಲ ತಾಲೂಕು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಕಿರಣ್
Updated By: Ganapathi Sharma

Updated on: Jul 12, 2023 | 5:45 PM

ಚಾಮರಾಜನಗರ: ಗುಂಪೊಂದು ಉದ್ದೇಶಪೂರ್ವಕವಾಗಿ ಕಿರಿಕ್ ಮಾಡಿ ಬಿಜೆಪಿ (BJP) ಮುಖಂಡರೊಬ್ಬರ ಮೇಲೆ ಹಲ್ಲೆ ಮಾಡಿದ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ (Kollegala) ದೇವಾಂಗ ಪೇಟೆಯಲ್ಲಿ ನಡೆದಿದೆ. ಮಂಗಳವಾರ ಸಂಜೆ ಘಟನೆ ನಡೆದಿದ್ದು, ಆರೋಪಿಗಳಿಗಾಗಿ ಪೊಲೀಸರು ಶೋಧ ಆರಂಭಿಸಿದ್ದಾರೆ. ಬೇಕಂದೇ ಕಿರಿಕ್ ತೆಗೆದು ಹಲ್ಲೆ ಮಾಡಲಾಗಿದೆ ಎಂದು ಬಿಜೆಪಿ ಆರೋಪಿಸಿದೆ.

ಕೊಳ್ಳೇಗಾಲ ತಾಲೂಕು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಕಿರಣ್ ಮೇಲೆ ಹಲ್ಲೆ ನಡೆದಿದೆ. ರಸ್ತೆಯಲ್ಲಿ ಯುವಕರ ಗುಂಪೊಂದು ಅವಾಚ್ಯ ಶಬ್ದಗಳಿಂದದ ನಿಂದಿಸುತ್ತಿತ್ತು. ಇದನ್ನು ಕಿರಣ್ ಪ್ರಶ್ನಿಸಿದ್ದರು. ಇದರಿಂದ ರೊಚ್ಚಿಗೆದ್ದ ಗುಂಪು ಅವರ ಮೇಲೆ ಹಲ್ಲೆ ಮಾಡಿದೆ ಎಂದು ಆರೋಪಿಸಲಾಗಿದೆ.

ಪ್ರವೀಣ್, ಚಂದು ಸೇರಿದಂತೆ 8 ಜನರು ಹಲ್ಲೆ ನಡೆಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಕೊಳ್ಳೇಗಾಲ ಪಟ್ಟಣ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Mysuru News: ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್​ ಹತ್ಯೆ ಪೂರ್ವನಿಯೋಜಿತ; ಸಿಟಿ ರವಿ ಆಕ್ರೋಶ

ಟಿ. ನರಸೀಪುರದಲ್ಲಿ ಯುವ ಬ್ರಿಗೇಡ್​​ ಕಾರ್ಯಕರ್ತ ವೇಣುಗೋಪಾಲ ನಾಯಕ್ ಅವರನ್ನು ಹತ್ಯೆ ಮಾಡಿರುವ ವಿಚಾರ ರಾಜ್ಯದಾದ್ಯಂತ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಕೊಳ್ಳೆಗಾಲದಲ್ಲಿ ಬಿಜೆಪಿ ಮುಖಂಡನ ಮೇಲೆ ಹಲ್ಲೆ ನಡೆದಿದೆ. ವೇಣುಗೋಪಾಲ ನಾಯಕ್ ಹತ್ಯೆ ಪೂರ್ವನಿಯೋಜಿತ ಎಂದು ಆರೋಪಿಸಿರುವ ಬಿಜೆಪಿ, ರಾಜ್ಯದ ನೂತನ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ