ಧರ್ಮ ಸಂಕಟಕ್ಕೆ ಸಿಲುಕಿದ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್; ಬಿಜೆಪಿ ಬಿಡಲಾಗದೆ, ಕಾಂಗ್ರೆಸ್​ಗೂ ಹೋಗಲಾಗದ ಸ್ಥಿತಿ

ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಧರ್ಮ ಸಂಕಟಕ್ಕೆ ಸಿಲುಕಿದ್ದಾರೆ. ಒಂದು ಕಡೆ ಪ್ರಸಾದ್ ಬಿಜೆಪಿಯಿಂದ ಅಳಿಯನಿಗೆ ಟಿಕೆಟ್ ಸಿಕ್ಕಿಲ್ಲ ಎಂಬ ಹತಾಶೆಯಲ್ಲಿದ್ದು ಮತ್ತೊಂದೆಡೆ ತಮ್ಮ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಸಹಾಯ ಮಾಡುವಂತೆ ಕಾಂಗ್ರೆಸ್ ಗಾಳ ಹಾಕಿದೆ. ಆದರೆ ಓರ್ವ ಅಳಿಯನಿಗೆ ಅನ್ಯಾಯವಾಗಿದೆ ಎಂದು ಕಾಂಗ್ರೆಸ್​ಗೆ ಬೆಂಬಲಿಸಿದರೆ ಮತ್ತೋರ್ವ ಅಳಿಯನಿಗೆ ಸಂಕಷ್ಟ ಎದುರಾಗುವ ಭೀತಿಯಲ್ಲಿದ್ದಾರೆ.

ಧರ್ಮ ಸಂಕಟಕ್ಕೆ ಸಿಲುಕಿದ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್; ಬಿಜೆಪಿ ಬಿಡಲಾಗದೆ, ಕಾಂಗ್ರೆಸ್​ಗೂ ಹೋಗಲಾಗದ ಸ್ಥಿತಿ
ಸಂಸದ ಶ್ರೀನಿವಾಸ್ ಪ್ರಸಾದ್, ಸುನೀಲ್ ಬೋಸ್
Follow us
ದಿಲೀಪ್​, ಚೌಡಹಳ್ಳಿ
| Updated By: ಆಯೇಷಾ ಬಾನು

Updated on:Mar 28, 2024 | 11:03 AM

ಮೈಸೂರು, ಮಾರ್ಚ್​.28: ಮೈಸೂರು-ಕೊಡಗು, ಚಾಮರಾಜನಗರ ಲೋಕಸಭಾ ಕ್ಷೇತ್ರವನ್ನ (Lok Sabha Election) ಸಿಎಂ ಸಿದ್ದರಾಮಯ್ಯ (Siddaramaiah) ಗಂಭೀರವಾಗಿ ಪರಿಗಣಿಸಿದ್ದಾರೆ. ಶತಾಯಗತಾಯ 2 ಕ್ಷೇತ್ರಗಳನ್ನ ಕೈ ತೆಕ್ಕೆಗೆ ತೆಗೆದುಕೊಳ್ಳಲು ಸಾಕಷ್ಟು ತಂತ್ರ ರೂಪಿಸಿದ್ದಾರೆ. ಹೀಗಾಗಿ ರೆಸಾರ್ಟ್​ನಲ್ಲಿ ಕೂತು ಅನೇಕರಿಗೆ ಗಾಳ ಹಾಕಿ ತನ್ನ ಕಡೆ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಮತ್ತೊಂದೆಡೆ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ (Srinivas Prasad) ಬೆಂಬಲ ಪಡೆಯಲು ಸಿಎಂ ಮುಂದಾಗಿದ್ದು ರಣತಂತ್ರ ಹೆಣೆಯುತ್ತಿದ್ದಾರೆ. ಆದರೆ ಬಿಜೆಪಿಯನ್ನೂ ಬಿಡಲಾಗದೆ, ಕಾಂಗ್ರೆಸ್​ಗೂ ಹೋಗಲಾಗದೆ ಶ್ರೀನಿವಾಸ್ ಪ್ರಸಾದ್ ಧರ್ಮ ಸಂಕಟಕ್ಕೆ ಸಿಲುಕಿದ್ದಾರೆ.

ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ರಾಜಕೀಯ ನಿವೃತ್ತಿ ಘೋಷಿಸಿದ್ದು, ಯಾವ ಪಕ್ಷದ ಪರವು ಪ್ರಚಾರ ಮಾಡಲ್ಲ ಎಂದಿದ್ದಾರೆ. ಆದ್ರೆ, ಶತಾಯಗತಾಯ ಪ್ರಸಾದ್ ಬೆಂಬಲ ಪಡೆಯಲು ಸಿಎಂ ಸಿದ್ದರಾಮಯ್ಯ ತಂತ್ರ ಹೆಣೆಯುತ್ತಿದ್ದಾರೆ. ಇತ್ತ ಬಿಜೆಪಿಯನ್ನು ಬಿಡಲಾಗದೆ, ಅತ್ತ ಕಾಂಗ್ರೆಸ್​ಗು ಹೋಗಲಾಗದೆ ಚಾಮರಾಜನಗರ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಕುಟುಂಬ ಹಾಗೂ ಬೆಂಬಲಿಗರು ಧರ್ಮ ಸಂಕಟದಲ್ಲಿ ಸಿಕ್ಕಿ ಹಾಕಿಕೊಂಡಿದ್ದಾರೆ.

ಸಂಸದ ಶ್ರೀನಿವಾಸ್ ಪ್ರಸಾದ್ ಅಳಿಯ ಡಾ.ಮೋಹನ್ ಬಿಜೆಪಿಯಿಂದ ಚಾಮರಾಜನಗರ ಟಿಕೆಟ್ ಆಕಾಂಕ್ಷಿಯಾಗಿದ್ದರು. ಮತ್ತೊಂದೆಡೆ ಮತ್ತೊಬ್ಬ ಅಳಿಯ, ನಂಜನಗೂಡು ಮಾಜಿ ಶಾಸಕ ಹರ್ಷವರ್ಧನ್ ಅವರು ಬಿಜೆಪಿಯಿಂದ ಶಾಸಕರಾಗಿದ್ದರು. ಸದ್ಯ ಓರ್ವ ಅಳಿಯನಿಗೆ ಟಿಕೆಟ್ ಕೈತಪ್ಪಿದ ಬೇಸರದಲ್ಲಿ ಅನ್ಯಾಯ ಆಯ್ತು ಅಂತ ಕಾಂಗ್ರೆಸ್ ಬೆಂಬಲಿಸಿದರೆ ಮತ್ತೊಬ್ಬ ಅಳಿಯನ ಭವಿಷ್ಯ ಏನು ಅನ್ನೋ ಚಿಂತೆ ಕಾಡುತ್ತಿದೆ. ಇಲ್ಲ ಒಂದೇ ಕುಟುಂಬ ಎರಡು ಪಕ್ಷದಲ್ಲಿ ಇರಬೇಕಾದ ಪರಿಸ್ಥಿತಿ ಎದುರಾಗಿದೆ.

ಇದನ್ನೂ ಓದಿ: ಕೋಲಾರದಲ್ಲಿ ಕಾಂಗ್ರೆಸ್ ಶಾಸಕರ ರಾಜೀನಾಮೆ ನಿರ್ಧಾರಕ್ಕೆ ಖರ್ಗೆ ‘ಮಲತಾಯಿ ಧೋರಣೆ’ ಕಾರಣವಾಯ್ತಾ?

ಒಂದು ವೇಳೆ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಶ್ರೀನಿವಾಸ್ ಪ್ರಸಾದ್ ಅಳಿಯ ಡಾ.ಮೋಹನ್ ಟಿಕೆಟ್ ಪಡೆದರೆ ಹರ್ಷವರ್ಧನ್ ದಾರಿ ಏನು ಅನ್ನೋ ಪ್ರಶ್ನೆ ಎದ್ದಿದೆ. ಈಗಾಗಲೇ ದರ್ಶನ್‌ ದೃವನಾರಾಯಣ್ ಕಾಂಗ್ರೆಸ್​ ಪಕ್ಷದಿಂದ ನಂಜನಗೂಡಿನಿಂದ ಆಯ್ಕೆ ಆಗಿದ್ದಾರೆ. ಹೀಗಾಗಿ ಶ್ರೀನಿವಾಸ್ ಪ್ರಸಾದ್ ಕುಟುಂಬ ಹಾಗೂ ಬೆಂಬಲಿಗರು ಧರ್ಮ ಸಂಕಟದಲ್ಲಿ ಸಿಲುಕಿದ್ದಾರೆ. ಈಗಾಗಲೇ ರಾಜಕೀಯ ನಿವೃತ್ತಿ‌ ಪಡೆದಿರುವ ಶ್ರೀನಿವಾಸ್ ಪ್ರಸಾದ್ ಸದ್ಯ ಗೊಂದಲದಲ್ಲಿದ್ದಾರೆ.

ಚಾಮರಾಜನಗರ ಕ್ಷೇತ್ರವನ್ನ ಗೆಲ್ಲಲು ಸಿಎಂ ಸಿದ್ದರಾಮಯ್ಯ ರಣತಂತ್ರ ರೂಪಿಸಿದ್ದಾರೆ. ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಚಾಮರಾಜನಗರ ಕಳೆದ ಬಾರಿ ಕೈ ತಪ್ಪಿತ್ತು. ಮತ್ತೆ ಕೈ ತೆಕ್ಕೆ ತೆಗೆದಕೊಳ್ಳಲು ಸಿಎಂ ಚಿತ್ತ ನೆಟ್ಟಿದ್ದಾರೆ. ಅದಕ್ಕಾಗಿ ಖುದ್ದು ಸಿದ್ದರಾಮಯ್ಯ ಶ್ರೀನಿವಾಸನ್ ಪ್ರಸಾದ್‌ ಅವರಿಗೆ ಫೋನ್ ಮೂಲಕ ಒಂದು ಸುತ್ತು ಮಾತುಕತೆ ನಡೆಸಿದ್ದಾರೆ. ಆರೋಗ್ಯ ವಿಚಾರಿಸುವ ನೆಪದಲ್ಲಿ ಮಾತುಕತೆ ಆರಂಭಿಸಿದ್ದಾರೆ. ಮೈಸೂರು ಚಾ.ನಗರ ಭಾಗದಲ್ಲಿ ಹೆಚ್ಚು ಪ್ರಭಾವ ಹೊಂದಿರುವ ಶ್ರೀನಿವಾಸ್ ಪ್ರಸಾದ್ ಅವರನ್ನು ಭೇಟಿಯಾಗುವಂತೆ ಸುನೀಲ್ ಬೋಸ್​ಗೆ ತಿಳಿಸಲಾಗಿದ್ದು ಸುನೀಲ್ ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಸುನೀಲ್ ಬೋಸ್ ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ. ಆದರೆ ಇನ್ನು ಘೋಷಣೆಯಾಗಿಲ್ಲ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:00 am, Thu, 28 March 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ