ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆ ಅಭಿಮಾನಿ ಆತ್ಮಹತ್ಯೆ, ಕುಟುಂಬಕ್ಕೆ ಸಾಂತ್ವನ ಹೇಳಲು ಗ್ರಾಮದತ್ತ ಯಡಿಯೂರಪ್ಪ ಪಯಣ
ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ರವಿ ಅಲಿಯಾಸ್ ರಾಜಾಹುಲಿ ಆತ್ಮಹತ್ಯೆಗೆ ಶರಣಾಗಿದ್ದ ಯುವಕ. ರವಿ ಮನೆಗೆ ಬಿ.ಎಸ್. ಯಡಿಯೂರಪ್ಪ ಭೇಟಿ ನೀಡಿ ಮೃತನ ಕುಟುಂಬಕ್ಕೆ ಸಾಂತ್ವಾನ ಹೇಳಲಿದ್ದಾರೆ.
ಚಾಮರಾಜನಗರ: ಇಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚಾಮರಾಜನಗರ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆ ಮನನೊಂದು ಅಭಿಮಾನಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಬಿ.ಎಸ್. ಯಡಿಯೂರಪ್ಪ ಇಂದು ಚಾಮರಾಜನಗರ ಜಿಲ್ಲೆಗೆ ಭೇಟಿ ನೀಡಲಿದ್ದು ಆತ್ಮಹತ್ಯೆ ಮಾಡಿಕೊಂಡ ಯುವಕನ ಮನೆಗೆ ಹೋಗಲಿದ್ದಾರೆ.
ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ರವಿ ಅಲಿಯಾಸ್ ರಾಜಾಹುಲಿ ಆತ್ಮಹತ್ಯೆಗೆ ಶರಣಾಗಿದ್ದ ಯುವಕ. ರವಿ ಮನೆಗೆ ಬಿ.ಎಸ್. ಯಡಿಯೂರಪ್ಪ ಭೇಟಿ ನೀಡಿ ಮೃತನ ಕುಟುಂಬಕ್ಕೆ ಸಾಂತ್ವಾನ ಹೇಳಲಿದ್ದಾರೆ. ಹೆಲಿಕಾಪ್ಟರ್ ಮೂಲಕ ಗುಂಡ್ಲುಪೇಟೆಗೆ ಬಿ.ಎಸ್. ಯಡಿಯೂರಪ್ಪ ಆಗಮಿಸಲಿದ್ದಾರೆ. ಬಳಿಕ ಗುಂಡ್ಲುಪೇಟೆಯಿಂದ ಬೊಮ್ಮಲಾಪುರ ಗ್ರಾಮಕ್ಕೆ ಬೈಕ್ ರ್ಯಾಲಿ ಮೂಲಕ ಆಗಮಿಸಲಿದ್ದಾರೆ. ಬಿ.ಎಸ್. ಯಡಿಯೂರಪ್ಪ ಗ್ರಾಮಕ್ಕೆ ಬರುತ್ತಿರುವ ಹಿನ್ನೆಲೆ ಅವರಿಗೆ ಅದ್ಧೂರಿಯಾಗಿ ಸ್ವಾಗತ ಮಾಡಲು ಅಭಿಮಾನಿಗಳು ಸಜ್ಜಾಗಿದ್ದಾರೆ.
ನಾಳೆ ಗುಂಡ್ಲುಪೇಟೆಯ ಬೊಮ್ಮಲಾಪುರಕ್ಕೆ ಭೇಟಿ ನೀಡುತ್ತಿದ್ದು, ಆತ್ಮಹತ್ಯೆ ಮಾಡಿಕೊಂಡ ಅಭಿಮಾನಿ ರವಿ ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಲಿದ್ದೇನೆ. ಈ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ನನಗೆ ಯಾವುದೇ ಹಾರ, ತುರಾಯಿಗಳನ್ನು ಹಾಕುವುದು, ಬೈಕ್ ರ್ಯಾಲಿ, ಮೆರವಣಿಗೆ ಇತ್ಯಾದಿಗಳನ್ನು ಮಾಡುವುದು ಖಂಡಿತ ಬೇಡ ಎಂದು ವಿನಂತಿಸಿಕೊಳ್ಳುತ್ತೇನೆ.
— B.S. Yediyurappa (@BSYBJP) July 29, 2021
ಇದನ್ನೂ ಓದಿ: ಬಿ.ಎಸ್.ಯಡಿಯೂರಪ್ಪ ಕೆಳಗಿಳಿದರು ಅದಕ್ಕೆ ಗಡ್ಡ ತೆಗೆದೆ; ಬಸನಗೌಡ ಪಾಟೀಲ್ ಯತ್ನಾಳ್
(BS yediyurappa To visit chamarajanagar over youth commits suicide for BS yediyurappa resign cm post)
Published On - 8:47 am, Fri, 30 July 21