AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆತ್ಮಹತ್ಯೆ ಮಾಡಿಕೊಂಡ ಅಭಿಮಾನಿ ಮನೆಗೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಪರಿಹಾರ ಧನ ನೀಡಿ ರವಿ ತಾಯಿಗೆ ಸಾಂತ್ವನ

BS Yediyurappa: ಆತ್ಮಹತ್ಯೆ ಮಾಡಿಕೊಂಡ ರವಿ ಕುಟುಂಬಕ್ಕೆ ಮಾಜಿ ಸಿಎಂ ಯಡಿಯೂರಪ್ಪ ನೆರವಾಗಿದ್ದಾರೆ. 5 ಲಕ್ಷ ರೂ. ನೆರವು ನೀಡಿ ಇನ್ನೂ 5 ಲಕ್ಷ ರೂ. ನೀಡುವುದಾಗಿ ಭರವಸೆ ಕೊಟ್ಟಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡ ಅಭಿಮಾನಿ ಮನೆಗೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಪರಿಹಾರ ಧನ ನೀಡಿ ರವಿ ತಾಯಿಗೆ ಸಾಂತ್ವನ
ಆತ್ಮಹತ್ಯೆ ಮಾಡಿಕೊಂಡ ಅಭಿಮಾನಿ ಮನೆಗೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ
TV9 Web
| Updated By: ಆಯೇಷಾ ಬಾನು|

Updated on:Jul 30, 2021 | 11:56 AM

Share

ಚಾಮರಾಜನಗರ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ(BS Yediyurappa) ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದ ಸುದ್ದಿ ಕೇಳಿ ನೇಣು ಬಿಗಿದುಕೊಂಡು ಆತ್ಮಹತ್ಯೆ(Suicide) ಮಾಡಿಕೊಂಡ ಅಭಿಮಾನಿ ರವಿ ಮನೆಗೆ ಬಿ.ಎಸ್. ಯಡಿಯೂರಪ್ಪ ಭೇಟಿ ನೀಡಿದ್ದಾರೆ.

ಚಾಮರಾಜನಗರದ(Chamarajanagar) ಗುಂಡ್ಲುಪೇಟೆಗೆ ಮಾಜಿ ಸಿಎಂ ಯಡಿಯೂರಪ್ಪ ಆಗಮಿಸುತ್ತಿದ್ದಂತೆ ಯಡಿಯೂರಪ್ಪನವರನ್ನು ನೊಡಲು ಅಭಿಮಾನಿಗಳ ನೂಕು ನುಗ್ಗಲೂ. ಮುಂದಿನ ಸಿಎಂ ವಿಜಯೇಂದ್ರ, ರಾಜಾ ಹುಲಿಗೆ ಜೈ ಎಂದು ಅಭಿಮಾನಿಗಳು ಘೋಷಣೆ ಕೂಗಿದ್ದಾರೆ. ಬಳಿಕ ಅಲ್ಲಿಂದ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರಕ್ಕೆ ಬಿ.ಎಸ್.ಯಡಿಯೂರಪ್ಪ ತೆರಳಿದ್ದು ಆತ್ಮಹತ್ಯೆಗೆ ಶರಣಾದ ಅಭಿಮಾನಿ ರವಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡ ರವಿ ಕುಟುಂಬಕ್ಕೆ ಬಿಎಸ್‌ವೈ ನೆರವು ಆತ್ಮಹತ್ಯೆ ಮಾಡಿಕೊಂಡ ರವಿ ಕುಟುಂಬಕ್ಕೆ ಮಾಜಿ ಸಿಎಂ ಯಡಿಯೂರಪ್ಪ ನೆರವಾಗಿದ್ದಾರೆ. 5 ಲಕ್ಷ ರೂ. ನೆರವು ನೀಡಿ ಇನ್ನೂ 5 ಲಕ್ಷ ರೂ. ನೀಡುವುದಾಗಿ ಭರವಸೆ ಕೊಟ್ಟಿದ್ದಾರೆ. ಈ ವೇಳೆ ರವಿ ತಾಯಿ ಯಡಿಯೂರಪ್ಪಗೆ ಕಾಲು ಮುಗಿದಿದ್ದಾರೆ. ಸುಮಾರು 10 ನಿಮಿಷಗಳ ಬಳಿಕ ಭೇಟಿ ಮುಕ್ತಾಯವಾಗಿದೆ.

ಈಗ ನಾವು ರವಿ ಕುಟುಂಬಕ್ಕೆ ಆಸರೆಯಾಗಬೇಕು ನನ್ನ ಅಭಿಮಾನಿಯಾಗಿದ್ದ ರವಿ ಆತ್ಮಹತ್ಯೆ ಮಾಡಿಕೊಂಡಿದ್ದರು. ನನ್ನ ರಾಜೀನಾಮೆಯಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ರು. ಈ ಘಟನೆಯಿಂದ ನನಗೆ ತುಂಬಾ ನೋವಾಗಿದೆ ಎಂದು ಬೊಮ್ಮಲಾಪುರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಈಗ ನಾವು ರವಿ ಕುಟುಂಬಕ್ಕೆ ಆಸರೆಯಾಗಬೇಕು. ಮೃತ ರವಿ ಕುಟುಂಬಕ್ಕೆ 5 ಲಕ್ಷ ರೂಪಾಯಿ ನೀಡಿದ್ದೇನೆ. ಇನ್ನೂ 5 ಲಕ್ಷ ರೂಪಾಯಿ ಬ್ಯಾಂಕ್ ಖಾತೆಗೆ ಹಾಕುತ್ತೇವೆ ಎಂದರು.

ಈ ವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಯಡಿಯೂರಪ್ಪ ಪಕ್ಷವನ್ನು ಬಲಪಡಿಸಲು ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಡುತ್ತೇನೆ. ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇವೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ನಡ್ಡಾರಿಗೆ ಇದು ನಾನು ನೀಡಿರುವ ಭರವಸೆ. ಗಣೇಶ ಚತುರ್ಥಿ ಬಳಿಕ ಜಿಲ್ಲೆಗಳಿಗೆ ಭೇಟಿ ನೀಡುತ್ತೇನೆ. ಪ್ರತಿ ವಾರ ಒಂದು ಜಿಲ್ಲೆಗೆ ಹೋಗಿ ಸಂಘಟನೆ ಬಲಪಡಿಸುವೆ. ನನ್ನ ಕಣ್ಣೆದುರೇ ಯೋಗ್ಯ ವ್ಯಕ್ತಿಯನ್ನು ಬೆಳೆಸಬೇಕೆಂಬ ಉದ್ದೇಶವಿದೆ. ಬೊಮ್ಮಾಯಿರನ್ನು ಸರ್ವಾನುಮತದಿಂದ ಆಯ್ಕೆ ಮಾಡಿದ್ದೇವೆ ಎಂದರು.

ಸಿದ್ದರಾಮಯ್ಯ ಸಂಯಮ ಕಳೆದುಕೊಂಡು ಮಾತನಾಡ್ತಿದ್ದಾರೆ. ಅವರಿಗೆ ಈ ರೀತಿಯ ಮಾತುಗಳು ಶೋಭೆ ತರುವುದಿಲ್ಲ. ಸಂಪುಟ ರಚನೆಯಲ್ಲಿ ಬೊಮ್ಮಾಯಿಗೆ ಪೂರ್ಣ ಸ್ವಾತಂತ್ರ್ಯವಿದೆ. ಸಚಿವ ಸಂಪುಟ ರಚನೆಗೆ ನಾನು ಯಾವುದೇ ಸಲಹೆ ನೀಡಲ್ಲ ಎಂದು ಗುಂಡ್ಲುಪೇಟೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ತಿಳಿಸಿದ್ರು.

ಇದನ್ನೂ ಓದಿ: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆ ಅಭಿಮಾನಿ ಆತ್ಮಹತ್ಯೆ, ಕುಟುಂಬಕ್ಕೆ ಸಾಂತ್ವನ ಹೇಳಲು ಗ್ರಾಮದತ್ತ ಯಡಿಯೂರಪ್ಪ ಪಯಣ

Published On - 11:42 am, Fri, 30 July 21