AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ ಜಿಲ್ಲೆಯಲ್ಲಿ ಹಸುಗಳ ಸರಣಿ ಸಾವು: ಎರಡೇ ದಿನಗಳಲ್ಲಿ ಮೃತಪಟ್ಟ 11 ಗೋವು

ಚಾಮರಾಜನಗರ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಲ್ಲಿ 11 ಹಸುಗಳ ನಿಗೂಢ ಸಾವಿನಿಂದ ರೈತರು ತೀವ್ರ ಆತಂಕಕ್ಕೀಡಾಗಿದ್ದಾರೆ. ಹನೂರು ತಾಲೂಕಿನ ಶೆಟ್ಟಿಹಳ್ಳಿ ಮತ್ತು ಗೋಪಿಶೆಟ್ಟಿಯೂರು ಗ್ರಾಮಗಳಲ್ಲಿ ಈ ಘಟನೆಗಳು ನಡೆದಿವೆ. ವಿಷಪೂರಿತ ಆಹಾರ ಅಥವಾ ನೀರಿನಿಂದ ಹಸುಗಳು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ರೈತರು ಈ ಬಗ್ಗೆ ತನಿಖೆಗೆ ಆಗ್ರಹಿಸಿದ್ದಾರೆ.

ಚಾಮರಾಜನಗರ ಜಿಲ್ಲೆಯಲ್ಲಿ ಹಸುಗಳ ಸರಣಿ ಸಾವು: ಎರಡೇ ದಿನಗಳಲ್ಲಿ ಮೃತಪಟ್ಟ 11 ಗೋವು
ಮೃತಪಟ್ಟ ಹಸುಗಳುImage Credit source: Tv9 Kannada
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Feb 05, 2026 | 4:57 PM

Share

ಚಾಮರಾಜನಗರ, ಫೆಬ್ರವರಿ 05: ಕಾಡು ಪ್ರಾಣಿಗಳ ಹಾವಳಿಹಿಂದ ಜಾನುವಾರುಗಳನ್ನು ಕಳೆದುಕೊಂಡು ಮೊದಲೇ ಕಂಗಾಲಾಗಿದ್ದ ಗಡಿ ಜಿಲ್ಲೆ ಚಾಮರಾಜನಗರದ ರೈತರಿಗೆ ಮತ್ತೊಂದು ಆತಂಕ ಎದುರಾಗಿದೆ. ಜಿಲ್ಲೆಯಲ್ಲಿ ಹಸುಗಳ ಸರಣಿ ಸಾವು ನಡೆಯುತ್ತಿದ್ದು, ಕೇವಲ ಎರಡು ದಿನಗಳ ಅವಧಿಯಲ್ಲಿ ಒಂದೆರಡಲ್ಲ ಬರೋಬ್ಬರಿ 11 ಗೋವುಗಳು ಮೃತಟಪಟ್ಟಿವೆ. ಜಾನುವಾರುಗಳಿಗೆ ವಿಷ ಹಾಕಿರುವ ಅನುಮಾನ ವ್ಯಕ್ತವಾಗಿದ್ದು, ಹಸುಗಳ ಮಾಲಕರು ಕಣ್ಣೀರಿಟ್ಟಿದ್ದಾರೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶೆಟ್ಟಿಹಳ್ಳಿ ಗ್ರಾಮದಲ್ಲಿ 6 ಹಸುಗಳು ಅನುಮಾನಾಸ್ಪದವಾಗಿ ನಿನ್ನೆ ಮೃತಪಟ್ಟಿದ್ದವು. ಪರಶಿವ ಎಂಬವರಿಗೆ ಸೇರಿದ ಹಸುಗಳು ಜಮೀನಿನ ಪಕ್ಕದಲ್ಲಿ ಗೋವಿನ ಮೃತದೇಹಗಳು ಬಿದ್ದಿದ್ದು, ಬೆಳಗ್ಗೆ ಮೇವು ಹಾಕಲು ಜಮೀನಿಗೆ ತೆರಳಿದಾಗ ಪ್ರಕರಣ ಬೆಳಕಿಗೆ ಬಂದಿತ್ತು. ಈ ಬಗ್ಗೆ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ್ದ ತಹಶೀಲ್ಧಾರ್ ಚೈತ್ರಾ, ಪಶು ವೈದ್ಯಾಧಿಕಾರಿ ಸಿದ್ದರಾಜು ಪರಿಶೀಲನೆ ನಡೆಸಿದ್ದರು. ಮೇಲ್ನೊಟಕ್ಕೆ ವಿಷ ಪೂರಿತ ಆಹಾರ ಅಥವಾ ವಿಷ ಪೂರಿತ ನೀರು ಸೇವಿಸಿ ಹಸುಗಳು ಮೃತಪಟ್ಟಿರುವ ಬಗ್ಗೆ ಅಂದಾಜಿಸಲಾಗಿತ್ತು. 8 ಹಸುಗಳ ಪೈಕಿ 6 ಮೃತಪಟ್ಟಿದ್ದರೆ ಇನ್ನು 2 ನಾಪತ್ತೆಯಾಗಿರುವ ವಿಚಾರ ಈ ವೇಳೆ ಗೊತ್ತಾಗಿತ್ತು.

ಇದನ್ನೂ ಓದಿ: ಸುಳ್ವಾಡಿಯಲ್ಲಿ ಭಾರೀ ದುರಂತ; ಫ್ಲೋರೈಡ್ ಮಿಶ್ರಿತ ನೀರು ಕುಡಿದು 47 ಮಂದಿಗೆ ಕಿಡ್ನಿ ವೈಫಲ್ಯ

ಘಟನೆ ಮಾಸುವ ಮುನ್ನವೇ ಇದೇ ತಾಲೂಕಿನ ಗೋಪಿಶೆಟ್ಟಿಯೂರು ಗ್ರಾಮದಲ್ಲಿ ಇಂದು 5 ಹಸುಗಳ ನಿಗೂಢವಾಗಿ ಮೃತಪಟ್ಟಿವೆ. ಗ್ರಾಮದ ತಂಗವೇಲು ಎಂಬುವವರಿಗೆ ಸೇರಿದ ಹಸುಗಳು ಮೃತಪಟ್ಟಿರೋದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಹಸುಗಳನ್ನ ಕಳೆದುಕೊಂಡಿರುವ ಮಾಲಕರಿ ಕಣ್ಣೀರು ಹಾಕಿದ್ದು, ಜೀವನೊಪಾಯಕ್ಕೆ ಇದ್ದಿದ್ದೆ ಈ ಹಸುಗಳು. ಈಗ ನಮ್ಮ ಕತೆ ಏನು ಎಂದು ಭಾವುಕರಾಗಿದ್ದಾರೆ. ಹಸು ಸಾವಿಗೆ ಕಾರಣವಾದರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ತಡವಾಗಿ ಸಭೆಗೆ ಆಗಮಿಸಿದ ಆಧಿಕಾರಿಗಳಿಗೆ ಚಳಿ ಬಿಡಿಸಿದ ರೈತರು

2 ತಾಸುಗಳ ಕಾಲ ತಡವಾಗಿ ಸಭೆಗೆ ಆಗಮಿಸಿದ ಆಧಿಕಾರಿಗಳಿಗೆ ರೈತರು ಚಳಿಬಿಡಿಸಿರುವ ಘಟನೆ ಚಾಮರಾಜನಗರದ ಜಿಲ್ಲಾಧಿಕಾರಿ ಭವನದಲ್ಲಿ ನಡೆದಿದೆ. ಪ್ರಾದೇಶಿಕ ಆಯುಕ್ತ ನಿತೇಶ್ ಪಾಟೀಲ್​​ಗೆ ರೈತರು ಹಿಗ್ಗಾ ಮುಗ್ಗಾ ಜಾಡಿಸಿದ್ದು, ಈ ವೇಳೆ ಮಾಧ್ಯಮದವರಿಗೆ ವಿಡಿಯೋ ರೆಕಾರ್ಡ್ ಮಾಡದಂತೆ ಎಡಿಸಿ ಜವರೇಗೌಡ ಸೂಚಿಸಿದ ಪ್ರಸಂಗವೂ ನಡೆದಿದೆ. ಕಬಿನಿ ಹಿನ್ನೀರು, ಬಂಡೀಪುರದಲ್ಲಿ ಅಕ್ರಮವಾಗಿ ತಲೆ ಎತ್ತಿರುವ ರೆಸಾರ್ಟ್, ಹೋಮ್ ಸ್ಟೇ ಹಾಗೂ ಹೋಟೇಲ್​​ಗಳ ತೆರವು ವಿಚಾರವಾಗಿ ಸಭೆ ಕರೆಯಲಾಗಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಕೊಯಮತ್ತೂರಿನ ಬೇಕರಿಯಿಂದ 10,000 ರೂ. ಸಿಗರೇಟ್ ಪ್ಯಾಕೆಟ್ ಕದ್ದ ಕಳ್ಳ!
ಕೊಯಮತ್ತೂರಿನ ಬೇಕರಿಯಿಂದ 10,000 ರೂ. ಸಿಗರೇಟ್ ಪ್ಯಾಕೆಟ್ ಕದ್ದ ಕಳ್ಳ!
ಮೋದಿ ಬಹಳ ಸುಂದರ ವ್ಯಕ್ತಿ; ಗೆಳೆಯನನ್ನು ಹೊಗಳಿದ ಟ್ರಂಪ್
ಮೋದಿ ಬಹಳ ಸುಂದರ ವ್ಯಕ್ತಿ; ಗೆಳೆಯನನ್ನು ಹೊಗಳಿದ ಟ್ರಂಪ್
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್