AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chamarajanagar: ಸಾರಿಗೆ ವೆಚ್ಚ ಭರಿಸಲಾಗದೇ ಪತ್ನಿಯ ಶವವನ್ನು ಗೋಣಿ ಚೀಲದಲ್ಲಿ ಹಾಕಿ ಭುಜದ ಮೇಲೆ ಹೊತ್ತೊಯ್ದ ವ್ಯಕ್ತಿ

ಪತ್ನಿಯ ಶವ ಸಾಗಿಸಲು ಹಣವಿಲ್ಲ ಎಂದು ಅಲೆಮಾರಿ ವ್ಯಕ್ತಿಯೊಬ್ಬ ತನ್ನ ಪತ್ನಿಯ ಶವವನ್ನು ಪ್ಲಾಸ್ಟಿಕ್ ಗೋಣಿ ಚೀಲದಲ್ಲಿ ಹಾಕಿಕೊಂಡು ಆಕೆಯ ಅಂತ್ಯ ಸಂಸ್ಕಾರ ನಡೆಸಿರುವ ದಾರುಣ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನಲ್ಲಿ ನಡೆದಿದೆ.

Chamarajanagar: ಸಾರಿಗೆ ವೆಚ್ಚ ಭರಿಸಲಾಗದೇ ಪತ್ನಿಯ ಶವವನ್ನು ಗೋಣಿ ಚೀಲದಲ್ಲಿ ಹಾಕಿ ಭುಜದ ಮೇಲೆ ಹೊತ್ತೊಯ್ದ ವ್ಯಕ್ತಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 08, 2022 | 1:10 PM

Share

ಚಾಮರಾಜನಗರ: ಪತ್ನಿಯ ಶವ ಸಾಗಿಸಲು ಹಣವಿಲ್ಲ ಎಂದು ಅಲೆಮಾರಿ ವ್ಯಕ್ತಿಯೊಬ್ಬ ತನ್ನ ಪತ್ನಿಯ ಶವವನ್ನು ಪ್ಲಾಸ್ಟಿಕ್ ಗೋಣಿ ಚೀಲದಲ್ಲಿ ಹಾಕಿಕೊಂಡು ಆಕೆಯ ಅಂತ್ಯ ಸಂಸ್ಕಾರ ನಡೆಸಿರುವ ದಾರುಣ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನಲ್ಲಿ ನಡೆದಿದೆ. ಕಡು ಬಡತನದಲ್ಲಿ ಜೀವನ ಸಾಗಿಸುತ್ತಿದ್ದ ಮಂಡ್ಯ ತಾಲೂಕಿನ ಮಳವಳ್ಳಿಯ ಕಾಗೇಪುರದ ಅಲೆಮಾರಿ ದಂಪತಿ ಈ ಪ್ರದೇಶದಲ್ಲಿ ಚಿಂದಿ ಆಯುವ ಕೆಲಸ ಮಾಡುತ್ತಿದ್ದರು. ಈ ಇಬ್ಬರು ದಂಪತಿಯನ್ನು ರವಿ ಮತ್ತು ಅವರ ಪತ್ನಿ ಕಾಳಮ್ಮ (26) ಎಂದು ಗುರುತಿಸಲಾಗಿದೆ. ಯಳಂದೂರಿನ ಕಾನಾತನಹಳ್ಳಿಗೆ ಬಂದು ಜೀವನೋಪಾಯಕ್ಕಾಗಿ ತ್ಯಾಜ್ಯ ಪ್ಲಾಸ್ಟಿಕ್ ಸಂಗ್ರಹಿಸುತ್ತಿದ್ದರು. ಅವರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪಾಳುಬಿದ್ದ ಮನೆಯಲ್ಲಿ ವಾಸಿಸುತ್ತಿದ್ದರು. ಮಂಗಳವಾರ ರಾತ್ರಿ ಕಾಳಮ್ಮ ಅಸ್ವಸ್ಥಗೊಂಡು ಕೊನೆಯುಸಿರೆಳೆದಿದ್ದಾರೆ.

ಆಕೆ ಮೃತಪಟ್ಟಿರುವುದನ್ನು ಕಂಡು ರವಿ ಈ ಪ್ರದೇಶದಲ್ಲಿ ಹೊಸಬರಾಗಿದ್ದರಿಂದ ಸಾಲ ಮಾಡಲು ಸಾಧ್ಯವಾಗಿರಲಿಲ್ಲ. ಪ್ಲಾಸ್ಟಿಕ್ ತ್ಯಾಜ್ಯವಿದ್ದ ಗೋಣಿ ಚೀಲವನ್ನು ಖಾಲಿ ಮಾಡಿ, ಶವವನ್ನು ಅದರೊಳಗೆ ಇಟ್ಟು ಹೆಗಲ ಮೇಲೆ ಹೊತ್ತುಕೊಂಡು ಸುವರ್ಣಾವತಿ ತೊಟ್ಟಿಯ ಬಳಿ ಅಂತಿಮ ಸಂಸ್ಕಾರ ನೆರವೇರಿಸಿದರು.

ಇದನ್ನು ಓದಿ: ಹೃದಯಾಘಾತದಿಂದ ಸಶಸ್ತ್ರ ಮೀಸಲು ಪಡೆ ಪೊಲೀಸ್ ಸಿಬ್ಬಂದಿ ಸಾವು

ಅಂಗಡಿಯೊಂದರ ಮಾಲೀಕ ವೀರಭದ್ರನಾಯ್ಕ ಅವರು ಸ್ಥಳದಿಂದ ಹಾದು ಹೋಗುತ್ತಿದ್ದಾಗ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದರು. ರವಿ ಪತ್ನಿಯನ್ನು ಕೊಂದು ಶವವನ್ನು ಬಚ್ಚಿಟ್ಟಿರಬಹುದು ಎಂದು ಗ್ರಾಮಸ್ಥರು ಶಂಕಿಸಿದ್ದಾರೆ. ಯಳಂದೂರು ಪೊಲೀಸರು ಘಟನಾ ಸ್ಥಳಕ್ಕೆ ದೌಡಾಯಿಸಿದ್ದು, ಘಟನೆಯ ಬಗ್ಗೆ ವಿಚಾರಣೆ ಮಾಡಿದ್ದಾರೆ. ಜಿಲ್ಲಾ ಆಸ್ಪತ್ರೆಯಲ್ಲಿ ಕಾಳಮ್ಮನ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಇದೀಗ ರವಿಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಯಳಂದೂರು ಪಟ್ಟಣ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಲ್ಲೇಶ್ ಹಾಗೂ ಪಿಎಸ್ ಐ ಕರಿ ಬಸಪ್ಪ ಅವರು ಪೊಲೀಸರ ಸಮ್ಮುಖದಲ್ಲಿ ಕರಿಪುರ ಬಳಿಯ ಸ್ಮಶಾನದಲ್ಲಿ ಅಂತ್ಯಕ್ರಿಯೆ ನೆರವೇರಿಸಲು ವ್ಯವಸ್ಥೆ ಮಾಡಿದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:10 pm, Thu, 8 December 22