AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಹೊಸ ವರ್ಷದ ಮೊದಲ ದಿನ ಬಂಡೀಪುರ ಸಫಾರಿ ಫುಲ್ ರಶ್

ಹೊಸ ವರ್ಷ ಹಿನ್ನಲೆ ಪರಿಸರ ಪ್ರೇಮಿಗಳು ಬಂಡೀಪುರಕ್ಕೆ ಸಾಕಷ್ಟು ಸಂಖ್ಯೆಯಲ್ಲಿ ಆಗಮಿಸಿದರು. ಪರಿಣಾಮವಾಗಿ ಪ್ರವಾಸಿಗರಿಂದ ಬಂಡೀಪುರ ಫುಲ್ ರಶ್ ಆಗಿತ್ತು. ಗೋಪಾಲಸ್ವಾಮಿಯ ದರ್ಶನ ಪಡೆದ ಅನೇಕರು ಬಂಡೀಪುರಕ್ಕೆ ಆಗಿಮಿಸಿದರು. ಆದ್ರೆ ವಾಹನಗಳಿಲ್ಲದೆ ಕೆಲ ಕಾಲ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು

ಚಾಮರಾಜನಗರ: ಹೊಸ ವರ್ಷದ ಮೊದಲ ದಿನ ಬಂಡೀಪುರ ಸಫಾರಿ ಫುಲ್ ರಶ್
ಚಾಮರಾಜನಗರ: ಹೊಸ ವರ್ಷದ ಮೊದಲ ದಿನ ಬಂಡೀಪುರ ಸಫಾರಿ ಫುಲ್ ರಶ್
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Jan 01, 2024 | 4:27 PM

Share

ಚಾಮರಾಜನಗರ, ಜನವರಿ 1: ಹೊಸ ವರ್ಷದ (New Year) ಸಂಭ್ರಮ ಸಡಗರ ನಾಡಿನ ಜನತೆಯಲ್ಲಿ ಮನೆ ಮಾಡಿರುವ ಮಧ್ಯೆಯೇ, ನೂರಾರು ಪ್ರವಾಸಿಗರು ಹೊಸ ವರ್ಷದ ಮೊದಲ ದಿನವೇ ಹಿಮವದ್ ಗೋಪಾಲಸ್ವಾಮಿಯ (Himavad Gopalaswamy Temple) ದರ್ಶನ ಪಡೆದು ಬಳಿಕ ಸಫಾರಿ ಮಾಡಿ ಸಂಭ್ರಮಿಸಿದರು. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಹಿಮವದ್ ಗೋಪಾಲಸ್ವಾಮಿ ದೇವಾಲಯಕ್ಕೆ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಭಕ್ತರು ಭೇಟಿ ಕೊಟ್ಟು ಗೋಪಾಲಸ್ವಾಮಿಯ ಕೃಪೆಗೆ ಪಾತ್ರರಾದರು. ಜೊತೆಗೆ ಬಂಡೀಪುರಕ್ಕೂ (Bandipur) ಭೇಟಿ ಕೊಟ್ಟು ಸಫಾರಿ ಮಾಡಿ ಸಂಭ್ರಮಿಸಿದರು.

ಹೊಸ ವರ್ಷ ಹಿನ್ನಲೆ ಪರಿಸರ ಪ್ರೇಮಿಗಳು ಬಂಡೀಪುರಕ್ಕೆ ಸಾಕಷ್ಟು ಸಂಖ್ಯೆಯಲ್ಲಿ ಆಗಮಿಸಿದರು. ಪರಿಣಾಮವಾಗಿ ಪ್ರವಾಸಿಗರಿಂದ ಬಂಡೀಪುರ ಫುಲ್ ರಶ್ ಆಗಿತ್ತು. ಗೋಪಾಲಸ್ವಾಮಿಯ ದರ್ಶನ ಪಡೆದ ಅನೇಕರು ಬಂಡೀಪುರಕ್ಕೆ ಆಗಿಮಿಸಿದರು. ಆದ್ರೆ ವಾಹನಗಳಿಲ್ಲದೆ ಕೆಲ ಕಾಲ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಇನ್ನು ಕೇವಲ ಜಿಲ್ಲೆ ಹೊರ ಜಿಲ್ಲೆ ಅಷ್ಟೇ ಅಲ್ಲದೆ ಹೊರ ರಾಜ್ಯಗಳಿಂದಲು ಪ್ರವಾಸಿಗರು ಆಗಮಿಸಿದ ಕಾರಣ ಬಂಡೀಪುರ ಸಫಾರಿ ಕೇಂದ್ರದ ಪಾರ್ಕಿಂಗ್ ಹೌಸ್ ಫುಲ್ ಆಗಿತ್ತು ಇದರಿಂದ ಸಫಾರಿ ಕೇಂದ್ರದ ಕಲೆಕ್ಷನ್ ಒಂದು ಪಟ್ಟು ಹೆಚ್ಚಾಗಿತ್ತು.

ಇದನ್ನೂ ಓದಿ: New Year 2024: ನಾಡಿನ ವಿವಿಧ ದೇವಸ್ಥಾನಗಳಲ್ಲಿ ಜರುಗಿದ ಪೂಜಾ ಕೈಂಕರ್ಯಗಳು, ಇಲ್ಲಿದೆ ಫೋಟೋಸ್​

ಒಟ್ಟಾರೆ ಹೊಸ ವರ್ಷದ ಸಂಭ್ರಮದ ಹಿನ್ನಲೆ ಪ್ರವಾಸಿ ತಾಣಗಳು ಹಾಗೂ ದೇವಾಲಯಗಳು ಪ್ರವಾಸಿಗರಿಂದ ಕಿಕ್ಕಿರಿದು ತುಂಬಿದ್ದು ಶಕ್ತಿ ಯೋಜನೆ ಜಾರಿ ಹಿನ್ನಲೆ ಈ ಭಾರಿ ಎಲ್ಲಾ ಪ್ರವಾಸಿ ತಾಣಗಳಲ್ಲಿಯೂ ಮಹಿಳಾ ಮಣಿಯರೇ ಹೆಚ್ಚಿನ ಸಂಖ್ಯೆಯಲ್ಲಿ ಇದ್ದಿದ್ದು ವಿಶೇಷ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸೂರಜ್ ಪ್ರಸಾದ್ ಎಸ್.ಎನ್
ಸೂರಜ್ ಪ್ರಸಾದ್ ಎಸ್.ಎನ್

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ
‘ಇಷ್ಟು ಗಲೀಜು ಆಟ ಆಡಬೇಡಿ’; ಕಾವ್ಯಾಗೆ ನೇರವಾಗಿ ಹೇಳಿದ ಗಾನವಿ
‘ಇಷ್ಟು ಗಲೀಜು ಆಟ ಆಡಬೇಡಿ’; ಕಾವ್ಯಾಗೆ ನೇರವಾಗಿ ಹೇಳಿದ ಗಾನವಿ
ಎಸ್​ಐಆರ್​ನಲ್ಲಿ 1.7 ಕೋಟಿ ಹೆಸರು ತೆಗೆದಿದ್ದಾರೆ: ಸಚಿವ ರಿಜ್ವಾನ್ ಆರೋಪ
ಎಸ್​ಐಆರ್​ನಲ್ಲಿ 1.7 ಕೋಟಿ ಹೆಸರು ತೆಗೆದಿದ್ದಾರೆ: ಸಚಿವ ರಿಜ್ವಾನ್ ಆರೋಪ
ಸಕ್ರೇಬೈಲು ಆನೆ ಬಿಡಾರದಲ್ಲಿ ಶೌರ್ಯ ಆನೆ ಸಾವು
ಸಕ್ರೇಬೈಲು ಆನೆ ಬಿಡಾರದಲ್ಲಿ ಶೌರ್ಯ ಆನೆ ಸಾವು
ಹುಚ್ಚರನ್ನು ಜೈಲಿಗೆ ಹಾಕ್ತಾರಾ? ಪ್ರಕಾಶ್ ರಾಜ್​ಗೆ ಪ್ರತಾಪ್ ಸಿಂಹ ತಿರುಗೇಟು
ಹುಚ್ಚರನ್ನು ಜೈಲಿಗೆ ಹಾಕ್ತಾರಾ? ಪ್ರಕಾಶ್ ರಾಜ್​ಗೆ ಪ್ರತಾಪ್ ಸಿಂಹ ತಿರುಗೇಟು