ಚಾಮರಾಜನಗರ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ನಾಮಪತ್ರ ತಿರಸ್ಕೃತವಾಗುತ್ತಾ?

ಕರ್ನಾಟಕದಲ್ಲಿ ಲೋಕಸಭೆ ಕುರುಕ್ಷೇತ್ರದ ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಿನ್ನೆ(ಏಪ್ರಿಲ್ 04) ಮುಕ್ತಾಯವಾಗಿದೆ. 14 ಲೋಕಸಭಾ ಕ್ಷೇತ್ರಗಳಲ್ಲಿ ಒಟ್ಟು 443 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಇನ್ನು ಚಾಮರಾನಗರ ಎಸ್​​ಸಿ ಮೀಸಲು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಚಿವ ಎಚ್​ಡಿ ಮಹದೇವಪ್ಪ ಪುತ್ರ ಸುನೀಲ್ ಬೋಸ್ ಅವರು ನಾಮಪತ್ರ ಸಲ್ಲಿಸಿದ್ದು, ಇದೀಗ ಅವರ ನಾಮಪತ್ರ ವಿವಾದಕ್ಕೆ ಕಾರಣವಾಗಿದೆ.

ಚಾಮರಾಜನಗರ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ನಾಮಪತ್ರ ತಿರಸ್ಕೃತವಾಗುತ್ತಾ?
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Apr 05, 2024 | 7:05 PM

ಚಾಮರಾನಗರ, (ಏಪ್ರಿಲ್ 05) ಸಚಿವ ಎಚ್​ಸಿ ಮಹದೇವಪ್ಪ ಅವರ ಪುತ್ರ ಸುನೀಲ್ ಬೊಸ್(Congress Candidate Sunil Bose)  ಅವರು ಕಾಂಗ್ರೆಸ್​ ಅಭ್ಯರ್ಥಿಯಾಗಿ ಚಾಮರಾನಗರ ಲೋಕಸಭಾ(chamarajanagar Loksabha)  ಕ್ಷೇತ್ರದಿಂದ ಕಣಕ್ಕಿದಿದ್ದಾರೆ. ಈಗಾಗಲೇ ಅವರು ನಾಮಪತ್ರ ಸಲ್ಲಿಸಿದ್ದು, ಇದೀಗ ಅವರು ತಮ್ಮ ನಾಮಪತ್ರದಲ್ಲಿ ಪ್ರಮುಖ ಮಾಹಿತಿಯನ್ನು ತಿಳಿಸಿದ ಮುಚ್ಚಿಟ್ಟಿದ್ದಾರೆ ಎಂದು ಬಿಜೆಪಿ (BJP) ಆರೋಪ ಮಾಡಿದೆ. ಈ ಸಂಬಂಧ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಅವರು ಪ್ರಮಾಣಪತ್ರದಲ್ಲಿ ವೈವಾಹಿಕ ಜೀವನದ ಕುರಿತು ಮಾಹಿತಿ ಮರೆಮಾಚಿದ್ದಾರೆ. ಹೀಗಾಗಿ ಅವರ ನಾಮಪತ್ರವನ್ನು ತಿರಸ್ಕರಿಸುವಂತೆ ಬಿಜೆಪಿ ನಾಯಕರು ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ.

ನಾಮಪತ್ರದ ಸಲ್ಲಿಕೆ ವೇಳೆ ಪ್ರಮಾಣ ಪತ್ರದಲ್ಲಿ ಹೆಂಡತಿ, ಮಕ್ಕಳ, ಕುಟುಂಬದ ಮಾಹಿತಿ ಮುಚ್ಚಿಟ್ಟಿದ್ದಾರೆ. ಅಲ್ಲದೇ ಪತ್ನಿ, ಮಕ್ಕಳು, ತಂದೆ-ತಾಯಿ ಆಸ್ತಿ ವಿವರ ಘೋಷಿಸಿಲ್ಲ. ಹೀಗಾಗಿ ಸುನೀಲ್ ಬೋಸ್ ಅವರ ನಾಮಪತ್ರವನ್ನು ಅಸಿಂಧುಗೊಳಿಸುವಂತೆ ಚಾಮರಾಜನಗರ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ, ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಾಲರಾಜು ಅವರು ಜಿಲ್ಲಾ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ತೇಜಸ್ವಿ ಸೂರ್ಯ ನಾಮಪತ್ರ ಸಲ್ಲಿಕೆ ರದ್ದು ಮಾಡುವಂತೆ ಚುನಾವಣಾಧಿಕಾರಿಗೆ ದೂರು, ಕಾರಣವೇನು?

ಏಪ್ರಿಲ್‌ 3ರಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಅವರು ಬೃಹತ್ ರೋಡ್ ಶೋ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದ್ದರು. ಇನ್ನು ರೋಡ್ ಶೋನಲ್ಲಿ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಎಚ್​ಸಿ ಮಹದೇವಪ್ಪ, ಡಾ ಜಿ. ಪರಮೇಶ್ವರ್, ಸತೀಶ್ ಜಾರಕಿಹೊಳಿ ಸೇರಿದಂತೆ ಇತರೆ ಘಟಾನುಘಟಿ ನಾಯಕರುಗಳು ಭಾಗಿಯಾಗಿದ್ದರು.

ಇದೀಗ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ನಾಮಪತ್ರದ ಬಗ್ಗೆ ಬಿಜೆಪಿ ಕೆಲ ಗಂಭೀರ ಆರೋಪಗಳನ್ನು ಮಾಡಿದೆ. ಅಲ್ಲದೇ ಅವರ ನಾಮಪತ್ರ ತಿರಸ್ಕೃತ ಮಾಡುವಂತೆ ಚುನಾವಣಾಧಿಕಾರಿಗೆ ದೂರು ನೀಡಿದೆ.  ಈ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ನಾಮಪತ್ರ ಪರಿಶೀಲನೆ ಮಾಡಿ ಏನೆಲ್ಲಾ ತಪ್ಪು ಇದೆಯೋ ಅಥವಾ ಕ್ರಮಬದ್ಧವಾಗಿದೆಯೋ ಎನ್ನುವುದನ್ನು ಪರಿಶೀಲನೆ ಮಾಡಿ ಬಳಿಕ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.  ಇದರಿಂದ ಇತ್ತ ಕಾಂಗ್ರೆಸ್​ನಲ್ಲಿ  ನಾಯಕರಲ್ಲಿ ಆತಂಕ ಶುರುವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು