ಚಾಮರಾನಗರ, (ಏಪ್ರಿಲ್ 05) ಸಚಿವ ಎಚ್ಸಿ ಮಹದೇವಪ್ಪ ಅವರ ಪುತ್ರ ಸುನೀಲ್ ಬೊಸ್(Congress Candidate Sunil Bose) ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಚಾಮರಾನಗರ ಲೋಕಸಭಾ(chamarajanagar Loksabha) ಕ್ಷೇತ್ರದಿಂದ ಕಣಕ್ಕಿದಿದ್ದಾರೆ. ಈಗಾಗಲೇ ಅವರು ನಾಮಪತ್ರ ಸಲ್ಲಿಸಿದ್ದು, ಇದೀಗ ಅವರು ತಮ್ಮ ನಾಮಪತ್ರದಲ್ಲಿ ಪ್ರಮುಖ ಮಾಹಿತಿಯನ್ನು ತಿಳಿಸಿದ ಮುಚ್ಚಿಟ್ಟಿದ್ದಾರೆ ಎಂದು ಬಿಜೆಪಿ (BJP) ಆರೋಪ ಮಾಡಿದೆ. ಈ ಸಂಬಂಧ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಅವರು ಪ್ರಮಾಣಪತ್ರದಲ್ಲಿ ವೈವಾಹಿಕ ಜೀವನದ ಕುರಿತು ಮಾಹಿತಿ ಮರೆಮಾಚಿದ್ದಾರೆ. ಹೀಗಾಗಿ ಅವರ ನಾಮಪತ್ರವನ್ನು ತಿರಸ್ಕರಿಸುವಂತೆ ಬಿಜೆಪಿ ನಾಯಕರು ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ.
ನಾಮಪತ್ರದ ಸಲ್ಲಿಕೆ ವೇಳೆ ಪ್ರಮಾಣ ಪತ್ರದಲ್ಲಿ ಹೆಂಡತಿ, ಮಕ್ಕಳ, ಕುಟುಂಬದ ಮಾಹಿತಿ ಮುಚ್ಚಿಟ್ಟಿದ್ದಾರೆ. ಅಲ್ಲದೇ ಪತ್ನಿ, ಮಕ್ಕಳು, ತಂದೆ-ತಾಯಿ ಆಸ್ತಿ ವಿವರ ಘೋಷಿಸಿಲ್ಲ. ಹೀಗಾಗಿ ಸುನೀಲ್ ಬೋಸ್ ಅವರ ನಾಮಪತ್ರವನ್ನು ಅಸಿಂಧುಗೊಳಿಸುವಂತೆ ಚಾಮರಾಜನಗರ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ, ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಾಲರಾಜು ಅವರು ಜಿಲ್ಲಾ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ.
ಇದನ್ನೂ ಓದಿ: ತೇಜಸ್ವಿ ಸೂರ್ಯ ನಾಮಪತ್ರ ಸಲ್ಲಿಕೆ ರದ್ದು ಮಾಡುವಂತೆ ಚುನಾವಣಾಧಿಕಾರಿಗೆ ದೂರು, ಕಾರಣವೇನು?
ಏಪ್ರಿಲ್ 3ರಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಅವರು ಬೃಹತ್ ರೋಡ್ ಶೋ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದ್ದರು. ಇನ್ನು ರೋಡ್ ಶೋನಲ್ಲಿ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಎಚ್ಸಿ ಮಹದೇವಪ್ಪ, ಡಾ ಜಿ. ಪರಮೇಶ್ವರ್, ಸತೀಶ್ ಜಾರಕಿಹೊಳಿ ಸೇರಿದಂತೆ ಇತರೆ ಘಟಾನುಘಟಿ ನಾಯಕರುಗಳು ಭಾಗಿಯಾಗಿದ್ದರು.
ಇದೀಗ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ನಾಮಪತ್ರದ ಬಗ್ಗೆ ಬಿಜೆಪಿ ಕೆಲ ಗಂಭೀರ ಆರೋಪಗಳನ್ನು ಮಾಡಿದೆ. ಅಲ್ಲದೇ ಅವರ ನಾಮಪತ್ರ ತಿರಸ್ಕೃತ ಮಾಡುವಂತೆ ಚುನಾವಣಾಧಿಕಾರಿಗೆ ದೂರು ನೀಡಿದೆ. ಈ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ನಾಮಪತ್ರ ಪರಿಶೀಲನೆ ಮಾಡಿ ಏನೆಲ್ಲಾ ತಪ್ಪು ಇದೆಯೋ ಅಥವಾ ಕ್ರಮಬದ್ಧವಾಗಿದೆಯೋ ಎನ್ನುವುದನ್ನು ಪರಿಶೀಲನೆ ಮಾಡಿ ಬಳಿಕ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದ ಇತ್ತ ಕಾಂಗ್ರೆಸ್ನಲ್ಲಿ ನಾಯಕರಲ್ಲಿ ಆತಂಕ ಶುರುವಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.