AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಕಾಂಗ್ರೆಸ್ ಯುವ ಮುಖಂಡನಿಗೆ ಚಾಕು ಇರಿತ, ಆಗಿದ್ದೇನು?

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ತೇರಂಬಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ಯುವ ಮುಖಂಡನಿಗೆ ವ್ಯಕ್ತಿಯೋರ್ವ ಚಾಕುವಿನಿಂದ ಇರಿದಿರುವಂತಹ ಘಟನೆ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದ್ದು, ಈ ವೇಳೆ ಚಾಕು ಇರಿಯಲಾಗಿದೆ. ಸದ್ಯ ಅಗರ ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ್ದಾರೆ.

ಚಾಮರಾಜನಗರ: ಕಾಂಗ್ರೆಸ್ ಯುವ ಮುಖಂಡನಿಗೆ ಚಾಕು ಇರಿತ, ಆಗಿದ್ದೇನು?
ಹಲ್ಲೆಗೊಳಗಾದ ಕಾಂಗ್ರೆಸ್​ ಮುಖಂಡ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Dec 03, 2025 | 3:17 PM

Share

ಚಾಮರಾಜನಗರ, ಡಿಸೆಂಬರ್​ 03: ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯೋರ್ವ ಕಾಂಗ್ರೆಸ್ (Congress) ಯುವ ಮುಖಂಡನಿಗೆ ಚಾಕುವಿನಿಂದ ಇರಿದಿರುವಂತಹ (stabbed) ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ತೇರಂಬಳ್ಳಿಯಲ್ಲಿ ನಡೆದಿದೆ. ತೇರಂಬಳ್ಳಿ ಗ್ರಾಮದ ರಾಜಣ್ಣ ಎಂಬ ವ್ಯಕ್ತಿಯಿಂದ ಕೈ ಮುಖಂಡ ಸುನೀಲ್​ಗೆ ಚಾಕು ಇರಿಯಲಾಗಿದೆ. ಅಗರ-ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದದ್ದೇನು?

ಕ್ಷುಲ್ಲಕ ವಿಚಾರಕ್ಕೆ ಗಲಾಟೆ ಉಂಟಾಗಿದೆ. ಈ ವೇಳೆ ರಾಜಣ್ಣ ಎಂಬುವವರು ಸುನೀಲ್​​ಗೆ ಚಾಕುವಿನಿಂದ ಇರಿದಿದ್ದಾರೆ. ಚಾಕುವಿನಿಂದ ಇರಿದ ಹಿನ್ನಲೆ ರಕ್ತಸ್ರಾವ ಉಂಟಾಗಿ ಸುನೀಲ್​​ ಅಸ್ವಸ್ಥರಾಗಿದ್ದಾರೆ. ಕೂಡಲೇ ಗಾಯಾಳು ಸುನೀಲ್​ನನ್ನು ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಯುವಕನ ಮೇಲೆ ತಲ್ವಾರ್​ನಿಂದ ಇರಿದು ಹಲ್ಲೆ

ಇತ್ತೀಚೆಗೆ ಗದಗ ನಗರದ ಮುಳಗುಂದ ನಾಕಾದಲ್ಲಿರುವ ದುರ್ಗಾ ಬಾರ್ ಎದುರು, ಯುವಕನ ಮೇಲೆ ಡೆಡ್ಲಿ ಅಟ್ಯಾಕ್ ನಡೆದಿತ್ತು. ಬಾರ್​ನಲ್ಲಿ ಕುಡಿಯೋದಕ್ಕೆ ಕೂತಿದ್ದ ಅರುಣ್ ಕುಮಾರ್ ಕೋಟೆಕಲ್ ಎಂಬ ಯುವಕನ ಮೇಲೆ, ದಾಸರ ಓಣಿಯ ಮುಸ್ತಾಕ್, ಸಾಹಿಲ್, ಅಭಿಷೇಕ್ ಅನ್ನೋ ಯುವಕರು ಹಲ್ಲೆ ಮಾಡಿದ್ದರು. ಹತ್ತಾರು ಜನರ ಎದುರೇ ತಲ್ವಾರ್, ಬಿಯರ್ ಬಾಟಲ್​ನಿಂದ ಮಾರಣಾಂತಿಕ ಹಲ್ಲೆ ಮಾಡಲಾಗಿತ್ತು.

ಇದನ್ನೂ ಓದಿ: ಮೂವರು ಮಕ್ಕಳ ತಾಯಿಯ ಡೆಡ್ಲಿ ಮರ್ಡರ್​​: ಪ್ರಾಣಕ್ಕೆ ಸಂಚು ತಂತಾ ಲವ್ವಿಡವ್ವಿ?

ಇನ್ನು ಘಟನೆಯಲ್ಲಿ ಅರುಣ್ ಕುಮಾರ್​​ನ ಕತ್ತು, ಮುಖ, ತಲೆ, ಹೊಟ್ಟೆ, ಎದೆ, ಕೈ ಸೇರಿ ದೇಹದ ಭಾಗಗಳಿಗೆ 25ಕ್ಕೂ ಹೆಚ್ಚು ಇರಿತದ ಗಾಯಗಳಾಗಿದ್ದವು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಡಿವೈಎಸ್​ಪಿ ಮುರ್ತುಜಾ ಖಾದ್ರಿ, ಶಹರ ಪೊಲೀಸ್ ಠಾಣೆ ಇನ್ಸಪೆಕ್ಟರ್ ಎಲ್ ಕೆ ಜೂಲಕಟ್ಟಿ ಆ್ಯಂಡ್ ಟೀಮ್ ಪರಿಶೀಲನೆ ಮಾಡಿದ್ದರು. ಜೊತೆಗೆ ಗಾಯಾಳುವನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಸದ್ಯ ಹಲ್ಲೆ ಮಾಡಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ತನಿಖೆ ನಡೆಸಿದ್ದಾರೆ.

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆ 

ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿ ಭೀಕರ ಕೊಲೆ ಮಾಡಿರುವಂತಹ ಘಟನೆ ಹೊಸೂರು ಸಮೀಪದ ಮಾರಸಂದಿರಂ ಗ್ರಾಮದಲ್ಲಿ ನಡೆದಿದೆ. ಹಳೆ ದ್ವೇಷ ಹಿನ್ನೆಲೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಬೈಕ್ ಅಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವುದಾಗಿ ಅನುಮಾನ ವ್ಯಕ್ತಪಡಿಸಲಾಗಿದೆ. ಕೊಲೆಯಾದ ವ್ಯಕ್ತಿಯ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು

ಚಿತ್ರದುರ್ಗ ತಾಲೂಕಿನ ಕಾಲ್ಗೆರೆ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಕಾಲ್ಗೆರೆ ಗ್ರಾಮದ ಯೊಗೀಶ್(31) ಮೃತ ವ್ಯಕ್ತಿ. ಅಡಿಕೆ ಕಟಾವು ವೇಳೆ ಆಕಸ್ಮಿಕ ವಿದ್ಯುತ್ ತಂತಿ ಸ್ಪರ್ಶಿಸಿ ಸಾವು ಸಂಭವಿಸಿದೆ. ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ