ಚಾಮರಾಜನಗರ: ಕೆರೆಯಲ್ಲಿ ಹುಲಿ ಮೃತದೇಹ ಪತ್ತೆ; ಸ್ಥಳಕ್ಕಾಗಮಿಸಿದ ಅರಣ್ಯಧಿಕಾರಿಗಳ ವಿರುದ್ದ ಜನರ ಆಕ್ರೋಶ

ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದ ಹೊರವಲಯದ ಮಲ್ಲಯ್ಯನಕಟ್ಟೆ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಹುಲಿ ಮೃತದೇಹ ಪತ್ತೆಯಾಗಿದ್ದು, ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದಾರೆ.

ಚಾಮರಾಜನಗರ: ಕೆರೆಯಲ್ಲಿ ಹುಲಿ ಮೃತದೇಹ ಪತ್ತೆ; ಸ್ಥಳಕ್ಕಾಗಮಿಸಿದ ಅರಣ್ಯಧಿಕಾರಿಗಳ ವಿರುದ್ದ ಜನರ ಆಕ್ರೋಶ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on:Feb 07, 2023 | 5:09 PM

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದ ಹೊರವಲಯದ ಮಲ್ಲಯ್ಯನಕಟ್ಟೆ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಹುಲಿ ಮೃತದೇಹ ಪತ್ತೆಯಾಗಿದೆ. ಕೆರೆಯಲ್ಲಿ ದನಗಳಿಗೆ ನೀರು ಕುಡಿಸಲು ಹೋಗಿದ್ದ ರೈತರೊಬ್ಬರಿಗೆ ಕಾಣಿಸಿದೆ. ಕೂಡಲೇ ಅರಣ್ಯಾಧಿಕಾರಿಗಳಿಗೆ ಕರೆ ಮಾಡಿದ್ದು ವಿಷಯ ತಿಳಿದು ಸ್ಥಳಕ್ಕಾಗಮಿಸಿದ್ದಾರೆ. ಈ ವೇಳೆ ರೈತರು ಅರಣ್ಯಧಿಕಾರಿಗಳನ್ನ ತರಾಟೆ ತೆಗೆದುಕೊಂಡಿದ್ದಾರೆ. ಚಿರತೆ, ಹುಲಿಗಳು ಜಾನುವಾರುಗಳ ಮೇಲೆ ದಾಳಿ ಮಾಡಿರುವ ಬಗ್ಗೆ ರೈತರು ಹಲವು ಬಾರಿ ದೂರು ನೀಡಿದ್ದರು. ಆದರೆ ರೈತರು ಎಷ್ಟೆ ಬಾರಿ ದೂರು ನೀಡಿದರು ಅಧಿಕಾರಿಗಳು ಸ್ಪಂದಿಸಿಲ್ಲ. ಇದೀಗ ಹುಲಿ ಸಾವನಪ್ಪಿದೆ ಎಂದಾಕ್ಷಣ ತಕ್ಷಣ ಸ್ಥಳಕ್ಕಾಗಮಿಸಿದ್ದೀರಾ. ಮನುಷ್ಯರು ಜಾನುವಾರುಗಳು ಸಾವನನಪ್ಪಿದ್ರೆ ಬೆಲೆ ಇಲ್ಲವಾ ಎಂದು ಗುಂಡ್ಲುಪೇಟೆ ಎಸಿಎಫ್ ರವೀಂದ್ರ, ಆರ್.ಎಫ್ ಓ ಶ್ರೀನಿವಾಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಹುಲಿಯನ್ನ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ನಂತರ ನಿಖರ ಕಾರಣ ತಿಳಿಯಬೇಕಿದೆ.

ತೋಟದಲ್ಲಿ ಹಾಕಿದ್ದ ತಂತಿ ಉರುಳಿಗೆ ಸಿಲುಕಿ ಹೆಣ್ಣು ಚಿರತೆ ಸಾವು

ಚಿಕ್ಕಮಗಳೂರು: ಮೂಡಿಗೆರೆ ನಗರ ಸಮೀಪದ ಬಿಳಗೋಳ ಗ್ರಾಮದ ಬಳಿ ಲಕ್ಷ್ಮಣಗೌಡ ಎಂಬುವವರಿಗೆ ಸೇರಿದ ಕಾಫಿ ತೋಟದಲ್ಲಿ ಹಾಕಿದ್ದ ತಂತಿ ಉರುಳಿಗೆ ಸಿಲುಕಿ ಹೆಣ್ಣು ಚಿರತೆಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ಸ್ಥಳಕ್ಕೆ ಮೂಡಿಗೆರೆ ತಾಲೂಕು ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂಡಿಗೆರೆ ತಾಲೂಕಿನ 10 ಗ್ರಾಮಗಳಲ್ಲಿ ಮೂರಕ್ಕೂ ಅಧಿಕ‌ ಚಿರತೆ ಸಂಚಾರ ಮಾಡುತ್ತಿರುವುದಾಗಿ ಗ್ರಾಮಸ್ಥರ ಆತಂಕ ವ್ಯಕ್ತಪಡಿಸಿದ್ದರು. ಅದರಲ್ಲಿ ಒಂದು ಚಿರತೆ‌ ಸಾವನ್ನಪ್ಪಿದ್ದು, ಕಾಫಿ ತೋಟದ ಮಾಲೀಕ ಲಕ್ಷ್ಮಣಗೌಡ ಮೇಲೆ FIR ದಾಖಲು ಮಾಡಲಾಗಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:08 pm, Tue, 7 February 23

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ