ಚಾಮರಾಜನಗರ: ತಾಲೂಕಿನ ಬಸಪ್ಪನಪಾಳ್ಯದಲ್ಲಿ ರಾತ್ರಿ 8.30ರಲ್ಲಿ ಕೆಲ ಸೆಕೆಂಡ್ ಭೂಮಿ ಕಂಪಿಸಿದ ಅನುಭವವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಶುರುವಾಗಿದೆ. ಜೊತೆಗೆ ಮನೆಗಳಲ್ಲಿದ್ದ ಪಾತ್ರೆ ಅಲುಗಾಡಿದ್ದು, ನಿಗೂಢ ಶಬ್ದ ಉಂಟಾಗಿದ್ದು, ಗಾಬರಿಗೊಂಡು ಮನೆಗಳಿಂದ ಗ್ರಾಮಸ್ಥರು ಓಡಿ ಹೊರ ಬಂದಿದ್ದಾರೆ.
ವಿಜಯಪುರ ಜಿಲ್ಲೆಯಲ್ಲಿ ಸರಣಿ ಭೂಕಂಪನ:
ವಿಜಯಪುರ: ಜಿಲ್ಲೆಯಲ್ಲಿ ಭೂಕಂಪನ (Earthquake) ಮುಂದುವರೆದಿದೆ. ರಾತ್ರಿ 8.51 ಸುಮಾರಿಗೆ ಮತ್ತು ಮಧ್ಯರಾತ್ರಿ 2.18ಕ್ಕೆ ಭೂಮಿ ಕಂಪಿಸಿದ್ದು, 3.9 ತೀವ್ರತೆ ರಿಕ್ಟರ್ ಮಾಪನದಲ್ಲಿ ದಾಖಲಾಗಿದೆ. ವಿಜಯಪುರ ತಾಲೂಕಿನ ಹೊನ್ನುಟಗಿ ಹಾಗೂ ಸುತ್ತಮುತ್ತಲೂ ಭೂಂಕಪನ ದೃಢವಾಗಿದ್ದು, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರದಿಂದ ಅಧಿಕೃತ ಮಾಹಿತಿ ನೀಡಲಾಗಿದೆ. ಮೇಲಿಂದ ಮೇಲೆ ಭೂಕಂಪನ ಉಂಟಾಗುತ್ತಿದ್ದು, ಈ ಕುರಿತು ಇಂದು ತಜ್ಞ ವಿಜ್ಞಾನಿಗಳು ಜಿಲ್ಲೆಗೆ ಆಗಮಿಸಿ ಪರೀಕ್ಷೆ ನಡೆಸಲಿದ್ದಾರೆ. ಜಿಲ್ಲೆಯ ವಿವಿಧ ಭಾಗಗಳಿಗೆ ತೆರಳಿ ಆಧ್ಯಯನ ಮಾಡಲಿದ್ದಾರೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.
ಸಾಯಂಕಾಲ ಹಾಗೂ ರಾತ್ರಿ ಭೂಮಿ ಕಂಪಸಿದ್ದು ರಿಕ್ಟರ್ ಮಾಪನದಲ್ಲಿ ದಾಖಲಾಗಿದೆ. ಇಷ್ಟರ ಬಳಿಕ ಆಗಷ್ಟ 26 ರ ನಸುಕಿನ ಜಾವ 2-21ಕ್ಕೆ ಕಂಪಿಸ ಭೂಮಿ ಕಂಪಿಸಿದ ಅನುಭವವಾಗಿದೆ. ವಿಜಯಪುರ ನಗರ ಬಸವನಬಾಗೇವಾಡಿ, ಸಿಂದಗಿ, ಇಂಡಿ, ನೆರೆಯ ಬಾಗಲಕೋಟೆಯ ಜಮಖಂಡಿ ಹಾಗೂ ನೆರೆಯ ಮಹಾರಾಷ್ಟ್ರದ ಸೊಲ್ಲಾಪುರದಲ್ಲೂ ಕಂಪನದ ಅನುಭವ ಉಂಟಾಗಿದೆ. ಇಷ್ಟೇ ಅಲ್ಲದೆ ಇಂದು ಮುಂಜಾನೆ 6.58ಕ್ಕೆ ಮತ್ತೇ ಭೂಕಂಪನದ ಅನುಭವವಾಗಿದೆ.
ರಾಜದ್ಯ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 9:37 pm, Tue, 13 September 22