ಚಾಮರಾಜನಗರ: ರೈತರಿಗೆ ತಲೆನೋವಾಗಿದ್ದ ಕಾಡಾನೆ ಸೆರೆ; ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ ಜಿ.ಎಸ್.ಬೆಟ್ಟ ವಲಯದ ಸುತ್ತಮುತ್ತ ಕಾಡಾನೆ ಉಪಟಳ ಹೆಚ್ಚಾಗಿದ್ದು, ಇದೀಗ ಕಾಡಾನೆಯನ್ನ ಸೆರೆ ಹಿಡಿಯಲಾಗಿದೆ.

ಚಾಮರಾಜನಗರ: ರೈತರಿಗೆ ತಲೆನೋವಾಗಿದ್ದ ಕಾಡಾನೆ ಸೆರೆ; ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
ಕಾಡಾನೆ ಸೆರೆ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Jan 11, 2023 | 8:48 AM

ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ ಜಿ.ಎಸ್.ಬೆಟ್ಟ ವಲಯದ ಸುತ್ತಮುತ್ತ ರೈತರಿಗೆ ತಲೆನೋವಾಗಿದ್ದ ಕಾಡಾನೆಯನ್ನ, ಸಾಕಾನೆಗಳಾದ ಅಭಿಮನ್ಯು, ಮಹೇಂದ್ರ, ಗಣೇಶ, ಭೀಮ ಸಹಾಯದಿಂದ ಅರವಳಿಕೆ ಚುಚ್ಚುಮದ್ದು ನೀಡಿ ಕಡೈಕೋಟೆ ಎಂಬಲ್ಲಿ ಸೆರೆ ಹಿಡಿಯಲಾಗಿದೆ. ಅನೇಕ ಬಾರಿ ಬೆಳೆ ಹಾನಿ ಮಾಡುತ್ತಿದ್ದ ಕಾಡಾನೆಯನ್ನ ಸೆರೆ ಹಿಡಿಯುವಂತೆ ಒತ್ತಾಯ ಮಾಡಲಾಗಿದ್ದು ಇದೀಗ ಆನೆಯನ್ನ ಸೆರೆ ಹಿಡಿದು ಐನೋರ್ ಮಾರಿಗುಡಿ ಸಾಕಾನೆಗಳ ಶಿಬಿರಕ್ಕೆ ರವಾನೆ ಮಾಡಲಾಗಿದೆ.

ಜಿಲ್ಲೆಯಲ್ಲಿ ಕಾಡಾನೆಗಳಿಂದ ಅನೇಕ ರೈತರು ಜೀವ ಕಳೆದುಕೊಂಡಿದ್ದರು, ಇತ್ತೀಚೆಗೆಷ್ಟೇ ಹೊಲದಲ್ಲಿರುವ ಸಮಯದಲ್ಲಿ ಅಂಧ ವ್ಯಕ್ತಿಯ ಮೇಲೆ ಕಾಡಾನೆಗಳು ದಾಳಿ ಮಾಡಿತ್ತು, ನಂತರ ಗುಂಡ್ಲುಪೇಟೆ ತಾಲೂಕಿನ ಬೆಟ್ಟ ಮಾದಹಳ್ಳಿ ಗ್ರಾಮದ ರೈತನ ಮೇಲೆ ಏಕಾಎಕಿ ಆನೆಗಳು ದಾಳಿ ಮಾಡಿ, ಬೈಕ್​ನ್ನು ಜಖಂ ಗೊಳಿಸಿದ್ದವು. ಇದೀಗ ಆನೆಯನ್ನ ಸೆರೆ ಹಿಡಿದು ರೈತರು ನಿಟ್ಟುಸಿರು ಬೀಡುವಂತಾಗಿದೆ.

ಜಿಲ್ಲೆಯಲ್ಲಿ ಮುಂದುವರಿದ ಕಾಡಾನೆಗಳ ದಾಳಿ; ಲಕ್ಷಾಂತರ ರೂಪಾಯಿ ಮೌಲ್ಯದ ರಾಗಿ ಬೆಳೆ ನಾಶ

ರಾಮನಗರ: ಕನಕಪುರ ತಾಲೂಕಿನ ಚಿಕ್ಕ ಮುಕ್ಕೋಡ್ಲು ಗ್ರಾಮದ ಮಹದೇವಮ್ಮ ಮತ್ತು ದೇವಿರಮ್ಮ ಎಂಬುವವರಿಗೆ ಸೇರಿದ ಲಕ್ಷಾಂತರ ರೂಪಾಯಿ ಮೌಲ್ಯದ ರಾಗಿ ಬೆಳೆಯನ್ನ ಕಾಡಾನೆಗಳು ನಾಶ ಮಾಡಿದ್ದಾವೆ ಇದರಿಂದ ಕಾಡಾನೆ ಹಾವಳಿ ತಡೆಗಟ್ಟದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಬಹಳ ಸಮಯದಿಂದ ಹಾಸನದ ಹಲವು ಗ್ರಾಮಗಳಲ್ಲಿ ಪುಂಡಾಟ ಮೆರೆಯುತ್ತಿದ್ದ ಮದಿಸಿದ ಆನೆ ಸೆರೆಹಿಡಿದ ಅರಣ್ಯ ಇಲಾಖೆ ಸಿಬ್ಬಂದಿ

ಕಾರವಾರದ ಕೈಗಾ ಮೊದಲನೇ ಗೆಟ್ ಬಳಿ ಕಾಣಿಸಿಕೊಂಡ ಹುಲಿ

ಉತ್ತರ ಕನ್ನಡ: ನಿನ್ನೆ(ಜ.10) ರಂದು ರಾತ್ರಿ ಕಾಶಿನಾಥ ಖಾಡೆ ಎಂಬುವವರು ಕಾರವಾರದಿಂದ ಕೈಗಾ ಮಾರ್ಗವಾಗಿ ಹೊರಟಿದ್ದಾಗ ಹುಲಿ ಕಾಣಿಸಿಕೊಂಡಿದೆ. ಒಂದು ಬದಿಯಿಂದ ಮತ್ತೊಂದು ಬದಿಗೆ ದಾಟಿರುವ ಹುಲಿಯನ್ನ ನೋಡಿ ಆತಂಕಗೊಂಡ ವಾಹನ ಸವಾರರು ಹುಲಿಯ ಸಂಚಾರವನ್ನ ಮೊಬೈಲ್‌ನಲ್ಲಿ ಸೇರೆ ಹಿಡಿದಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ