ಅರಣ್ಯ ಇಲಾಖೆಯಿಂದ ಗುಡ್​​ ನ್ಯೂಸ್​​: ಚಾಮರಾಜನಗರ ಕಾಡಂಚಿನ ಜನರಿಗಾಗಿ ಆಂಬ್ಯುಲೆನ್ಸ್ ಸೌಲಭ್ಯ ಆರಂಭ

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿರುವ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಗ್ರಾಮಗಳಲ್ಲಿ ವಾಸಿಸುವ ಜನರಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಆಂಬ್ಯುಲೆನ್ಸ್ ಸೌಲಭ್ಯ ಒದಗಿಸುವ ಮೂಲಕ ಗುಡ್ ನ್ಯೂಸ್ ಕೊಟ್ಟಿದ್ದಾರೆ.

ಅರಣ್ಯ ಇಲಾಖೆಯಿಂದ ಗುಡ್​​ ನ್ಯೂಸ್​​: ಚಾಮರಾಜನಗರ ಕಾಡಂಚಿನ ಜನರಿಗಾಗಿ ಆಂಬ್ಯುಲೆನ್ಸ್ ಸೌಲಭ್ಯ ಆರಂಭ
ಆಂಬ್ಯುಲೆನ್ಸ್​
Follow us
ಸೂರಜ್ ಪ್ರಸಾದ್ ಎಸ್.ಎನ್
| Updated By: ವಿವೇಕ ಬಿರಾದಾರ

Updated on: Jan 14, 2024 | 8:31 AM

ಚಾಮರಾಜನಗರ, ಜನರವರಿ 14: ಅದು ದೇಶದ ಪ್ರಸಿದ್ದ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ (Tiger reserve forest). ಈ ಅರಣ್ಯ ವ್ಯಾಪ್ತಿಯಲ್ಲಿ ಸಾಕಷ್ಟು ಕಾಡಂಚಿನ ಗ್ರಾಮಗಳಿವೆ. ಈ ಗ್ರಾಮಗಳಲ್ಲಿ ಅನಾರೋಗ್ಯಕ್ಕೆ ತುತ್ತಾದರೇ ಜನರ ಪಾಡು ಮಾತ್ರ ಹೇಳತೀರದಾಗಿತ್ತು. ಇದೀಗ ಈ ಕಾಡಂಚಿನ ಗ್ರಾಮಗಳಲ್ಲಿ ವಾಸಿಸುವ ಜನರಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಆಂಬ್ಯುಲೆನ್ಸ್ (Ambulance) ಸೌಲಭ್ಯ ಒದಗಿಸುವ ಮೂಲಕ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ ಓದಿ.

ಹೌದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿರುವ ಬಂಡೀಪುರ ದೇಶದ ಪ್ರತಿಷ್ಠಿತ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ. ಬಂಡೀಪುರ ಹುಲಿಸಂರಕ್ಷಿತ ಪ್ರದೇಶವಾಗಿ 50 ವರ್ಷ ಕಳೆದಿದೆ. ಈ ಹಿನ್ನೆಲೆಯಲ್ಲಿ ಕಾಡು ಹಾಗೂ ಕಾಡಂಚಿನ ಜನರ ರಕ್ಷಣೆಗಾಗಿ ಹಾಗೂ ಅವರಿಗೆ ಆರೋಗ್ಯ ಸೌಲಭ್ಯ ಒದಗಿಸಲು ಅರಣ್ಯ ಇಲಾಖೆ ಅನೇಕ ಯೋಜನೆ ರೂಪಿಸಿದೆ. ಬಂಡೀಪುರದ ಕಾಡಂಚಿನ ಗ್ರಾಮಗಳಾದ ಮಂಗಲ, ಎಕೆಚೆಟ್ಟಿ, ಜಕ್ಕಳ್ಳಿ, ಮದ್ದೂರು ಕಾಲೋನಿ ಸೇರಿದಂತೆ 20 ಕ್ಕೂ ಹೆಚ್ಚು ಗ್ರಾಮಗಳು ಬಂಡೀಪುರದ ಕಾಡಂಚಿಗೆ ಹೊಂದಿಕೊಂಡಿವೆ. ಈ ಗ್ರಾಮದ ಜನರು ಅನಾರೋಗ್ಯಕ್ಕೆ ತುತ್ತಾದರೇ ವಾಹನ ಸೌಲಭ್ಯವಿಲ್ಲದೇ ಆಸ್ಪತ್ರೆಗೆ ತೆರಳಲು ಪರದಾಡುತ್ತಿದ್ದರು. ಬಹಳ ವರ್ಷಗಳಿಂದಲೂ ಕೂಡ ಕಾಡಂಚಿನ ಜನರ ನೆರವಿಗೆ ಧಾವಿಸುವಂತೆ ಅಧಿಕಾರಿಗಳಿಗೆ ಮನವಿ ಮಾಡಿಕೊಂಡು ಬಂದರು ಪ್ರಯೋಜನವಾಗಿರಲಿಲ್ಲ. ಇದೀಗಾ ಕಾಡಂಚಿನ ಜನರಿಗೆ ತುರ್ತು ಆರೋಗ್ಯ ಸೇವೆಗಾಗಿ ಬಂಡೀಪುರದ ಅರಣ್ಯಾಧಿಕಾರಿಗಳು ಎರಡು ಆಂಬ್ಯುಲೆನ್ಸ್ ಸೇವೆ ಆರಂಭಿಸಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರು: ಅರಣ್ಯ ಸೂಕ್ಷ್ಮ ಪ್ರದೇಶಕ್ಕೂ ಕಾಲಿಟ್ಟ ರಿಯಲ್​ ಎಸ್ಟೇಟ್ ದಂಧೆಕೋರರು!

ಇನ್ನೂ ಕಾಡಂಚಿನ ಜನರ ಬಗ್ಗೆ ಬಂಡೀಪುರದ ಹುಲಿ ಯೋಜನೆ ನಿರ್ದೇಶಕ ರಮೇಶ್ ಕುಮಾರ್ ವಿಶೇಷ ಕಾಳಜಿ ವಹಿಸಿದ್ದು, ಗರ್ಭಿಣಿಯರು ಮತ್ತು ಅನಾರೋಗ್ಯಕ್ಕೆ ತುತ್ತಾದವರಿಗೆ ಸೂಕ್ತ ವೈದ್ಯಕೀಯ ಸೌಲಭ್ಯ ಒದಗಿಸುವುದು ಅರಣ್ಯ ಇಲಾಖೆ ಕರ್ತವ್ಯವೆಂದು ಪರಿಭಾವಿಸಿ, ಖಾಸಗಿಯವರ ಸಹಾಯ ಪಡೆದು ಎರಡು ಅಂಬ್ಯುಲೆನ್ಸ್ ಸೇವೆ ಆರಂಭಿಸಿದ್ದೇವೆ. ಬಂಡೀಪುರದ ಸ್ವಾಗತ ಕೇಂದ್ರದಲ್ಲಿಯೇ ಎರಡು ಅಂಬ್ಯುಲೆನ್ಸ್ ಇರಲಿದ್ದು, ಟೋಲ್ ಫ್ರೀ ನಂಬರಿಗೆ ಕರೆ ಮಾಡಿದ ತಕ್ಷಣ ಸಿಬ್ಬಂದಿ ಅನಾರೋಗ್ಯ ಪೀಡಿತರ ನೆರವಿಗೆ ಧಾವಿಸುತ್ತಾರೆ. ರಾತ್ರಿ 9 ರಿಂದ ಬೆಳಗ್ಗೆ 6 ರವರೆಗೂ ಪ್ರತಿದಿನ ಕೇರಳ ಹಾಗೂ ತಮಿಳುನಾಡಿಗೆ ಹೋಗುವ ರಸ್ತೆ ಬಂದ್ ಮಾಡಲಿದ್ದು ಈ ವೇಳೆಯಂತೂ ಜನರಿಗೆ ತೊಂದರೆಯಾಗುತ್ತಿದೆ. ಇದೀಗ ಅರಣ್ಯದ ಒಳಭಾಗದಲ್ಲಿರುವ ಕಾಡಂಚಿನ ಜನರು ತುರ್ತು ಸಂದರ್ಭದಲ್ಲಿ ಅಂಬ್ಯುಲೆನ್ಸ್ ಸೇವೆ ಪಡೆಯಬಹುದಾಗಿದೆ.

ಒಟ್ಟಿನಲ್ಲಿ ಇಷ್ಟು ವರ್ಷಗಳ ಕಾಲ ಅನಾರೋಗ್ಯಕ್ಕೆ ತುತ್ತಾದವರು 108 ಅಂಬ್ಯುಲೆನ್ಸ್ ಬರುವವರೆಗೂ ಕಾಯಬೇಕಿತ್ತು. ಇಲ್ಲವೇ ಕಾರಿನ ವ್ಯವಸ್ಥೆ ಮಾಡಿಕೊಂಡು ಆಸ್ಪತ್ರೆಗಳತ್ತ ಮುಖ ಮಾಡಬೇಕಿತ್ತು. ಇದೀಗ ಜನರ ಆರೋಗ್ಯ ಸೇವೆಗಾಗಿ ಅಂಬ್ಯುಲೆನ್ಸ್ ಕೊಟ್ಟಿರುವುದರಿಂದ ಬಂಡೀಪುರದ ಅರಣ್ಯಾಧಿಕಾರಿಗಳ ನಡೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್