ಚಾಮರಾಜನಗರ: ಎನ್‌ಕೌಂಟರ್ ಪ್ರತಿಕಾರಕ್ಕೆ ಅರಣ್ಯವೇ ಬಲಿ: ಮಲೆ ಮಹದೇಶ್ವರ ಬೆಟ್ಟದ 10 ಎಕರೆ ಕಾಡಿಗೆ ಬೆಂಕಿ

ಚಾಮರಾಜನಗರದ ಕೊಳ್ಳೇಗಾಲ ಅರಣ್ಯದಲ್ಲಿ ದುಷ್ಕರ್ಮಿಗಳಿಂದ ಸರಣಿ ಕೃತ್ಯಗಳು ಹೆಚ್ಚಾಗಿವೆ. ಮೂವರ ಎನ್‌ಕೌಂಟರ್ ನಂತರ ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ 10 ಎಕರೆ ಅರಣ್ಯಕ್ಕೆ ಬೆಂಕಿ ಹಚ್ಚಲಾಗಿದೆ. ಕಾವೇರಿ ವನ್ಯಜೀವಿಧಾಮದ ಕಳ್ಳಬೇಟೆ ತಡೆ ಕ್ಯಾಂಪ್‌ಗಳನ್ನು ಜಿಲೆಟಿನ್ ಬಳಸಿ ಸ್ಫೋಟಿಸಲಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿಗೆ ಪ್ರಾಣಭಯ ಎದುರಾಗಿದ್ದು, ದುಷ್ಕರ್ಮಿಗಳ ಪತ್ತೆಗೆ ತನಿಖೆ ತೀವ್ರಗೊಂಡಿದೆ.

ಚಾಮರಾಜನಗರ: ಎನ್‌ಕೌಂಟರ್ ಪ್ರತಿಕಾರಕ್ಕೆ ಅರಣ್ಯವೇ ಬಲಿ: ಮಲೆ ಮಹದೇಶ್ವರ ಬೆಟ್ಟದ 10 ಎಕರೆ ಕಾಡಿಗೆ ಬೆಂಕಿ
ವನ್ಯಜೀವಿಧಾಮ ದಾಳಿ
Edited By:

Updated on: Aug 20, 2026 | 10:45 AM

ಚಾಮರಾಜನಗರ, ಆ.20: ಇತ್ತೀಚೆಗೆ ನಡೆದ ಮೂವರ ಎನ್‌ಕೌಂಟರ್ ಘಟನೆಯ ಬೆನ್ನಲ್ಲೇ, ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಶಿಲುಬೆಪುರ ಅರಣ್ಯ ವ್ಯಾಪ್ತಿಯಲ್ಲಿ ಕಿಡಿಗೇಡಿಗಳು ಅರಣ್ಯ ಇಲಾಖೆಯನ್ನು ಗುರಿಯಾಗಿಸಿಕೊಂಡು ಸರಣಿ ಕೃತ್ಯಗಳನ್ನು ಎಸಗುತ್ತಿರುವುದು ಭಾರಿ ಆತಂಕ ಸೃಷ್ಟಿಸಿದೆ. ಕಾವೇರಿ ಹಾಗೂ ಮಲೆ ಮಹದೇಶ್ವರ ವನ್ಯಜೀವಿಧಾಮಗಳಲ್ಲಿ ಅರಣ್ಯ ಸಿಬ್ಬಂದಿಯನ್ನು ಟಾರ್ಗೆಟ್ ಮಾಡುತ್ತಿರುವ ದುಷ್ಕರ್ಮಿಗಳು, ಇದೀಗ ಮಲೆ ಮಹದೇಶ್ವರ ವನ್ಯಜೀವಿಧಾಮದ ಸುಮಾರು 10 ಎಕರೆ (2.5 ಹೆಕ್ಟೇರ್) ಅರಣ್ಯ ಪ್ರದೇಶಕ್ಕೆ ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದಾರೆ.

ಕೊಳ್ಳೇಗಾಲ ತಾಲೂಕಿನ ಶಿಲುಬೆಪುರ ಅರಣ್ಯ ವ್ಯಾಪ್ತಿಯಲ್ಲಿ ಕಿಡಿಗೇಡಿಗಳು ಹಚ್ಚಿದ ಬೆಂಕಿಯ ಕೆನ್ನಾಲಿಗೆಗೆ ಬರೋಬ್ಬರಿ 10 ಎಕರೆ ಅರಣ್ಯ ಪ್ರದೇಶ ಸಂಪೂರ್ಣವಾಗಿ ಭಸ್ಮವಾಗಿದೆ. ಅರಣ್ಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ಹರಸಾಹಸ ಪಟ್ಟು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೆಲವೇ ದಿನಗಳ ಹಿಂದೆ ಕಾವೇರಿ ವನ್ಯಜೀವಿಧಾಮದ ಕಳ್ಳಬೇಟೆ ತಡೆ ಶಿಬಿರಗಳನ್ನು ಗುರಿಯಾಗಿಸಿಕೊಂಡಿದ್ದ ದುಷ್ಕರ್ಮಿಗಳು, ಜಿಲೆಟಿನ್ ಕಡ್ಡಿಗಳನ್ನು ಬಳಸಿ ನಾಲ್ಕು ಎಪಿಸಿ ಕ್ಯಾಂಪ್‌ಗಳನ್ನು ಸ್ಫೋಟಿಸಿ ಪುಡಿಪುಡಿ ಮಾಡಿದ್ದರು.

ಇದನ್ನೂ ಓದಿ: ಚಾಮರಾಜನಗರ ಶೂಟೌಟ್ ಪ್ರಕರಣದಲ್ಲಿ ಮಾನವ ಹಕ್ಕುಗಳ ಆಯೋಗ ಎಂಟ್ರಿ, ಹೊರಬರುತ್ತಾ ಅಸಲಿ ಸತ್ಯ?

ಇಲ್ಲಿದೆ ನೋಡಿ ಸ್ಟೋರಿ:

Chamarajanagara Shootout Case: ಹನೂರು ಎನ್ ಕೌಂಟರ್ ಪ್ರಕರಣ 10 ಎಕರೆಯಷ್ಟು ಕಾಡಿಗೆ ದುಷ್ಕರ್ಮಿಗಳಿಂದ ಬೆಂಕಿ

ಮೂವರು ಬೇಟೆಗಾರರ ಎನ್‌ಕೌಂಟರ್ ನಂತರ ಕಾಡಿನಲ್ಲಿ ದುಷ್ಕರ್ಮಿಗಳ ಹಾವಳಿ ಹೆಚ್ಚಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಪ್ರತಿದಿನ ಪ್ರಾಣಭಯದಲ್ಲೇ ಕರ್ತವ್ಯಕ್ಕೆ ಹಾಜರಾಗುವ ಸ್ಥಿತಿ ನಿರ್ಮಾಣವಾಗಿದೆ. ಮಲೆ ಮಹದೇಶ್ವರ ವನ್ಯಜೀವಿಧಾಮದ ಎಸಿಎಫ್ ವಿಜಯ್ ಹೊಸೂರು ಅವರು ಟಿವಿ9ಗೆ ನೀಡಿದ ಮಾಹಿತಿಯ ಪ್ರಕಾರ, ಘಟನೆಗೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಲಾಗಿದ್ದು, ಅರಣ್ಯಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳ ಪತ್ತೆಗೆ ಬಲೆ ಬೀಸಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:09 am, Thu, 20 August 26

ಸೂರಜ್ ಪ್ರಸಾದ್ ಎಸ್.ಎನ್

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Loading...
Unable to load recommendations.
Follow Us