ಚಾಮರಾಜನಗರದಲ್ಲಿ ಗಡಿನಾಡು ಕನ್ನಡ ಉತ್ಸವ: ಗಮನ ಸೆಳೆದ ಜಾನಪದ ಕಲಾ ತಂಡಗಳ ಪ್ರದರ್ಶನ
ಮಲೆ ಮಹದೇಶ್ವರ ಬೆಟ್ಟದ ಶ್ರೀ ಮಹದೇಶ್ವರ ಬಯಲು ರಂಗಮಂದಿರದಲ್ಲಿ ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೆಂಗಳೂರು ಹಾಗೂ ಜಿಲ್ಲಾ ಶಾಖೆ, ಕನ್ನಡ ಮತ್ತು ಸಂಸ್ಕಂತಿ ಇಲಾಖೆ, ಕನ್ನಡ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ‘ಗಡಿನಾಡು ಕನ್ನಡ ಉತ್ಸವ’ ಬಹಳ ಅದ್ದೂರಿಯಾಗಿ ನಡೆಸಲಾಯಿತು. ಜನಪದ ಕಲಾ ಪ್ರಕಾರ ಮೆರವಣಿಗೆ ಹಾಗೂ ಸಾಂಸ್ಕೃತಿಕ ನಡಿಗೆ ಕಾರ್ಯಕ್ರಮಗಳು ನೋಡುಗರ ಕಣ್ಮನ ಸೆಳೆದವು.
ಚಾಮರಾಜನಗರ, ಫೆಬ್ರವರಿ 11: ಜಾನಪದ ಕಲೆಗಳ ತವರೂರು ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಗಡಿ ನಾಡು ಕನ್ನಡ ಉತ್ಸವ (Kannada Utsav) ಕಾರ್ಯಕ್ರಮವನ್ನು ಬಹಳ ಅದ್ದೂರಿಯಾಗಿ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಿಂದ ಬಹಳ ಅದ್ದೂರಿಯಾಗಿ ನಡೆಸಲಾಯಿತು. ಗಡಿ ಜಿಲ್ಲೆ ಚಾಮರಾಜನಗರದ ಪವಿತ್ರ ಕ್ಷೇತ್ರವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಅದ್ದೂರಿಯಾಗಿ ಗಡಿ ನಾಡ ಕನ್ನಡ ಉತ್ಸವ ನಡೆಯಿತು. ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಹಲವು ಕಾರ್ಯಕ್ರಮಗಳನ್ನು ರೂಪಿಸಲಾಗಿತ್ತು. ಕನ್ನಡ ಜಾಗೃತಿ ಜಾಥಾ, ಜಿಲ್ಲಾ ಮಟ್ಟದ ಕವಿಗೋಷ್ಠಿ, ಗಡಿನಾಡಿನ ಬಗ್ಗೆ ಉಪನ್ಯಾಸಗಳು ಹಾಗೂ ಜನಪದ ಕಲಾ ಪ್ರಕಾರ ಮೆರವಣಿಗೆ ಹಾಗೂ ಸಾಂಸ್ಕೃತಿಕ ನಡಿಗೆ ಕಾರ್ಯಕ್ರಮಗಳ ನೋಡುಗರ ಕಣ್ಮನ ಸೆಳೆದವು.
ಮಲೆ ಮಹದೇಶ್ವರ ಬೆಟ್ಟದ ಶ್ರೀ ಮಹದೇಶ್ವರ ಬಯಲು ರಂಗಮಂದಿರದಲ್ಲಿ ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೆಂಗಳೂರು ಹಾಗೂ ಜಿಲ್ಲಾ ಶಾಖೆ, ಕನ್ನಡ ಮತ್ತು ಸಂಸ್ಕಂತಿ ಇಲಾಖೆ, ಕನ್ನಡ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆದ ‘ಗಡಿನಾಡು ಕನ್ನಡ ಉತ್ಸವ’ ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇದನ್ನೂ ಓದಿ: ಮುಜರಾಯಿ ಇಲಾಖೆ ಹಾಗೂ ಟ್ರಸ್ಟಿಗಳ ನಡುವಿನ ಮುಸುಕಿನ ಗುದ್ದಾಟ; ಶ್ರೀ ಉರುಕಾತೇಶ್ವರಿ ಅಮ್ಮನವರ ದೇವಸ್ಥಾನಕ್ಕೆ ಬೀಗ
ಕನ್ನಡ ನಾಡು-ನುಡಿಗೆ ಸದಾ ಪ್ರೋತ್ಸಾಹ ನೀಡಲಾಗುತ್ತಿದೆ. ಗಡಿಯಲ್ಲಿ ಕನ್ನಡ ಬೆಳಸುವ ಕಾರ್ಯಗಳಿಗೆ ಗಡಿನಾಡು ಕನ್ನಡ ಉತ್ಸವದಂತಹ ಕಾರ್ಯಕ್ರಮಗಳು ಪೂರಕವಾಗಿವೆ. ನಮ್ಮ ಜಿಲ್ಲೆಯ ಮಲೆ ಮಹದೇಶ್ವರನ ಸನ್ನಿಧಿಯಲ್ಲಿ ಇಂತಹ ಕಾರ್ಯಕ್ರಮ ಆಯೋಜನೆಯಾಗಿರುವುದು ಸಂತೋಷ ತಂದಿದೆ ಎಂದರು.
ಇದನ್ನೂ ಓದಿ: ಚಾಮರಾಜನಗರ ರಸ್ತೆ ಕಾಮಗಾರಿ ಆರಂಭವಾಗಿ 5 ವರ್ಷವೇ ಕಳೆದರೂ ಇನ್ನೂ ಕಂಪ್ಲೀಟ್ ಆಗಿಲ್ಲ, ವಾಹನ ಸವಾರರಿಗೆ ತ್ರಿಶಂಕು
ರಾಜ್ಯ ಸರ್ಕಾರಿ ನೌಕರರ ಸಂಘವು ಕನ್ನಡ ಉತ್ಸವದಂತಹ ಕಾರ್ಯಗಳಿಗೆ ನೆರವಾಗುತ್ತಿರುವುದು ಶ್ಲಾಘನೀಯವಾಗಿದೆ. ಜಿಲ್ಲೆಯ ಕಾಡಂಚಿನ ಪ್ರದೇಶದ ಇಂಡಿಗನತ್ತ ಶಾಲೆಯನ್ನು ದತ್ತು ಪಡೆದು ಹಲವು ಸಹಾಯಕ ಕೆಲಸಗಳನ್ನು ಮಾಡಿರುವುದು ಮಾದರಿಯಾಗಿದೆ. ಇಂತಹ ಸಮಾಜಮುಖಿ ಕೆಲಸಗಳಿಂದ ಒಳ್ಳೆಯದಾಗಲಿದೆ ಎಂದು ಸಚಿವರು ತಿಳಿಸಿದರು.
ಗಡಿನಾಡು ಕನ್ನಡ ಉತ್ಸವ ಕಾರ್ಯಕ್ರಮಗಳನು ಆಯೋಜಿಸುವ ಜೊತೆಗೆ ಶಾಲಾಭಿವೃದ್ದಿಗೆ ವಿಶೇಷ ಕಾಳಜಿ ವಹಿಸಿದ್ದು ಮೆಚ್ಚುಗೆ ಕೆಲಸವೇ ಸರಿ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.