AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಕೆಜಿಗಟ್ಟಲೆ ಚಿನ್ನ ದೋಚಿದ ನಟೋರಿಯಸ್ ಕೇರಳ ಗ್ಯಾಂಗ್ ಅಂದರ್!

ಚಾಮರಾಜನಗರದಲ್ಲಿ ಸಿನಿಮೀಯ ಶೈಲಿಯಲ್ಲಿ ನಡೆದ 1.3 ಕೆಜಿ ಚಿನ್ನ ದರೋಡೆ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಡೀಪುರ ಸಮೀಪ ಚಿನ್ನದ ವ್ಯಾಪಾರಿ ವಿನು ಅವರ ಕಾರನ್ನು ಅಡ್ಡಗಟ್ಟಿ ಕೇರಳ ಮೂಲದ ಗ್ಯಾಂಗ್ ಈ ಕೃತ್ಯ ಎಸಗಿತ್ತು. ಸಿಸಿಟಿವಿ ಆಧರಿಸಿ ತನಿಖೆ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿದ್ದು, ಪ್ರಮುಖ ಆರೋಪಿಗಾಗಿ ಬಲೆ ಬೀಸಿದ್ದಾರೆ.

ಚಾಮರಾಜನಗರ: ಕೆಜಿಗಟ್ಟಲೆ ಚಿನ್ನ ದೋಚಿದ ನಟೋರಿಯಸ್ ಕೇರಳ ಗ್ಯಾಂಗ್ ಅಂದರ್!
Chamarajanagar Gold Robbery
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Dec 17, 2025 | 11:09 AM

Share

ಚಾಮರಾಜನಗರ, ಡಿಸೆಂಬರ್ 17: ಚಿನ್ನದ ವ್ಯಾಪಾರಿಯನ್ನು ಸಿನಿಮೀಯ ಶೈಲಿಯಲ್ಲಿ ಅಡ್ಡಗಟ್ಟಿ ಸುಮಾರು ಒಂದು ಕಾಲು ಕೆಜಿ ಚಿನ್ನ ದೋಚಿದ ಪ್ರಕರಣ ಚಾಮರಾಜನಗರದಲ್ಲಿ (Chamarajanagara) ನಡೆದಿತ್ತು. ಈ ವೇಳೆ ಕೇರಳದ ನಟೋರಿಯ್ ಗ್ಯಾಂಗ್ ಈ ಕೃತ್ಯವೆಸಗಿರಬಹುದೆಂಬ ಶಂಕೆ ಪೊಲೀಸರಲ್ಲಿ ಮೂಡಿತ್ತು. ಶಂಕಿತರಿಗಾಗಿ ಹುಡುಕುತ್ತಿದ್ದ ಪೊಲೀಸರ ಕೈಗೆ ಮೂವರು ಸಿಕ್ಕಿಬಿದ್ದಿದ್ದು, ತನಿಖೆ ಮುಂದುವರೆದಿದೆ.

ಪ್ರಮುಖ ಆರೋಪಿಗಾಗಿ ಬಲೆ

ನವೆಂಬರ್ 20ರಂದು ಬಂಡೀಪುರದಲ್ಲಿ ಆಭರಣ ತಯಾರಕ ವಿನು ಅವರ ಕಾರನ್ನು ಅಡ್ಡಗಟ್ಟಿ, 1.3 ಕೆಜಿಗೂ ಹೆಚ್ಚು ಚಿನ್ನ ದರೋಡೆ ಮಾಡಲಾಗಿತ್ತು. ಮೊಬೈಲ್ ನೆಟ್‌ವರ್ಕ್ ಇಲ್ಲದ ಪ್ರದೇಶದಲ್ಲಿ ಕಾರನ್ನು ತಡೆದ ಆರೋಪಿಗಳು ಚಿನ್ನದೊಂದಿಗೆ ಪರಾರಿಯಾಗಿದ್ದರು. ಘಟನೆ ಬಳಿಕ ಟೋಲ್ ಪ್ಲಾಸಾ ಹಾಗೂ ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಆಧರಿಸಿ ಪೊಲೀಸರು ತನಿಖೆ ನಡೆಸಿದ್ದು, ಚಿನ್ನದ ವ್ಯಾಪಾರಿಗಳನ್ನೇ ಟಾರ್ಗೆಟ್ ಮಾಡಿಕೊಂಡು ದರೋಡೆ ನಡೆಸುತ್ತಿದ್ದ ಕೇರಳ ಗ್ಯಾಂಗ್ ಈ ಕೃತ್ಯವೆಸಗಿದ್ದು ತಿಳಿದುಬಂದಿದೆ. ಮೂವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಪ್ರಕರಣದ ಪ್ರಮುಖ ಆರೋಪಿಗಾಗಿ ಬಲೆ ಬೀಸಿದ್ದಾರೆ.

ಇದನ್ನೂ ಓದಿ ಚಾಮರಾಜನಗರದಲ್ಲಿ ಮತ್ತೆ ಆಕ್ಟೀವ್ ಆಯ್ತಾ ನಟೋರಿಯಸ್ ಕೇರಳಿಯನ್ ಗ್ಯಾಂಗ್?; ಕೆಜಿಗಟ್ಟಲೆ ಚಿನ್ನ ದರೋಡೆ

ನಡೆದಿದ್ದೇನು?

ಕಾರು ಚಾಲಕ ಸಮೀರ್ ಹಾಗೂ ವಿನು, ಮಂಡ್ಯದ ರಾಜೇಶ್ ಜ್ಯುವೆಲರ್ಸ್ ಎಂಬಾತನಿಂದ ಆಭರಣ ತಯಾರಿಕೆಗಾಗಿ 800 ಗ್ರಾಂ 24 ಕ್ಯಾರೆಟ್ ಚಿನ್ನದ ಗಟ್ಟಿ ಹಾಗೂ 518 ಗ್ರಾಂ 22 ಕ್ಯಾರೆಟ್ ಚಿನ್ನವನ್ನು ಖರೀದಿಸಿ ಬಂಡೀಪುರದ ಮೂಲೆಹೊಳೆ ಮೂಲಕ ತೆರಳುತ್ತಿದ್ದರು. ಇದೇ ಸಮಯದಲ್ಲಿ ಎರಡು ಇನ್ನೋವಾ ಹಾಗೂ ಒಂದು ಇಟಿಯೋಸ್ ವಾಹನದಲ್ಲಿ ಮದ್ದೂರು ಚೆಕ್‌ಪೋಸ್ಟ್ ಬಳಿ ಕಾರು ಚೇಸ್ ಮಾಡಿಕೊಂಡು ಬಂದ ದರೋಡೆಕೋರರು, ನೆಟ್‌ವರ್ಕ್ ಸಿಗದ ಕಾಡಿನ ಮಧ್ಯೆ ಕಾರಿಗೆ ಡಿಕ್ಕಿ ಹೊಡೆದಿದ್ದರು. ಬಳಿಕ ಕಬ್ಬಿಣದ ರಾಡ್‌ನಿಂದ ವಿನು ಮೇಲೆ ಹಲ್ಲೆ ನಡೆಸಿ, ಅವರ ಬಳಿ ಇದ್ದ ಸುಮಾರು 1,400 ಗ್ರಾಂ ಚಿನ್ನದ ಗಟ್ಟಿಯನ್ನು ದೋಚಿಕೊಂಡು ಪರಾರಿಯಾಗಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ