AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ ಸರ್ಕಾರಿ ಇಂಜಿನಿಯರಿಂಗ್, ಪಾಲಿಟೆಕ್ನಿಕ್ ಕಾಲೇಜ್​ಗಿಲ್ಲ ಕರೆಂಟ್: ಬಿಲ್ ಬಾಕಿ ಹಿನ್ನೆಲೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಚೆಸ್ಕಾಂ

ಬಿಲ್ ಬಾಕಿ ಹಿನ್ನೆಲೆ ಚಾಮರಾಜನಗರದ ಸರ್ಕಾರಿ ಇಂಜಿನಿಯರಿಂಗ್, ಪಾಲಿಟೆಕ್ನಿಕ್ ಕಾಲೇಜ್​​ ವಿದ್ಯುತ್ ಸಂಪರ್ಕವನ್ನು ಚೆಸ್ಕಾಂ ಕಡಿತಗೊಳಿಸಿದೆ.

ಚಾಮರಾಜನಗರ ಸರ್ಕಾರಿ ಇಂಜಿನಿಯರಿಂಗ್, ಪಾಲಿಟೆಕ್ನಿಕ್ ಕಾಲೇಜ್​ಗಿಲ್ಲ ಕರೆಂಟ್: ಬಿಲ್ ಬಾಕಿ ಹಿನ್ನೆಲೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಚೆಸ್ಕಾಂ
ವಿದ್ಯುತ್ ಸಂಪರ್ಕ ಕಡಿತ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Nov 10, 2022 | 4:16 PM

Share

ಚಾಮರಾಜನಗರ: ಬಿಲ್ ಬಾಕಿ ಹಿನ್ನೆಲೆ ಚಾಮರಾಜನಗರದ (Chamarajanagar) ಸರ್ಕಾರಿ ಇಂಜಿನಿಯರಿಂಗ್, ಪಾಲಿಟೆಕ್ನಿಕ್ ಕಾಲೇಜ್​​ ವಿದ್ಯುತ್ (electricity) ಸಂಪರ್ಕವನ್ನು ಚೆಸ್ಕಾಂ ಕಡಿತಗೊಳಿಸಿದೆ. ಸರ್ಕಾರಿ ಇಂಜಿನಿಯರಿಂಗ್ ಕಾಲೇಜು 2 ಲಕ್ಷ ರೂ. ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು 82 ಸಾವಿರ ರೂ. ವಿದ್ಯುತ್​ ಬಿಲ್​ ಬಾಕಿಯಿದೆ. ಸದ್ಯ ರಾಜ್ಯದ 16 ಸರ್ಕಾರಿ ಕಾಲೇಜುಗಳಲ್ಲಿ ವಿದ್ಯುತ್ ಇಲ್ಲ. ವಿದ್ಯುತ್ ಸಂಪರ್ಕ ಕಡಿತದಿಂದ ವಿದ್ಯಾರ್ಥಿಗಳಿಗೆ ಸಂಕಷ್ಟ ಎದುರಾಗಿದೆ. ಸರ್ಕಾರದ ನಿರ್ಲಕ್ಷ್ಯದಿಂದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆ ಉಂಟಾಗಿದ್ದು, ಶೀಘ್ರ ವಿದ್ಯುತ್​​ ಸಮಸ್ಯೆ ಪರಿಹರಿಸುವಂತೆ ಸರ್ಕಾರಕ್ಕೆ ಆಗ್ರಹಿಸಲಾಗುತ್ತಿದೆ. ಕೇವಲ ಜನರೇಟರ್​ನಿಂದ ಸಮರ್ಪಕ ವಿದ್ಯುತ್ ಪೂರೈಕೆ ಅಸಾಧ್ಯ. ಎಕ್ಸಾಂ ಹತ್ತಿರವಿದ್ದಾಗ ಈ ರೀತಿ ತೊಂದರೆ ನೀಡಿದರೆ ವ್ಯಾಸಂಗ ಮಾಡೋದು ಹೇಗೆ ಎಂದು ವಿದ್ಯಾರ್ಥಿಗಳು ಅಳಲು ತೊಡಿಕೊಂಡಿದ್ದಾರೆ.

ಮಲ್ಲಯ್ಯನಪುರ ಬಳಿಯ ರಸ್ತೆ, ಹಲವು ಸೇತುವೆಗಳು ಡ್ಯಾಮೇಜ್!

ಕೇಂದ್ರ ಸ್ಥಾನದಿಂದ ಗುಂಡ್ಲುಪೇಟೆ, ಬಂಡೀಪುರ, ಊಟಿ ಹಾಗೂ ಚಾಮರಾಜನಗರದಿಂದ 8 ಕಿ.ಮೀ ದೂರವಿರುವ ವೈದ್ಯಕೀಯ ವಿಜ್ಞಾನ ಕಾಲೇಜು ಆಸ್ಪತ್ರೆಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಗುಂಡಿಮಯವಾಗಿದ್ದು ರಸ್ತೆಯಲ್ಲಿ ಸಂಚರಿಸುವ ಜನರು ತಮ್ಮ ಜೀವ ಕೈಯಲ್ಲಿ ಹಿಡಿದು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೂ ಸಹ ಸಂಬಂಧ ಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಇತ್ತ ತಲೆ ಹಾಕುತ್ತಿಲ್ಲ. ವಾಹನ ಸವಾರರು ರಸ್ತೆಯಲ್ಲಿ ಗುಂಡಿ ಯಾವುದು ರಸ್ತೆ ಯಾವುದು ಎನ್ನುವುದೇ ತಿಳಿಯದಂತಾಗಿದ್ದು ಅನೇಕ ಜನರು ಬಿದ್ದು ಗಾಯ ಮಾಡಿಕೊಂಡಿದ್ದಾರೆ.

ಈ ರಸ್ತೆ ಹಲವು ವರ್ಷಗಳಿಂದಲೂ ಅಭಿವೃದ್ದಿ ಕಂಡಿಲ್ಲ. ಸಚಿವ ವಿ.ಸೋಮಣ್ಣ ಅವರು ಮಾತ್ರ ರಸ್ತೆಯನ್ನು ಮೇಲ್ದರ್ಜೆಗೆ ಏರಿಸುತ್ತೇನೆ ಎಂದು ಬರೀ ಅಶ್ವಾಸನೆ ನೀಡುತ್ತಾರೆ. ಆದರೆ ಈವರೆಗೂ ಯಾವುದೇ ಕೆಲಸ ಆರಂಭವಾಗಿಲ್ಲ. ಅಲ್ಲದೆ ಈ ರಸ್ತೆಯಲ್ಲಿ ಆಸ್ಪತ್ರೆ ಇದ್ದು ಪ್ರತಿನಿತ್ಯ ಅನೇಕ ಅಂಬ್ಯುಲೆನ್ಸ್​ಗಳು ಕೂಡ ಇಲ್ಲಿ ಸಂಚರಿಸುತ್ತವೆ. ಈ ರಸ್ತೆ ಚಿಕ್ಕದಾಗಿರುವುದರಿಂದ ತೊಂದರೆ ಆಗುತ್ತಿದೆ, ಆದಷ್ಟು ಬೇಗ ರಸ್ತೆ ಸರಿಪಡಿಸಿ ಎಂದು ಸ್ಥಳಿಯರು ಒತ್ತಾಯಿಸುತ್ತಿದ್ದಾರೆ.

ಸತತವಾಗಿ ಏಳು ತಿಂಗಳು ಮಳೆಯಾಗಿದೆ. ಮಲ್ಲಯ್ಯನಪುರ ಬಳಿಯ ರಸ್ತೆಯಷ್ಟೇ ಅಲ್ಲದೆ ಹಲವು ಸೇತುವೆಗಳು ಕೂಡ ಡ್ಯಾಮೇಜ್ ಆಗಿವೆ. ಸರ್ಕಾರ ಕೂಡಲೇ ಈ ಬಗ್ಗೆ ಗಮನಹರಿಸುವಂತೆ ಮನವಿ ಮಾಡಿದ್ದೇವೆ. ಸಣ್ಣ ನೀರಾವರಿ ಅಧಿಕಾರಿ, ಉಸ್ತುವಾರಿ ಸಚಿವರ ಗಮನಕ್ಕೂ ತಂದಿದ್ದೇನೆ. ಇಲ್ಲವಾದರೆ ಹೋರಾಟ ಮಾಡುವುದಾಗಿ ಎಚ್ಚರಿಕೆ ಕೊಟ್ಟಿದ್ದೇನೆ ಎಂದು ಶಾಸಕ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಒಟ್ಟಾರೆ ನಿತ್ಯ ನೂರಾರು ವಾಹನಗಳು ಇಲ್ಲಿ ಸಂಚರಿಸುತ್ತೆ. ಗುಂಡಿ ಬಿದ್ದ ರಸ್ತೆಯಿಂದ ನಿತ್ಯ ಅನಾಹುತ ಸಂಭವಿಸುತ್ತಿದೆ. ಇನ್ನಾದರೂ ಅಧಿಕಾರಿಗಳು ಎಚ್ಚೆತ್ತು ರಸ್ತೆ ದುರಸ್ತಿ ಕಾರ್ಯ ಮಾಡುತ್ತಾರಾ ಎಂಬುದು ಕಾದುನೋಡಬೇಕಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:10 pm, Thu, 10 November 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ