ಚಾಮರಾಜನಗರ: ತಮಿಳುನಾಡು ಬೇಟೆಗಾರರು ಮತ್ತು ಕರ್ನಾಟಕ ಅರಣ್ಯ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ
ವನ್ಯ ಜೀವಿಗಳನ್ನು ಬೇಟೆಯಾಡಲು ಬಂದ ತಮಿಳುನಾಡಿನ ಬೇಟೆಗಾರರ ಮೇಲೆ ಕರ್ನಾಟಕ ಅರಣ್ಯ ಸಿಬ್ಬಂದಿ ಗುಂಡಿನ ಪ್ರತಿದಾಳಿ ನಡೆಸಿ ಅಟ್ಟಾಡಿಸಿದ ಘಟನೆಯೊಂದು ಚಾಮರಾಜನಗರದಲ್ಲಿ ನಡೆದಿದೆ. ಎರಡು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಚಾಮರಾಜನಗರ: ತಮಿಳುನಾಡು ಬೇಟೆಗಾರರು (Hunters) ಹಾಗೂ ಕರ್ನಾಟಕ ಅರಣ್ಯ ಇಲಾಖೆ ಸಿಬ್ಬಂದಿ (Karnataka Forest staff) ನಡುವೆ ಗುಂಡಿನ ಚಕಮಕಿ ನಡೆದ ಘಟನೆ ಕರ್ನಾಟಕ ತಮಿಳುನಾಡು ಗಡಿಭಾಗದ ಪಾಲಾರ್ನಲ್ಲಿ (Karnataka-Tamil Nadu Border Palar) ನಡೆದಿದೆ. ಎರಡು ದಿನಗಳ ಹಿಂದೆ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಾವೇರಿ ವನ್ಯಜೀವಿ ವಿಭಾಗದ ಪಾಲಾರ್ ಅರಣ್ಯ ವಲಯಕ್ಕೆ (Palar Forest Range) ಅಕ್ರಮವಾಗಿ ಪ್ರವೇಶಿಸಿ ಕಾಡು ಪ್ರಾಣಿಗಳನ್ನು ಬೇಟೆಯಾಡಲು ಮುಂದಾಗಿದ್ದ ಬೇಟೆಗಾರರು ಅರಣ್ಯ ಸಿಬ್ಬಂದಿಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಕರ್ನಾಟಕ ಅರಣ್ಯ ಸಿಬ್ಬಂದಿ ತಕ್ಕ ಪ್ರತ್ಯುತ್ತರ ನೀಡಿದ್ದಾರೆ.
ಪಾಲಾರ್ ಅರಣ್ಯ ವಲಯದಲ್ಲಿರುವ ವನ್ಯ ಪ್ರಾಣಿಗಳನ್ನು ಬೇಟೆಯಾಡಲು ಬಂದ ಬೇಟೆಗಾರರ ಕಣ್ಣಿಗೆ ಕರ್ನಾಟಕ ಅರಣ್ಯ ಸಿಬ್ಬಂದಿ ಎದುರಾಗಿದ್ದಾರೆ. ಸಿಬ್ಬಂದಿ ಕಂಡು ಬೇಟೆಗಾರರು ಗುಂಡಿನ ದಾಳಿ ನಡೆಸಿದ್ದಾರೆ. ಕೂಡಲೇ ಎಚ್ಚೆತ್ತ ಸಿಬ್ಬಂದಿ ಏಟಿಗೆ ಎದುರೇಟು ಎಂಬಂತೆ ಗುಂಡಿನ ಪ್ರತಿದಾಳಿ ನಡೆಸಿದ್ದಾರೆ. ಈ ವೇಳೆ ಓರ್ವ ಬೇಟೆಗಾರ ಸಾವನಪ್ಪಿರುವ ಶಂಕೆ ವ್ಯಕ್ತವಾಗಿದೆ. ತಮಿಳುನಾಡಿನ ಮೂಲದ ವ್ಯಕ್ತಿ ಶವ ಕಾವೇರಿ ನದಿಯಲ್ಲಿ ಪತ್ತೆಯಾಗಿದೆ.
ಇದನ್ನೂ ಓದಿ: America: ಮಿಚಿಗನ್ ಸ್ಟೇಟ್ ಯೂನಿವರ್ಸಿಟಿ ಕ್ಯಾಂಪಸ್‌ನಲ್ಲಿ ಗುಂಡಿನ ದಾಳಿ: ಒಂದು ಸಾವು, ಅನೇಕರಿಗೆ ಗಾಯ
ವಣ್ಯ ಪ್ರಾಣಿಗಳ ಬೇಟೆಯಾಡಲು ಬಂದಿರುವ ಹಾಗೂ ಸಿಬ್ಬಂದಿಗಳ ಮೇಲೆ ಗುಂಡಿನ ದಾಳಿ ನಡೆಸಿದ ಪ್ರಕರಣ ಸಂಬಂಧ ಕರ್ನಾಟಕದ ಅರಣ್ಯ ಅಧಿಕಾರಿಗಳು ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಪ್ರರಕಣ ದಾಖಲಿಸಿಕೊಂಡಿದ್ದಾರೆ. ಗುಂಡಿನ ದಾಳಿ ಅರಣ್ಯ ಸಿಬ್ಬಂದಿಗಳಿಗಳಿಗೆ ಯಾವುದೇ ಗಾಯವಾಗಿಲ್ಲ ಎಂದು ಮಹದೇಶ್ವರ ಬೆಟ್ಟ ಪೊಲೀಸರು ಮಾಹಿತಿ ನೀಡಿದ್ದಾರೆ. ಕಾವೇರಿ ನದಿಯಲ್ಲಿ ಪತ್ತೆಯಾದ ಮೃತ ದೇಹ ತಮಿಳುನಾಡಿನ ಕೊಳತ್ತೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ