AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಲೆಯಲ್ಲಿ ಕೂದಲಿಲ್ಲವೆಂದು ಪತ್ನಿ ಅಪಹಾಸ್ಯ: ಆತ್ಮಹತ್ಯೆಗೆ ಶರಣಾದ ಪತಿ ಪರಶಿವಮೂರ್ತಿ

ತಲೆಯಲ್ಲಿ ಕೂದಲಿಲ್ಲ ಎಂದು ಪತ್ನಿ ಕಿರುಕುಳಕ್ಕೆ ಪತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಚಾಮರಾಜನಗರ ತಾಲೂಕಿನ ಉಡಿಗಾಲ ಗ್ರಾಮದಲ್ಲಿ ನಡೆದಿದೆ. ಮದುವೆ ಬಳಿಕ ಕೂದಲು ಉದುರಿದ್ದಕ್ಕೆ ಪತ್ನಿ ಗಂಡನನ್ನು ಪದೇ ಪದೇ ನಿಂದಿಸಿದ್ದಾರೆ. ಇದರಿಂದ ಬೇಸತ್ತ ಗಂಡ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್ ನೋಟ್ ಕೂಡ ಬರೆದಿಟ್ಟಿದ್ದಾರೆ.

ತಲೆಯಲ್ಲಿ ಕೂದಲಿಲ್ಲವೆಂದು ಪತ್ನಿ ಅಪಹಾಸ್ಯ: ಆತ್ಮಹತ್ಯೆಗೆ ಶರಣಾದ ಪತಿ ಪರಶಿವಮೂರ್ತಿ
ತಲೆಯಲ್ಲಿ ಕೂದಲಿಲ್ಲವೆಂದು ಪತ್ನಿ ಅಪಹಾಸ್ಯ: ಆತ್ಮಹತ್ಯೆಗೆ ಶರಣಾದ ಪತಿ ಪರಶಿವಮೂರ್ತಿ
ಸೂರಜ್ ಪ್ರಸಾದ್ ಎಸ್ಎನ್
| Edited By: |

Updated on:Mar 16, 2025 | 5:55 PM

Share

ಚಾಮರಾಜನಗರ, ಮಾರ್ಚ್​ 16: ತಲೆಯಲ್ಲಿ ಕೂದಲಿಲ್ಲ ಎಂದು ಪತ್ನಿಯ (Wife) ಕಿರುಕುಳಕ್ಕೆ ಬೇಸತ್ತು ಡೆತ್​ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆಗೆ (death) ಶರಣಾಗಿರುವಂತಹ ಘಟನೆ  ಚಾಮರಾಜನಗರ ತಾಲೂಕಿನ ಉಡಿಗಾಲ ಗ್ರಾಮದಲ್ಲಿ ನಡೆದಿದೆ. ಪರಶಿವಮೂರ್ತಿ(32) ಮೃತ ಪತಿ. ತಲೆಯಲ್ಲಿ ಕೂದಲಿಲ್ಲ ಎಂದು ಪರಶಿವಮೂರ್ತಿಗೆ ಪತ್ನಿ ಮಮತಾ ಅಪಹಾಸ್ಯ ಮಾಡುತ್ತಿದ್ದರು. ಹೀಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಾಮರಾಜನಗರ ಗ್ರಾಮೀಣ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಚಾಮರಾಜನಗರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಕಳೆದ ಎರಡು ವರ್ಷದ ಹಿಂದೆ ಪರಶಿವಮೂರ್ತಿ ಮತ್ತು ಮಮತಾ ಮದುವೆಯಾಗಿದ್ದರು. ವೃತ್ತಿಯಲ್ಲಿ ಪರಶಿವಮೂರ್ತಿ ಲಾರಿ ಚಾಲಕನಾಗಿದ್ದರು. ಮದುವೆ ಬಳಿಕ ಪರಶಿವಮೂರ್ತಿ ಕೂದಲು ಸಂಪೂರ್ಣ ಉದುರಿತ್ತು. ಹೊರಗಡೆ ಹೋದರೆ ನನೆಗೆ ನಾಚಿಕೆಯಾಗುತ್ತೆಂದು ಮಮತಾ ಅಪಹಾಸ್ಯ ಮಾಡುತ್ತಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಯಾದಗಿರಿಯಲ್ಲಿ ಡಬಲ್​ ಮರ್ಡರ್​: 2 ಪ್ರತ್ಯೇಕ ಗ್ಯಾಂಗ್​ನಿಂದ ದಲಿತ ಮುಖಂಡ, ಸಹಚರನ ಕೊಲೆ

ಇದನ್ನೂ ಓದಿ
Image
ಯಾದಗಿರಿ: 2 ಪ್ರತ್ಯೇಕ ಗ್ಯಾಂಗ್​ನಿಂದ ದಲಿತ ಮುಖಂಡ, ಸಹಚರನ ಕೊಲೆ
Image
ಹೆಚ್ಚಿದ ಫೇಕ್ ನ್ಯೂಸ್ ಹಾವಳಿ: ಬೆಂಗಳೂರು, ಉತ್ತರ ಕನ್ನಡ ಮುಂಚೂಣಿಯಲ್ಲಿ
Image
ವೃದ್ಧೆಗೆ 50 ಲಕ್ಷ ರೂ. ವಂಚಿಸಿದ ಬ್ಯಾಂಕ್ ಡೆಪ್ಯೂಟಿ ಮ್ಯಾನೇಜರ್
Image
ಕಾವೇರಿ ನದಿಯಲ್ಲಿ ಘೋರ ದುರಂತ: ತಾತ ಸೇರಿ ಇಬ್ಬರು ಮೊಮ್ಮಕ್ಕಳು ಜಲಸಮಾಧಿ

ಸುಳ್ಳು ವರದಕ್ಷಿಣೆ ಕಿರುಕುಳ ಕೇಸ್ ಸಹ ಮಮತಾ ದಾಖಲಿಸಿದ್ದು, ಪರಶಿವಮೂರ್ತಿಯನ್ನ ಜೈಲಿಗೂ ಕಳುಹಿಸಿದ್ದರು. ಇಷ್ಟೇ ಅಲ್ಲದೆ ಸೋಶಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿದ್ದ ಮಮತ, ಮದುವೆಯಾಗಿದ್ದರೂ ತಾಳಿ ಇಲ್ಲದ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದರು. ಇದೇ ವಿಚಾರಕ್ಕೆ ಮನೆಯಲ್ಲಿ ಪದೇಪದೆ ಜಗಳ ಆಗುತ್ತಿತ್ತು. ಹೀಗಾಗಿ ಹೆಂಡತಿಯ ನವರಂಗಿ ಆಟಕ್ಕೆ ರೋಸಿ ಹೋಗಿದ್ದ ಪರಶಿವಮೂರ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರ ಮಾಡಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು: ಇಬ್ಬರು ಸ್ಥಳದಲ್ಲೇ ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಮೂವರಿಗೆ ಗಂಭೀರ ಗಾಯಗಳಾಗಿರುವಂತಹ ಘಟನೆ ಚಾಮರಾಜನಗರ ತಾಲೂಕಿನ ಪುಣಜನೂರು ಚೆಕ್​ಪೋಸ್ಟ್ ಬಳಿ ನಡೆದಿದೆ.

ಮೈಸೂರು ಮೂಲದ ನಂದನ್(24), ಜೀವನ್(25) ಮೃತರು. ಸುನಿಲ್, ಶಶಾಂಕ್, ಧನುಷ್​​ಗೆ ಸಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಚಾಮರಾಜನಗರ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಗೃಹಿಣಿ ಅನುಮಾನಾಸ್ಪದವಾಗಿ ಸಾವು

ನೇಣುಬಿಗಿದ ಸ್ಥಿತಿಯಲ್ಲಿ ಗೃಹಿಣಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವಂತಹ ಘಟನೆ ರಾಯಚೂರು ಜಿಲ್ಲೆಯ ಸಿರವಾರ ತಾಲ್ಲೂಕಿನ ಕಡಿದಿನ್ನಿ ಗ್ರಾಮದಲ್ಲಿ ನಡೆದಿದೆ. ನೇಣುಬಿಗಿದ ಸ್ಥಿತಿಯಲ್ಲಿ ‌ಗೃಹಿಣಿ ನೇತ್ರಾವತಿ(33) ಶವ ಪತ್ತೆ ಆಗಿದೆ. ಪತಿ ಶರಣಬಸವ ಕೊಲೆಗೈದ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಬೆಂಗಳೂರು: ಲಕ್ಕಿ ಭಾಸ್ಕರ್ ಸಿನಿಮಾ ಮಾದರಿಯಲ್ಲಿ ವೃದ್ಧೆಗೆ 50 ಲಕ್ಷ ರೂ. ವಂಚಿಸಿದ ಬ್ಯಾಂಕ್ ಡೆಪ್ಯೂಟಿ ಮ್ಯಾನೇಜರ್

ಪತ್ನಿ ಖಾತೆಯಲ್ಲಿದ್ದ ಹಣ ಬಳಕೆ ಮಾಡಿಕೊಂಡಿದ್ದ ಪತಿ ಶರಣಬಸವ, ಇದೇ ವಿಚಾರಕ್ಕೆ ದಂಪತಿ ನಡುವೆ ಜಗಳವಾಗಿತ್ತು. ಹೀಗಾಗಿ ನೇತ್ರಾವತಿ ಕೊಲೆಗೈದು ಬಳಿಕ ನೇಣು ಬಿಗಿದಿರುವ ಆರೋಪ ಮಾಡಲಾಗಿದೆ. ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:47 pm, Sun, 16 March 25

Follow Us
ಸೂರಜ್ ಪ್ರಸಾದ್ ಎಸ್ಎನ್
ಸೂರಜ್ ಪ್ರಸಾದ್ ಎಸ್ಎನ್

ಸೂರಜ್ ಪ್ರಸಾದ್ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದಾರೆ. 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದರು. ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದಾರೆ. ಟಿವಿ9 ಕನ್ನಡ ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು ಇವರ ಹವ್ಯಾಸ.

Read More
ಚಾಮುಂಡಿ ಬೆಟ್ಟ ರಥೋತ್ಸವ: ರಥ ಎಳೆಯುವ ಮೂಲಕ ಯದುವೀರ್ ಒಡೆಯರ್ ಚಾಲನೆ
ಚಾಮುಂಡಿ ಬೆಟ್ಟ ರಥೋತ್ಸವ: ರಥ ಎಳೆಯುವ ಮೂಲಕ ಯದುವೀರ್ ಒಡೆಯರ್ ಚಾಲನೆ
ಈ ಬಾರಿ ಜಟ್ಟಿ ಕಾಳಗ ಸ್ಥಗಿತ ಆಗಿದ್ಯಾಕೆ? ರಾಜಮಾತೆ ಏನಂದ್ರು ನೋಡಿ
ಈ ಬಾರಿ ಜಟ್ಟಿ ಕಾಳಗ ಸ್ಥಗಿತ ಆಗಿದ್ಯಾಕೆ? ರಾಜಮಾತೆ ಏನಂದ್ರು ನೋಡಿ
ಬೆಂಗಳೂರು-ದೇವನಹಳ್ಳಿ ಹೆದ್ದಾರಿಯಲ್ಲಿ ಬೈಕ್ ವ್ಹೀಲಿಂಗ್ ಕಿರಿಕಿರಿ
ಬೆಂಗಳೂರು-ದೇವನಹಳ್ಳಿ ಹೆದ್ದಾರಿಯಲ್ಲಿ ಬೈಕ್ ವ್ಹೀಲಿಂಗ್ ಕಿರಿಕಿರಿ
ಬಿಗ್ ಬಾಸ್: ನಾಮಿನೇಟ್ ಆದವರಲ್ಲಿ ಈ ವಾರ ಮನೆಯಿಂದ ಹೊರಹೋಗುವವರು ಯಾರು?
ಬಿಗ್ ಬಾಸ್: ನಾಮಿನೇಟ್ ಆದವರಲ್ಲಿ ಈ ವಾರ ಮನೆಯಿಂದ ಹೊರಹೋಗುವವರು ಯಾರು?
ಮೇಷ, ಕರ್ಕಾಟಕ ರಾಶಿಗೆ ಭಾರಿ ಧನಯೋಗ
ಮೇಷ, ಕರ್ಕಾಟಕ ರಾಶಿಗೆ ಭಾರಿ ಧನಯೋಗ
ಎಲ್‌ಎಸಿಯಲ್ಲಿ ಸೈನ್ಯದ ಗಸ್ತು ಮಾದರಿ ಬದಲಾವಣೆ; ಚೀನಾ ನಡೆಗೆ ಭಾರತ ಆಕ್ಷೇಪ
ಎಲ್‌ಎಸಿಯಲ್ಲಿ ಸೈನ್ಯದ ಗಸ್ತು ಮಾದರಿ ಬದಲಾವಣೆ; ಚೀನಾ ನಡೆಗೆ ಭಾರತ ಆಕ್ಷೇಪ
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ