ವಿಧಾನಸಭಾ ಚುನಾವಣೆ ಯಾವಾಗ ಬರುತ್ತೊ ಗೊತ್ತಿಲ್ಲ, ನಿಮ್ಮ ಆಶೀರ್ವಾದ ಬೇಕು: ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ
ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಚಾಮರಾಜನಗರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಶನಿವಾರ ಭೇಟಿ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ಮುಂದೆ ಯಾವಾಗ ವಿಧಾನಸಭಾ ಚುನಾವಣೆ ಬರುತ್ತೆ ಗೊತ್ತಿಲ್ಲ ಕಾರ್ಯಕರ್ತರೆ ನೀವು ಆಶೀರ್ವಾದ ಮಾಡಬೇಕು. 130 ರಿಂದ 140 ಸ್ಥಾನವನ್ನ ಭಾರತೀಯ ಜನತಾ ಪಾರ್ಟಿಗೆ ನೀಡಬೇಕು ಎಂದು ಹೇಳಿದ್ದಾರೆ.
ಚಾಮರಾಜನಗರ, ಜನವರಿ 06: ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಚಾಮರಾಜನಗರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ಶನಿವಾರ ಭೇಟಿ ನೀಡಿದ್ದಾರೆ. ನಗರದ ಸಂತೇಮರಳ್ಳಿ ಸರ್ಕಲ್ನಲ್ಲಿ ಬಿಜೆಪಿ ಕಾರ್ಯಕರ್ತರಿಂದ ಅದ್ಧೂರಿ ಸ್ವಾಗತ ಮಾಡಲಾಗಿದೆ. ಈ ವೇಳೆ ಮಾಜಿ ಶಾಸಕರಾದ ಎನ್.ಮಹೇಶ್, ನಿರಂಜನ್ ಕುಮಾರ್ ಉಪಸ್ಥಿತರಿದ್ದರು. ಕಾರ್ಯಕರ್ತರ ಸಭೆ ಬಳಿಕ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದೆ ಯಾವಾಗ ವಿಧಾನಸಭಾ ಚುನಾವಣೆ ಬರುತ್ತೆ ಗೊತ್ತಿಲ್ಲ ಕಾರ್ಯಕರ್ತರೆ ನೀವು ಆಶೀರ್ವಾದ ಮಾಡಬೇಕು ಎಂದಿದ್ದಾರೆ.
130 ರಿಂದ 140 ಸ್ಥಾನವನ್ನ ಭಾರತೀಯ ಜನತಾ ಪಾರ್ಟಿಗೆ ನೀಡಬೇಕು. ಚಾಮರಾಜನಗರದ 4 ವಿಧಾನಸಭಾ ಕ್ಷೇತ್ರದಲ್ಲೂ ಕಮಲ ಅರಳಬೇಕು ನಮ್ಮ ಅಭ್ಯರ್ಥಿ ಗೆಲ್ಲಬೇಕು ಎಂದು ಹೇಳಿದ್ದಾರೆ.
ಅಧಿಕಾರಕ್ಕೆ ಬಂದ ಮೇಲೆ ನಾನು ಎಂದು ಓಡಾಡುತ್ತಾರೆ
ನಮ್ಮ ಕೆಲ ಗೊಂದಲಗಳಿಂದ ವಿಧಾನಸಭೆ ಚುನಾವಣೆಯಲ್ಲಿ ಸೋಲಾಯಿತು. ಚುನಾವಣೆ ಸಂದರ್ಭದಲ್ಲಿ ಪಕ್ಷಕ್ಕಾಗಿ ಕಾರ್ಯಕರ್ತರು ದುಡಿಯುತ್ತಾರೆ. ಆದರೆ ಕೆಲವು ನಮ್ಮ ನಾಯಕರು ಚುನಾವಣೆ ಬಂದಾಗ ನಾನು ಅಂತಾರೆ, ಅಧಿಕಾರಕ್ಕೆ ಬಂದ ಮೇಲೆ ನಾನು ಎಂದು ಓಡಾಡುತ್ತಾರೆ ಎಂದು ಪಕ್ಷದ ಹಿರಿಯ ನಾಯಕರ ವಿರುದ್ಧವೇ ಮಾರ್ಮಿಕ ನುಡಿದಿದ್ದಾರೆ.
ಇದನ್ನೂ ಓದಿ: ಬಿಜೆಪಿಗರು ನನ್ನನ್ನೂ ಬಂಧಿಸಿ ಎನ್ನುತ್ತಿರುವುದು ತಾವು ಮಾಡಿದ ಅಕ್ರಮಗಳ ಪ್ರಾಯಶ್ಚಿತ್ತಕ್ಕಾಗಿಯೇ?: ಕಾಂಗ್ರೆಸ್ ಪ್ರಶ್ನೆ
ಮೂರು ರಾಜ್ಯಗಳಲ್ಲಿ ಹೇಗೆ ಬಿಜೆಪಿ ಗೆದ್ದಿದೆ ಅನ್ನೋದು ಕಣ್ಮುಂದೆ ಇದೆ. ಲೋಕಸಭೆ ಚುನಾವಣೆಯಲ್ಲಿ 28ಕ್ಕೆ 28 ಕ್ಷೇತ್ರಗಳಲ್ಲೂ BJP ಗೆಲ್ಲಬೇಕು. ಮೋದಿ ಅವಧಿಯಲ್ಲಿ ಒಂದೇ ಒಂದು ಹಗರಣ ನಡೆದಿಲ್ಲ. ಕೇಂದ್ರದ ಬಿಜೆಪಿಯ ಸರ್ಕಾರ ಭ್ರಷ್ಟಾಚಾರ ರಹಿತ ಆಡಳಿತ ನೀಡಿದೆ.
ಚಾಮರಾಜನಗರ ಕ್ಷೇತ್ರದ ಶಾಸಕ ಪುಟ್ಟರಂಗಶೆಟ್ಟಿ ಸಿದ್ದರಾಮಯ್ಯಗೆ ಆಪ್ತರು. 7 ತಿಂಗಳಿಂದ ಕ್ಷೇತ್ರಕ್ಕೆ ಒಂದೇ ಒಂದು ರೂಪಾಯಿ ಅನುದಾನ ತಂದಿಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.
ಬೆಳಗಾವಿ ದಲಿತ ಮಹಿಳೆಯನ್ನ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣ ನೆನೆದ ಬಿವೈ ವಿಜಯೇಂದ್ರ
ಚಾಮರಾಜನಗರದಲ್ಲಿ ಮತ್ತೆ ಬೆಳಗಾವಿ ದಲಿತ ಮಹಿಳೆಯನ್ನ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣವನ್ನು ನೆನೆದ ಬಿವೈ ವಿಜಯೇಂದ್ರ, ಬೆಳಗಾವಿ ಅಧಿವೇಶನ ನಡೆಯುವ ಸಂದರ್ಭದಲ್ಲಿ ಘಟನೆ ನಡೆದು ಹೋಯಿತು. ಕನಿಷ್ಠ ಪಕ್ಷ ಮಾನವೀಯತೆಗಾಗಿಯಾದರು ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಲಿಲ್ಲ. ಇದೇ ವೇಳೆ ಯಡಿಯೂರಪ್ಪ ಇದ್ದಿದ್ದರೆ ಭೇಟಿ ನೀಡಿ ಮಹಿಳೆಗೆ ಸಾಂತ್ವನ ಹೇಳದೆ ಇರುತ್ತಿದ್ದರಾ ಎಂದಿದ್ದಾರೆ.
ಇದನ್ನೂ ಓದಿ: ಇಳಿವಯಸ್ಸಿನಲ್ಲಿ ಕೋಮುವಾದಿ ಕಿರೀಟ ಧರಿಸಿದ ಹತಾಶೆಯಲ್ಲಿ ದೇವೇಗೌಡರು: ಸಿಎಂ ಸಿದ್ದರಾಮಯ್ಯ ವ್ಯಂಗ್ಯ
ಚಾಮರಾಜನಗರಕ್ಕೆ ನಾನು ಬರುತ್ತೇನೆ ಅಂತ ನಮ್ಮ ಫ್ಲೆಕ್ಸ್ ಬ್ಯಾನರ್ಸ್ಗಳನ್ನ ತೆಗೆದು ಹಾಕಿದರು. 31 ವರ್ಷದ ಹಿಂದಿನ ಹಳೇ ಪ್ರಕರಣವನ್ನ ರೀ ಓಪನ್ ಮಾಡಿ ಹಿಂದೂ ಕಾರ್ಯಕರ್ತರ ವಿರುದ್ಧ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ. ಈಗಾಗಲೇ ಮೂರು ಡಿಸಿಎಂ ಸ್ಥಾನ ಸೃಷ್ಠಿ ಅಂತ ಓಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.