AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ; ಸೈಕಲ್ ಸವಾರ ಸ್ಥಳದಲ್ಲೇ ಸಾವು

ಪ್ರತ್ಯೇಕ ಘಟನೆ: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ(Kollegala) ತಾಲೂಕಿನ ಕಾಮಗೆರೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್(KSRTC Bus) ಡಿಕ್ಕಿಯಾಗಿ ಸೈಕಲ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಇತ್ತ ನೆಲಮಂಗಲ ತಾಲೂಕಿನ ದಾಬಸ್‌ಪೇಟೆ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಓವರ್‌ಟೇಕ್‌ ಮಾಡುವಾಗ ಎರಡು ಕಾರುಗಳ ಮಧ್ಯೆ ಡಿಕ್ಕಿಯಾದ ಘಟನೆ ನಡೆದಿದೆ.

ಚಾಮರಾಜನಗರ: ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ; ಸೈಕಲ್ ಸವಾರ ಸ್ಥಳದಲ್ಲೇ ಸಾವು
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಸೈಕಲ್ ಸವಾರ ಸ್ಥಳದಲ್ಲೇ ಸಾವು
ಸೂರಜ್ ಪ್ರಸಾದ್ ಎಸ್.ಎನ್
| Edited By: ಕಿರಣ್ ಹನುಮಂತ್​ ಮಾದಾರ್|

Updated on:Mar 05, 2024 | 7:07 PM

Share

ಚಾಮರಾಜನಗರ, ಮಾ.05: ಕೆಎಸ್‌ಆರ್‌ಟಿಸಿ ಬಸ್(KSRTC Bus) ಡಿಕ್ಕಿಯಾಗಿ ಸೈಕಲ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ(Kollegala) ತಾಲೂಕಿನ ಕಾಮಗೆರೆಯಲ್ಲಿ ನಡೆದಿದೆ. ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಕೊಳ್ಳೇಗಾಲ ನಿವಾಸಿ ನಿಂಗಪ್ಪ(60) ಮೃತ ರ್ದುದೈವಿ. ಮಂಡ್ಯ ಜಿಲ್ಲೆಯ ನಾಗಮಂಗಲ ಡಿಪೋಗೆ ಸೇರಿದ ಬಸ್ ಡಿಕ್ಕಿಯಾಗಿ ಈ ದುರ್ಘಟನೆ ನಡೆದಿದೆ. ಈ ಕುರಿತು ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನ ಕೊಳ್ಳೆಗಾಲ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಕಾರುಗಳ ಮಧ್ಯೆ ಡಿಕ್ಕಿ; ಮೂವರು ಪೊಲೀಸ್ ಸಿಬ್ಬಂದಿ ಅದೃಷ್ಟವಶಾತ್‌ ಪಾರು

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್‌ಪೇಟೆ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಓವರ್‌ಟೇಕ್‌ ಮಾಡುವಾಗ ಎರಡು ಕಾರುಗಳ ಮಧ್ಯೆ ಡಿಕ್ಕಿಯಾದ ಘಟನೆ ನಡೆದಿದೆ. ಈ ವೇಳೆ ಶೇಷಾದ್ರಿಪುರಂ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಯದುಬಾಬು ಸೇರಿ ಮೂವರು ಪೊಲೀಸ್ ಸಿಬ್ಬಂದಿ ಅದೃಷ್ಟವಶಾತ್‌ ಪಾರಾಗಿದ್ದರೆ, ಮತ್ತೊಂದು ಕಾರಿನಲ್ಲಿದ್ದ ಮಹೇಶ್‌ ಎಂಬುವವರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ. ಇನ್ನು ಅಪಘಾತದಿಂದ ಕಾರುಗಳು ಜಖಂ ಆಗಿದ್ದು,  ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ಕಾಲೇಜ್​ ಬಸ್‌ಗೆ ಹಿಂಬದಿಯಿಂದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ: ವಿದ್ಯಾರ್ಥಿಗಳು ಸೇರಿದಂತೆ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ರಾಯಚೂರು-ತೆಲಂಗಾಣ ಮಧ್ಯದ ಕೃಷ್ಣಾ ಸೇತುವೆ ಮೇಲೆ 2 ಬೈಕ್​ಗಳ ನಡುವೆ ಅಪಘಾತ

ರಾಯಚೂರು: ರಾಯಚೂರು-ತೆಲಂಗಾಣ ಮಧ್ಯದ ಕೃಷ್ಣಾ ಸೇತುವೆ ಮೇಲೆ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ರಾಯಚೂರು ತಾಲ್ಲೂಕಿನಲ್ಲಿ ಶಕ್ತಿನಗರ ಬಳಿಯ ಕೃಷ್ಣಾ ಬ್ರಿಡ್ಜ್ ಮೇಲೆ ನಡೆದಿದೆ. ಸಧ್ಯ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ರಸ್ತೆ ದುರಸ್ಥಿ ಬಳಿಕ ಮಾರ್ಚ್ 2 ರಂದು ಪುನರಾರಂಭವಾಗಿದ್ದ ಅಂತರರಾಜ್ಯ ಸೇತುವೆ ಇದಾಗಿತ್ತು. ಅತೀ ವೇಗವಾಗಿ ಹೊರಟಿದ್ದ ಯುವಕರ ಬೈಕ್ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ. ರಾಯಚೂರಿನ ಶಕ್ತಿನಗರ ಹಾಗೂ ತೆಲಂಗಾಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:07 pm, Tue, 5 March 24

Follow Us
ಸೂರಜ್ ಪ್ರಸಾದ್ ಎಸ್.ಎನ್
ಸೂರಜ್ ಪ್ರಸಾದ್ ಎಸ್.ಎನ್

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ