AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ಬೋನಿಗೆ ಬಿದ್ದ ನರಭಕ್ಷಕ ಚಿರತೆ: ಬಾಲಕನನ್ನು ಕೊಂದಿದ್ದ ಚಿರತೆ ಇದೇನಾ?

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ನಾಗಮಲೆ ಅರಣ್ಯ ಪ್ರದೇಶದಲ್ಲಿ ಹೆಣ್ಣು ಚಿರತೆ ಕೊನೆಗೂ ಇಂಡಿಗನತ್ತ ಹಾಡಿ ಬಳಿ ಇರಿಸಿದ್ದ ಬೋನಿನಲ್ಲಿ ಸೆರೆಯಾಗಿದೆ. ಕಳೆದ 15 ದಿನಗಳಿಂದ ಅರಣ್ಯ ಇಲಾಖೆ ಹಗಲಿರುಳು ನಡೆಸಿದ ಬೃಹತ್ ಕಾರ್ಯಾಚರಣೆ ಯಶಸ್ವಿಯಾಗಿದೆ. ಬಾಲಕನನ್ನು ಕೊಂದಿದ್ದು ಇದೇ ಚಿರತೆಯಾ ಎಂದು ಖಚಿತಪಡಿಸಿಕೊಳ್ಳಲು ಸ್ಯಾಂಪಲ್‌ಗಳನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದ್ದು, ಸದ್ಯ ಚಿರತೆಯನ್ನು ಬನ್ನೇರುಘಟ್ಟಕ್ಕೆ ಸ್ಥಳಾಂತರಿಸಲಾಗುತ್ತಿದೆ.

ಕೊನೆಗೂ ಬೋನಿಗೆ ಬಿದ್ದ ನರಭಕ್ಷಕ ಚಿರತೆ: ಬಾಲಕನನ್ನು ಕೊಂದಿದ್ದ ಚಿರತೆ ಇದೇನಾ?
ಕೊನೆಗೆ ಕ್ಯಾಪ್ಚರ್ ಆಯ್ತು ನರಭಕ್ಷಕ ವ್ಯಾಘ್ರ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:May 24, 2026 | 3:34 PM

Share

ಚಾಮರಾಜನಗರ, ಮೇ 24: ಜಿಲ್ಲೆಯಲ್ಲಿ ಚಿರತೆಯ ಅಟ್ಟಹಾಸ ಮಿತಿ ಮೀರಿದೆ. 15 ದಿನಗಳ ಹಿಂದೆ ನಾಗಮಲೆ ಅರಣ್ಯ ಪ್ರದೇಶದಲ್ಲಿ ಪಾದಯಾತ್ರಿ ಬಾಲಕ ಚಿರತೆ  (Cheetah) ದಾಳಿಗೆ ಬಲಿಯಾಗಿದ್ದ. ಈ ಹಿನ್ನೆಲೆ ಕಳೆದ 15 ದಿನಗಳ ನಿರಂತರ ಕಾರ್ಯಾಚರಣೆಯ ಬಳಿಕ ಈ ಪ್ರಾಣಿ ಕೊನೆಗೂ ಅರಣ್ಯ ಇಲಾಖೆಯ ಬಲೆಗೆ ಬಿದ್ದಿದೆ. ಜಿಲ್ಲೆಯ ಹನೂರು ತಾಲೂಕಿನ ಇಂಡಿಗನತ್ತ ಹಾಡಿ ಬಳಿ ಇಟ್ಟಿದ್ದ ಬೋನಿನಲ್ಲಿ ಹೆಣ್ಣು ಚಿರತೆಯು ಸೆರೆಯಾಗಿದ್ದು, ಕಾಡಂಚಿನ ಗ್ರಾಮಸ್ಥರು ಹಾಗೂ ಮಲೆ ಮಹದೇಶ್ವರ ಬೆಟ್ಟದ ಭಕ್ತರು ನಿಟ್ಟುಸಿರು ಬಿಟ್ಟಿದ್ದಾರೆ. ಆದರೆ ಬಾಲಕನನ್ನು ಕೊಂದಿದ್ದು ಇದೇ ಚಿರತೆ ಎಂಬುದಕ್ಕೆ ಸದ್ಯಕ್ಕೆ ಯಾವ ಸಾಕ್ಷಿಯೂ ಇಲ್ಲದ ಕಾರಣ ಚಿರತೆ ಸ್ಯಾಂಪಲ್ ಕಲೆಕ್ಟ್ ಮಾಡಿ FSLಗೆ ಕಳುಹಿಸಲಾಗಿದೆ.

ಮುಖ್ಯಾಂಶಗಳು

  • ಹನೂರು ತಾಲೂಕಿನ ಇಂಡಿಗನತ್ತ ಹಾಡಿಯಲ್ಲಿ ನರಭಕ್ಷಕ ಹೆಣ್ಣು ಚಿರತೆ ಕೊನೆಗೂ ಸೆರೆಯಾಗಿದೆ.
  • ಬಾಲಕನನ್ನು ಕೊಂದ ಚಿರತೆ ಇದೇನಾ ಎಂದು ತಿಳಿಯಲು ಎಫ್‌ಎಸ್‌ಎಲ್‌ಗೆ ಸ್ಯಾಂಪಲ್ ರವಾನೆ.
  • ಸೆರೆಯಾದ ಚಿರತೆಯನ್ನು ಬೆಂಗಳೂರಿನ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನಕ್ಕೆ ಸ್ಥಳಾಂತರಿಸಲಾಗುವುದು.

ಹಗಲಿರುಳೆನ್ನದೆ ನಡೆಸಿದ್ದ ಕಾರ್ಯಾಚರಣೆ ಕೊನೆಗೂ ಸಕ್ಸಸ್

ಕೆಲ ದಿನಗಳ ಹಿಂದೆ ಹರ್ಷಿತ್ ಎಂಬ ಬಾಲಕ ತನ್ನ ಪೋಷಕರೊಂದಿಗೆ ಮಲೆ ಮಹದೇಶ್ವರ ಬೆಟ್ಟದಿಂದ ನಾಗಮಲೆಗೆ ಹರಕೆ ತೀರಿಸಲು ಪಾದಯಾತ್ರೆ ಕೈಗೊಂಡಿದ್ದ. ಮುಂಜಾನೆ ಸುಮಾರು 7 ಗಂಟೆಯ ವೇಳೆಗೆ ದಟ್ಟ ಅರಣ್ಯದ ಹಾದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಪೊದೆಯಲ್ಲಿ ಹೊಂಚು ಹಾಕಿದ್ದ ಚಿರತೆ ಕ್ಷಣಾರ್ಧದಲ್ಲಿ ಬಾಲಕನ ಮೇಲೆ ದಾಳಿ ಮಾಡಿ ಕತೆ ಮುಗಿಸಿತ್ತು.

ಅಂದಿನಿಂದ ಮಲೆ ಮಹದೇಶ್ವರ ವನ್ಯಜೀವಿಧಾಮ ಹಾಗೂ ಕಾವೇರಿ ವೈಲ್ಡ್ ಲೈಫ್ ಸಿಬ್ಬಂದಿ ಜಂಟಿಯಾಗಿ ಈ ಬೃಹತ್ ಕಾರ್ಯಾಚರಣೆ ನಡೆಸಿದ್ದರು. ಸುಮಾರು 30 ಮಂದಿ ಚಿರತೆ ತಜ್ಞರು (Leopard Experts), ಶಾರ್ಪ್ ಶೂಟರ್ಸ್ ಹಾಗೂ ಅರಣ್ಯ ವೀಕ್ಷಕರು (Watchers) ಕಳೆದ ಎರಡು ವಾರಗಳಿಂದ ಹಗಲಿರುಳು ದಟ್ಟ ಅರಣ್ಯದಲ್ಲಿ ಕೂಂಬಿಂಗ್ ನಡೆಸುತ್ತಿದ್ದರು. ಈ ಕೂಂಬಿಂಗ್ ಕಾರ್ಯಾಚರಣೆ ನಡೆಯುತ್ತಿದ್ದ ವೇಳೆಯೂ ಚಿರತೆ ಬರೋಬ್ಬರಿ 5 ಕ್ಕೂ ಹೆಚ್ಚು ಕುರಿ ಮತ್ತು ಮೇಕೆಗಳ ಮೇಲೆ ದಾಳಿ ನಡೆಸಿ ಕೊಂದು ತಿನ್ನುವ ಮೂಲಕ ಅರಣ್ಯ ಸಿಬ್ಬಂದಿಯ ನಿದ್ದೆಗೆಡಿಸಿತ್ತು.

ನಾಲ್ಕು ಕಡೆಗಳಲ್ಲಿ ಕೇಜ್

ಚಿರತೆ ಹಾವಳಿ ತಡೆಯಲು ಅರಣ್ಯ ಇಲಾಖೆಯು ಇಂಡಿಗನತ್ತ, ನಾಗಮಲೆ, ಮೆಂದಾರೆ ಸೇರಿದಂತೆ ಒಟ್ಟು ನಾಲ್ಕು ಆಯಕಟ್ಟಿನ ಜಾಗಗಳಲ್ಲಿ ಬೋನುಗಳನ್ನು (Cages) ಇಟ್ಟಿತ್ತು. ಈ ಪೈಕಿ ಇಂಡಿಗನತ್ತ ಹಾಡಿಯ ಬಳಿ ಇರಿಸಲಾಗಿದ್ದ ವಿಶೇಷ ‘ತುಮಕೂರು ಕೇಜ್’ನಲ್ಲಿ ಶ್ವಾನವೊಂದನ್ನು ಕಟ್ಟಲಾಗಿತ್ತು. ಇಂದು ಮುಂಜಾನೆ ಆ ಶ್ವಾನವನ್ನು ಬೇಟೆಯಾಡಲು ಬಂದ ಚಿರತೆಯು ಬೋನಿನೊಳಗೆ ಪ್ರವೇಶಿಸುತ್ತಿದ್ದಂತೆ ಲಾಕ್ ಆಗಿದೆ. ಈ ಕುರಿತು ಕಾವೇರಿ ವನ್ಯಜೀವಿಧಾಮದ ಡಿಸಿಎಫ್ (DCF) ಸುರೇಂದ್ರ ಅವರು ಟಿವಿ9 ವಾಹಿನಿಗೆ ಅಧಿಕೃತ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ ಮಾದಪ್ಪನ ಬೆಟ್ಟದಲ್ಲಿ ನರಭಕ್ಷಕನ ಅಟ್ಟಹಾಸ: ನಾಗಮಲೆ ಹಾದಿಯಲ್ಲಿ ಬಾಲಕನನ್ನೇ ಕೊಂದು ತಿಂದ ಚಿರತೆ!

ಚಿರತೆ ಸ್ಯಾಂಪಲ್ ಟೆಸ್ಟ್

ಬೋನಿನಲ್ಲಿ ಸಿಲುಕಿರುವ ಚಿರತೆಯೇ ನಾಗಮಲೆಯಲ್ಲಿ ಹರ್ಷಿತ್ ಎಂಬ ಬಾಲಕನನ್ನು ಕೊಂದ ನರಭಕ್ಷಕನಾ ಎಂಬುದನ್ನು ಖಚಿತಪಡಿಸಿಕೊಳ್ಳಲು ಅರಣ್ಯ ಸಿಬ್ಬಂದಿ ಮುಂದಾಗಿದ್ದಾರೆ. ಇದಕ್ಕಾಗಿ ಸೆರೆಯಾದ ಚಿರತೆಯ ಲಾಲಾರಸ, ಮಲ ಮತ್ತು ಮೂತ್ರದ ಸ್ಯಾಂಪಲ್‌ಗಳನ್ನು ಸಂಗ್ರಹಿಸಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (FSL) ಕಳುಹಿಸಿಕೊಡಲಾಗುತ್ತಿದೆ. ಸದ್ಯಕ್ಕೆ ಈ ಚಿರತೆಯನ್ನು ಬೆಂಗಳೂರಿನ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನಕ್ಕೆ ಸ್ಥಳಾಂತರಿಸಲು ಸಿಬ್ಬಂದಿ ಸಿದ್ಧತೆ ಮಾಡಿಕೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:08 pm, Sun, 24 May 26

Follow Us
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್
ಚಿನ್ನಯ್ಯ ತಮ್ಮ ಬಳಿ ಹೇಳಿದ್ದೇನು? ಬಹಿರಂಗಪಡಿಸಿದ ಪ್ರಕಾಶ್ ರೈ
ಚಿನ್ನಯ್ಯ ತಮ್ಮ ಬಳಿ ಹೇಳಿದ್ದೇನು? ಬಹಿರಂಗಪಡಿಸಿದ ಪ್ರಕಾಶ್ ರೈ
ಎದೆ ಉರಿ ಕಾಣಿಸಿಕೊಂಡು ನಾಲ್ಕು ವರ್ಷದ ಬಾಲಕ ವೈಷ್ಣವ್ ಸಾವು
ಎದೆ ಉರಿ ಕಾಣಿಸಿಕೊಂಡು ನಾಲ್ಕು ವರ್ಷದ ಬಾಲಕ ವೈಷ್ಣವ್ ಸಾವು
ಬೌರಿಂಗ್ ಆಸ್ಪತ್ರೆ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು!
ಬೌರಿಂಗ್ ಆಸ್ಪತ್ರೆ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು!
ಗ್ರೈಂಡರ್​​​ನಿಂದ ವಿದ್ಯುತ್​ ಪ್ರವಹಿಸಿ 4 ವರ್ಷದ ಬಾಲಕಿ ಸಾವು
ಗ್ರೈಂಡರ್​​​ನಿಂದ ವಿದ್ಯುತ್​ ಪ್ರವಹಿಸಿ 4 ವರ್ಷದ ಬಾಲಕಿ ಸಾವು